AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಜಗದೀಶ್ ಅಫ್ಲೆ ಅವರನ್ನು ಹೊಸ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಐಐಟಿ ಪದವೀಧರರಾದ ಅಫ್ಲೆ, ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದು, ರಾಮ ಮಂದಿರ ನಿರ್ಮಾಣದಲ್ಲಿ ವೇತನವಿಲ್ಲದೆ ಸೇವೆ ಸಲ್ಲಿಸಿದ್ದಾರೆ. ಟ್ರಸ್ಟ್‌ನ ಆಡಳಿತಾತ್ಮಕ ಸುಧಾರಣೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಇಒ ಆಯ್ಕೆ ಪ್ರಕ್ರಿಯೆಯೂ ನಡೆಯುತ್ತಿದ್ದು, ಟ್ರಸ್ಟ್‌ನ ಹಣಕಾಸು ನಿರ್ವಹಣೆಯಲ್ಲಿ ಅಫ್ಲೆ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಮ ಮಂದಿರ
ನಯನಾ ರಾಜೀವ್
|

Updated on: Jul 29, 2026 | 8:47 AM

Share

ಅಯೋಧ್ಯೆ, ಜುಲೈ 29: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣ ಹಾಗೂ ಆಡಳಿತಾತ್ಮಕ ಬದಲಾವಣೆಗಳ ನಡುವೆಯೇ ಟ್ರಸ್ಟ್ ಮಹತ್ವದ ನಿರ್ಧಾರ ತಳೆದಿದೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಂತದಲ್ಲೇ, ಟ್ರಸ್ಟ್‌ನ ಮೊದಲ ‘ಕಾರ್ಯದರ್ಶಿ’ ಹುದ್ದೆಗೆ ಜಗದೀಶ್ ಅಫ್ಲೆ ಅವರನ್ನು ನೇಮಿಸಲಾಗಿದೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಟ್ರಸ್ಟ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇವರ ನೇಮಕಾತಿಗೆ ಅಧಿಕೃತ ಮುದ್ರೆ ಬೀಳಲಿದ್ದು, ಪ್ರಸ್ತುತ ಎಸ್‌ಬಿಐ ಬ್ಯಾಂಕ್ ಖಾತೆಗಳ ನಿರ್ವಹಣೆಗಾಗಿ ಅಫ್ಲೆ ಅವರನ್ನು ಅಧಿಕೃತ ಸಹಿದಾರರನ್ನಾಗಿ ನೇಮಿಸಲಾಗಿದೆ.

ಯಾರೀ ಜಗದೀಶ್ ಅಫ್ಲೆ? ಮಹಾರಾಷ್ಟ್ರದ ಪುಣೆ ಮೂಲದವರಾದ ಜಗದೀಶ್ ಅಫ್ಲೆ ಅವರು ಪ್ರತಿಷ್ಠಿತ ಐಐಟಿ ಬಾಂಬೆಯಿಂದ ಬಿ.ಟೆಕ್ ಹಾಗೂ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ. ಅಮೆರಿಕ ಹಾಗೂ ಹಲವು ಯುರೋಪಿಯನ್ ದೇಶಗಳ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ.

ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿರುವ ಅಫ್ಲೆ, ವಿದೇಶದಿಂದ ನಿವೃತ್ತರಾಗಿ ಮರಳಿದ ನಂತರ ರಾಮಮಂದಿರ ನಿರ್ಮಾಣ ಆರಂಭವಾದ ದಿನದಿಂದಲೂ ಯಾವುದೇ ವೇತನ ಪಡೆಯದೇ ಯೋಜನಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಅವರು ತಮ್ಮ ಪತ್ನಿಯೊಂದಿಗೆ ಅಯೋಧ್ಯೆಯ ತೀರ್ಥ ಕ್ಷೇತ್ರ ಭವನದಲ್ಲೇ ನೆಲೆಸಿದ್ದಾರೆ.

ಮತ್ತಷ್ಟು ಓದಿ: ರಾಮ ಮಂದಿರ ದೇಣಿಗೆ ಹಗರಣ:ಬೆಳಗ್ಗೆ ಫೋನ್ ಕಾಲ್, ಮಧ್ಯಾಹ್ನ ಕೋಟಿ ಕಳ್ಳತನ, ಏನೇನೆಲ್ಲಾ ನಡೀತು?

ಜುಲೈ 6 ರಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ ನಂತರ, ಬ್ಯಾಂಕ್ ವಹಿವಾಟು ನಡೆಸಲು ಸಹಿದಾರರಿಲ್ಲದೆ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಸುಮಾರು 1,000 ಸಿಬ್ಬಂದಿಯ ಜೂನ್ ತಿಂಗಳ ವೇತನ ಹಾಗೂ ಹೊರಗುತ್ತಿಗೆ ಸಂಸ್ಥೆಗಳ ಪಾವತಿ ವಿಳಂಬವಾಗಿತ್ತು.

ಈ ಸಮಸ್ಯೆಗೆ ಪರಿಹಾರವಾಗಿ, ಮಧ್ಯಂತರ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಹಾಗೂ ಕಾರ್ಯದರ್ಶಿ ಜಗದೀಶ್ ಅಫ್ಲೆ ಅವರನ್ನು ಸಹಿದಾರರನ್ನಾಗಿ ಎಸ್‌ಬಿಐಗೆ ಟ್ರಸ್ಟ್ ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯ ಹಣಕಾಸು ವಹಿವಾಟು ಸುಗಮಗೊಂಡಿದೆ.

ಸಿಇಒ ಹುದ್ದೆಗೆ 5,200 ಅರ್ಜಿಗಳು ಟ್ರಸ್ಟ್‌ನ ಸಿಇಒ ಹುದ್ದೆಗಾಗಿ ಬರೋಬ್ಬರಿ5,200 ಅರ್ಜಿಗಳು ಬಂದಿದ್ದು, ನಿವೃತ್ತ ನ್ಯಾಯಾಧೀಶ ಪ್ರಮೋದ್ ಕೊಹ್ಲಿ ನೇತೃತ್ವದ ಸಮಿತಿಯು ಇವುಗಳ ಪರಿಶೀಲನೆ ನಡೆಸುತ್ತಿದೆ. ಸಿಇಒ ಹಾಗೂ ಅಧಿಕೃತ ವಕ್ತಾರರ ನೇಮಕಾತಿಯನ್ನು ಸೆಪ್ಟೆಂಬರ್ 2 ರ ಸಭೆಯಲ್ಲಿ ಅಂತಿಮಗೊಳಿಸುವ ಸಾಧ್ಯತೆಯಿದೆ.

ಆಡಳಿತಾತ್ಮಕ ಸುಧಾರಣೆ: ರಾಮಮಂದಿರ ಉದ್ಘಾಟನೆಯ ನಂತರ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದರಿಂದ ಹಾಗೂ ದೇಣಿಗೆ ಕಳ್ಳತನದಂತಹ ಆಡಳಿತಾತ್ಮಕ ಲೋಪಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಟ್ರಸ್ಟ್ ತನ್ನ ನಿರ್ವಹಣಾ ವ್ಯವಸ್ಥೆಯನ್ನು ವೃತ್ತಿಪರಗೊಳಿಸಲು ಸಿಇಒ ಹಾಗೂ ಕಾರ್ಯದರ್ಶಿ ಹುದ್ದೆಗಳನ್ನು ಸೃಷ್ಟಿಸಿದೆ.

ಆಡಿಟಿಂಗ್ ಮತ್ತು ತಂತ್ರಜ್ಞಾನ ಆಧಾರಿತ ಕಾವಲು: ದೇಣಿಗೆ ಸಂಗ್ರಹದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ಯೂಆರ್ ಕೋಡ್, ಡಿಜಿಟಲ್ ಸ್ವೀಕೃತಿ ಹಾಗೂ ಸಿಸಿಟಿವಿ ಕಣ್ಗಾವಲನ್ನು ಹೆಚ್ಚಿಸಲು ನೂತನ ಆಡಳಿತ ಮಂಡಳಿ ನಿರ್ಧರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"