Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 25 ಲಕ್ಷ ಹಣತೆ, ಮತ್ತೊಂದು ಗಿನ್ನೆಸ್ ದಾಖಲೆ ಬರೆದ ದೀಪೋತ್ಸವ

ಅಯೋಧ್ಯೆಯಲ್ಲಿ ನಡೆದ ದೀಪಾವಳಿ ದೀಪೋತ್ಸವವು 25 ಲಕ್ಷಕ್ಕೂ ಹೆಚ್ಚು ಹಣತೆಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಬರೆದಿದೆ. ಕಳೆದ ವರ್ಷದ ದಾಖಲೆಯನ್ನು ಮೀರಿಸಿರುವ ಈ ದೀಪೋತ್ಸವದಲ್ಲಿ ರಾಮಾಯಣ ಆಧಾರಿತ ಲೇಸರ್ ಶೋ, ಡ್ರೋನ್ ಪ್ರದರ್ಶನ ಮತ್ತು ಅಂತರರಾಷ್ಟ್ರೀಯ ಕಲಾವಿದರ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು.

Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 25 ಲಕ್ಷ ಹಣತೆ, ಮತ್ತೊಂದು ಗಿನ್ನೆಸ್ ದಾಖಲೆ ಬರೆದ ದೀಪೋತ್ಸವ
ಅಯೋಧ್ಯೆ ದೀಪೋತ್ಸವ
Follow us
Ganapathi Sharma
|

Updated on:Nov 02, 2024 | 10:04 AM

ಅಯೋಧ್ಯೆ, ನವೆಂಬರ್ 2: ಈ ಜನವರಿಯಲ್ಲಿ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯಲ್ಲಿ ನಡೆದ ಮೊದಲ ದೀಪಾವಳಿ ದೀಪೋತ್ಸವ ಗಿನ್ನೆಸ್ ದಾಖಲೆ ಬರೆದಿದೆ. ಆ ಮೂಲಕ ಕಳೆದ ವರ್ಷದ ಗಿನ್ನೆಸ್ ದಾಖಲೆಯನ್ನು ಮೀರಿಸಿದೆ. ಸರಯೂ ನದಿಯ ದಡದಲ್ಲಿ 25 ಲಕ್ಷಕ್ಕೂ ಹೆಚ್ಚು ಹಣತೆಗಳನ್ನು ಬೆಳಗಿಸಲಾಯಿತು. ಆ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ಬರೆಯಲಾಯಿತು.

ಅಕ್ಟೋಬರ್ 30 ರ ಬುಧವಾರ, ಅಯೋಧ್ಯೆಯಲ್ಲಿ ಎಂಟನೇ ‘ದೀಪೋತ್ಸವ’ ನಡೆಸಲಾಯಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಪುಟ ಸಹೋದ್ಯೋಗಿಗಳ ಜತೆ ಹಣತೆಗಳನ್ನು ಬೆಳಗುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು.

ರಾಮಾಯಣ ಘಟನೆ ಆಧಾರಿತ ಲೇಸರ್ ಶೋ

ದೀಪೋತ್ಸವದಲ್ಲಿ ರಾಮಾಯಣದ ಘಟನೆಗಳನ್ನು ಚಿತ್ರಿಸುವ ಲೇಸರ್ ಶೋ ಮತ್ತು ಡ್ರೋನ್ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು. ಆಚರಣೆಯು ಆರು ದೇಶಗಳನ್ನು ಪ್ರತಿನಿಧಿಸುವ ಕಲಾವಿದರಿಂದ ಸಾಂಸ್ಕೃತಿಕ ಪ್ರದರ್ಶನಗಳನ್ನು ಒಳಗೊಂಡಿತ್ತು. ಮ್ಯಾನ್ಮಾರ್, ನೇಪಾಳ, ಥೈಲ್ಯಾಂಡ್, ಮಲೇಷ್ಯಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾ ಕಲಾವಿದರು ಭಾಗವಹಿಸಿದ್ದರು.

ಸಾರ್ವಜನಿಕರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಸರಿಸುಮಾರು 10,000 ಭದ್ರತಾ ಸಿಬ್ಬಂದಿಯನ್ನು ನಗರದಾದ್ಯಂತ ನಿಯೋಜಿಸಲಾಗಿತ್ತು. ಈ ಪೈಕಿ, ಅರ್ಧದಷ್ಟು ಬಂದಿ ಮಫ್ತಿಯಲ್ಲಿದ್ದರು.

Ayodhya's Diwali Deepotsav: Guinness World Record with 2.5 Million Lamps, Breaks Own Record

ಲೇಸರ್ ಶೋ

ಭದ್ರತಾ ಮುನ್ನೆಚ್ಚರಿಕಾ ಕ್ರಮವಾಗಿ ರಾಮ್ ಕಿ ಪೈಡಿಗೆ ಹೋಗುವ 17 ಮಾರ್ಗಗಳನ್ನು ಮುಚ್ಚಲಾಗಿದೆ, ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.

ರಾಮಾಯಣದ ರೋಮಾಂಚಕ ಟ್ಯಾಬ್ಲೋಕ್ಸ್ ಹೊಂದಿರುವ ಮೆರವಣಿಗೆಯು ದೇವಾಲಯದ ಪಟ್ಟಣದ ಮೂಲಕ ಸಾಗಿತು. ರಾಮ, ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಪಾತ್ರಧಾರಿ ಕಲಾವಿದರು ಕುಳಿತಿದ್ದ ರಥವನ್ನು ಯೋಗಿ ಆದಿತ್ಯನಾಥ್ ಅವರು ಆರತಿ ಬೆಳಗಿ ಬರಮಾಡಿಕೊಂಡರು.

ರಾಮಾಯಣದಲ್ಲಿ ಉಲ್ಲೇಖಿಸಲಾದ ಪೌರಾಣಿಕ ಪುಷ್ಪಕ ವಿಮಾನಕ್ಕೆ ನಮನ ಸಲ್ಲಿಸಲು ಪಾತ್ರಗಳನ್ನು ಮೊದಲು ಹೆಲಿಕಾಪ್ಟರ್‌ನಲ್ಲಿ ಅಯೋಧ್ಯೆಗೆ ಕರೆತರಲಾಯಿತು.

ಇದನ್ನೂ ಓದಿ: ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು

ಪ್ರವಾಸೋದ್ಯಮ ಇಲಾಖೆಯ ಸ್ತಬ್ಧಚಿತ್ರದಲ್ಲಿ ತುಳಸಿದಾಸರ ರಾಮಚರಿತಮಾನಸದಿಂದ ತೆಗೆದ ಬಾಲ್ ಕಾಂಡ್, ಅಯೋಧ್ಯಾಕಾಂಡ್, ಅರಣ್ಯಕಾಂಡ್, ಕಿಷ್ಕಿಂಧಾ ಕಾಂಡ್, ಸುಂದರ್ ಕಾಂಡ್, ಲಂಕಾಕಾಂಡ್ ಮತ್ತು ಉತ್ತರ ಕಾಂಡದ ದೃಶ್ಯಗಳನ್ನು ಚಿತ್ರಿಸಿದೆ.

ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದಿದ್ದ ದೀಪೋತ್ಸವದಲ್ಲಿ 15 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಲಾಗಿತ್ತು. ಅದೂ ಸಹ ಗಿನ್ನೆಸ್ ದಾಖಲೆ ಬರೆದಿತ್ತು. ಇದೀಗ ತನ್ನದೇ ದಾಖಲೆಯನ್ನು ಮೀರಿ ಅಯೋಧ್ಯೆ ದೀಪೋತ್ಸವ ಮತ್ತೊಂದು ದಾಖಲೆ ಬರೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 2 November 24

ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ