ವೈದಿಕ ವಿಧಿ ವಿಧಾನಗಳೊಂದಿಗೆ ಅಯೋಧ್ಯಾ ರಾಮ ಮಂದಿರದ ತಳಪಾಯ ನಿರ್ಮಾಣ ಆರಂಭ

ಎಲ್ಲವೂ ಅಂದುಕೊಂಡಂತೆಯೇ ಆದರೆ 2023 ರ ಹೊತ್ತಿಗೆ ಪವಿತ್ರ ಶ್ರೀ ರಾಮ ಮಂದಿರ ನಿರ್ಮಾಣ ಮುಕ್ತಾಯವಾಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭ್ಯವಾಗಲಿದೆ ಎಂದು ಟ್ರಸ್ಟ್ ತಿಳಿಸಿದೆ.

ವೈದಿಕ ವಿಧಿ ವಿಧಾನಗಳೊಂದಿಗೆ ಅಯೋಧ್ಯಾ ರಾಮ ಮಂದಿರದ ತಳಪಾಯ ನಿರ್ಮಾಣ ಆರಂಭ
ಶ್ರೀರಾಮ ಮಂದಿರ ನಿರ್ಮಾಣದ ಫೌಂಡೇಶನ್ ಕಾಮಗಾರಿ ಆರಂಭಿಸಲಾಯಿತು.
Follow us
guruganesh bhat
| Updated By: Skanda

Updated on: Mar 16, 2021 | 1:02 PM

ಅಯೋಧ್ಯಾ: ಐತಿಹಾಸಿಕ ಶ್ರೀ ರಾಮ ಮಂದಿರದ ತಳಪಾಯ (ಫೌಂಡೇಶನ್) ನಿರ್ಮಾಣ ಕಾರ್ಯ ನಿನ್ನೆಯಿಂದ (ಮಾರ್ಚ್ 15) ಆರಂಭವಾಗಿದೆ. ರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಸದಸ್ಯರ ಸಮ್ಮುಖದಲ್ಲಿ ವೈದಿಕ ವಿಧಿ ವಿಧಾನ ಮತ್ತು ಮಂತ್ರಘೋಷಗಳೊಂದಿಗೆ ತಳಪಾಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಟ್ರಸ್ಟ್​​ನ ಸಮಿತಿಯ ಸದಸ್ಯರಾದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಟ್ರಸ್ಟಿಗಳಾದ ಅನಿಲ್ ಮಿಶ್ರಾ, ರಾಜ ವಿಮಲೇಂದರ್ ಮೋಹನ್ ಪ್ರತಾಪ್ ಮಿಶ್ರಾ ಮತ್ತು ಮಹಾಂತ್ ದಿನೇಂದ್ರ ದಾಸ್, ಜಿಲ್ಲಾ ನ್ಯಾಯಾಧೀಶ ಅನುಜ್ ಝಾ ಅವರುಗಳು ಅಯೋಧ್ಯಾ ಶ್ರೀ ರಾಮ ಮಂದಿರದ ತಳಪಾಯ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು.

ಶುಭ ಮುಹೂರ್ತದಲ್ಲಿ ಶ್ರೀ ರಾಮ ಮಂದಿರದ ನಿರ್ಮಾಣವನ್ನು ಆರಂಭಿಸಲಾಗಿದೆ. ಈ ಕ್ಷಣಕ್ಕೆ ನಾವೆಲ್ಲರೂ ಸಾಕ್ಷಿಯಾಗಿರುವುದು ಸಂತಸ ತಂದಿದೆ ಎಂದು ರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಟ್ವೀಟ್ ಮಾಡಿದೆ. ಮುಂದಿನ ಆಗಸ್ಟ್ ತಿಂಗಳಲ್ಲಿ ಫೌಂಡೇಶನ್ ನಿರ್ಮಾಣ ಮುಕ್ತಾಯವಾಗಲಿದ್ದು, ಆಗಸ್ಟ್​ ನಂತರ ನಿಜವಾದ ರಾಮ ಮಂದಿರದ ನಿರ್ಮಾಣ ಆರಂಭವಾಗಲಿದೆ ಎಂದು ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ಧಾರೆ.

ಎಲ್ಲವೂ ಅಂದುಕೊಂಡಂತೆಯೇ ಆದರೆ 2023 ರ ಹೊತ್ತಿಗೆ ಪವಿತ್ರ ಶ್ರೀ ರಾಮ ಮಂದಿರ ನಿರ್ಮಾಣ ಮುಕ್ತಾಯವಾಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭ್ಯವಾಗಲಿದೆ ಎಂದು ಟ್ರಸ್ಟ್ ತಿಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ (Ram Mandir, Ayodhya, Uttar Pradesh) ನಿರ್ಮಾಣದ ಪೂರ್ವ ತಯಾರಿ ಕಾರ್ಯಗಳು ಭರದಿಂದ ಸಾಗುತ್ತಿವೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ನಿಧಿ ಸಂಗ್ರಹ ಕಾರ್ಯಕ್ರಮವೂ ನಡೆಯುತ್ತಿದೆ. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಇದುವರೆಗೆ 1,511 ಕೋಟಿ ರೂ. ಮೊತ್ತವನ್ನು ಸಂಗ್ರಹಿಸಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್​ನ ಖಜಾಂಜಿ, ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ತಿಳಿಸಿದ್ದಾರೆ. (Sri Ram Janmabhoomi Tirth Trust) ರಾಮ ಕ್ಷೇತ್ರದ ನಿರ್ಮಾಣ ಹಾಗೂ ವ್ಯವಸ್ಥೆಯ ಉಸ್ತುವಾರಿ ವಹಿಸಿರುವ ಟ್ರಸ್ಟ್ ಪರವಾಗಿ, ಸ್ವಾಮಿಗಳು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.

ಮಕರ ಸಂಕ್ರಾಂತಿಯಂದು ನಿಧಿ ಸಂಗ್ರಹ ಅಭಿಯಾನವನ್ನು ವಿಶ್ವ ಹಿಂದೂ ಪರಿಷತ್ (VHP) ಶುರು ಮಾಡಿತ್ತು. ಬಳಿಕ, 30 ದಿನಗಳ ಅವಧಿಯಲ್ಲಿ ದೇಶವ್ಯಾಪಿಯಾಗಿ 1,511 ಕೋಟಿ ರೂ. ಮೊತ್ತ ಸಂಗ್ರಹವಾಗಿದೆ. ಫೆಬ್ರವರಿ 11ರ ದಾಖಲೆಯಂತೆ ಒಟ್ಟು 1,511 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ಸ್ವಾಮಿ ಗೋವಿಂದ್ ದೇವ್ ಗಿರಿ ಹೇಳಿದ್ದರು.

4 ಲಕ್ಷ ಹಳ್ಳಿಗಳು ಹಾಗೂ 11 ಕೋಟಿ ಕುಟುಂಬಗಳು ಸಂಪೂರ್ಣ ಭಾರತವು ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡುತ್ತಿದೆ. ನಾವು ನಿಧಿ ಸಂಗ್ರಹಕ್ಕಾಗಿ, 4 ಲಕ್ಷ ಹಳ್ಳಿಗಳನ್ನು ಹಾಗೂ 11 ಕೋಟಿ ಕುಟುಂಬಗಳನ್ನು ತಲುಪಿದ್ದೇವೆ. ಜನವರಿ 15 ರಿಂದ ಈ ಅಭಿಯಾನ ನಡೆಸುತ್ತಿದ್ದೇವೆ. ಫೆಬ್ರವರಿ 27 ರ ವರೆಗೆ ಅಭಿಯಾನ ಮುಂದುವರಿಸುತ್ತೇವೆ. ನಿಧಿ ಸಂಗ್ರಹ ಯೋಜನೆಗಾಗಿ ಈಗ ಸೂರತ್​ಗೆ ಭೇಟಿ ನೀಡಿದ್ದೇನೆ. ಜನರು ದೇಣಿಗೆ ನೀಡುತ್ತಿದ್ದಾರೆ. 492 ವರ್ಷಗಳ ಬಳಿಕ, ಧರ್ಮಕ್ಕಾಗಿ ಕೆಲಸ ಮಾಡಲು ಜನತೆಗೆ ಅವಕಾಶ ಲಭಿಸಿದೆ ಎಂದು ದೇವ್ ಗಿರಿ ಸ್ವಾಮಿ ತಿಳಿಸಿದ್ದಾರೆ.

30 ದಿನಗಳಲ್ಲಿ 1,511 ಕೋಟಿ ರೂ. ಸಂಗ್ರಹ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ 30 ದಿನಗಳ ಅವಧಿಯಲ್ಲಿ ಬಹುದೊಡ್ಡ ಮೊತ್ತವನ್ನು ನಿಧಿ ಸಂಗ್ರಹ ಅಭಿಯಾನದ ಮೂಲಕ ಪಡೆದುಕೊಂಡಿದೆ. 2019 ನವೆಂಬರ್​ನಲ್ಲಿ, ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್​ನ ಐದು ನ್ಯಾಯಾಧೀಶರು ರಾಮ ಮಂದಿರ ಸಂಬಂಧ ತೀರ್ಪು ನೀಡಿದರು. ವಿವಾದಾತ್ಮಕವಾಗಿದ್ದ ಸಂಪೂರ್ಣ 2.7 ಎಕರೆಗಳ ಭೂಮಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಲಾಯಿತು. ಬಳಿಕ, ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ ಮಾಡಲಾಗಿತ್ತು.

ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡದವರು ಬಾಯಿಗೆ ಬಂದ ಹಾಗೆ ಮಾತನಾಡಬಾರದು; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ