Ram Mandir Inauguration: ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಬಳಿಕ ರಾಮಭಕ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಮ ಮಂದಿರ(Ram Mandir)ದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವು ಇಂದು ನೆರವೇರಲಿದೆ. ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ರಾಮಭಕ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.25ರ ಸುಮಾರಿಗೆ ಅಯೋಧ್ಯೆ ಏರ್ಪೋರ್ಟ್ ತಲುಪಲಿದ್ದಾರೆ. 10.55ರ ಸುಮಾರಿಗೆ ಶ್ರೀರಾಮ ಜನ್ಮಭೂಮಿಗೆ ತೆರಳಲಿದ್ದಾರೆ. 12.05 ರಿಂದ 12.55ರವರೆಗೆ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಮಭಕ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮಧ್ಯಾಹ್ನ 1ರಿಂದ 2ಗಂಟೆಯವರೆಗೆ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 2.10ಕ್ಕೆ ಕುಬೇರ ತಿಲಾಗೆ ತೆರಳಲಿದ್ದಾರೆ.
11 ದಿನಗಳ ಕಾಲ ವಿಶೇಷ ಅನುಷ್ಠಾನ ಕೈಗೊಂಡ ಪ್ರಧಾನಿ ಮೋದಿ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ‘ಅನುಷ್ಠಾನ’ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಜನವರಿ 12 ರಂದಿ ಅನುಷ್ಠಾನ ಆರಂಭಿಸಿದ್ದಾರೆ. ಅನುಷ್ಠಾನದ ಭಾಗವಾಗಿ ಪ್ರತಿ ದಿನ ಬೆಳಗ್ಗೆ ಒಂದು ಗಂಟೆ ಕಾಲ ವಿಶೇಷ ಮಂತ್ರವನ್ನು ಪಠಿಸುತ್ತಿದ್ದಾರೆ.
ಮತ್ತಷ್ಟು ಓದಿ: Ayodhya Ram Mandir: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯ ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ
ಅನುಷ್ಠಾನದ ವೇಳೆ ಪ್ರಧಾನಿ ಮೋದಿಯವರು ಶಿಸ್ತಿನ ದಿನಚರಿಯನ್ನು ಅನುಸರಿಸುತ್ತಿದ್ದಾರೆ. ಅವರು ನೆಲದ ಮೇಲೆ ಮಲಗುತ್ತಿದ್ದಾರೆ. ಗೋ ಪೂಜೆ ಮತ್ತು ಹಸುಗಳಿಗೆ ಆಹಾರ ನೀಡುವಂತಹ ದೈನಂದಿನ ಭಕ್ತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಪ್ರಧಾನಿ ಮೋದಿ ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದ್ದು, ತುಳಸಿಘಾಟ್‌ನಲ್ಲಿ ವ್ಯವಸ್ಥೆಗಳು ನಡೆಯುತ್ತಿವೆ. 2021 ರ ಡಿಸೆಂಬರ್‌ನಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ನ್ನು ಉದ್ಘಾಟಿಸಿದಾಗ ಪ್ರಧಾನಿ ವಾರಣಾಸಿ ಗಂಗೆಯಲ್ಲಿ ಸ್ನಾನ ಮಾಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ