AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Health Day ಕೆಂಪು ಕೋಟೆಯಲ್ಲಿ ಯೋಗ ಉತ್ಸವ; ಲೋಕಸಭೆ ಸ್ಪೀಕರ್, ಕೇಂದ್ರ ಸಚಿವರು ಭಾಗಿ

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್, ಮೀನಾಕ್ಷಿ ಲೇಖಿ, ಜಿ ಕಿಶನ್ ರೆಡ್ಡಿ ಮುಂತಾದವರು ಮೆಗಾ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ...

World Health Day ಕೆಂಪು ಕೋಟೆಯಲ್ಲಿ ಯೋಗ ಉತ್ಸವ; ಲೋಕಸಭೆ ಸ್ಪೀಕರ್, ಕೇಂದ್ರ ಸಚಿವರು ಭಾಗಿ
ಯೋಗ ಉತ್ಸವ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 07, 2022 | 2:20 PM

Share

ದೆಹಲಿ: ವಿಶ್ವ ಆರೋಗ್ಯ ದಿನ(World Health Day) ಸಂದರ್ಭದಲ್ಲಿ, ಆಯುಷ್ ಸಚಿವಾಲಯವು ಗುರುವಾರ ಕೆಂಪು ಕೋಟೆಯಲ್ಲಿ ‘ಯೋಗ ಉತ್ಸವ’ (Yog Utsav) ಆಯೋಜಿಸಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್, ಮೀನಾಕ್ಷಿ ಲೇಖಿ, ಜಿ ಕಿಶನ್ ರೆಡ್ಡಿ ಮುಂತಾದವರು ಮೆಗಾ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರದ ಆಜಾದಿ ಕಾ ಅಮೃತ್ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮುಂಚಿತವಾಗಿ ಯೋಗ ಉತ್ಸವವನ್ನು ಆಯೋಜಿಸಲಾಗಿದೆ. ವಿಶ್ವ ಆರೋಗ್ಯ ದಿನದ ಸಂದರ್ಭದಲ್ಲಿ ನನ್ನ ಶುಭಾಶಯಗಳು. ಪ್ರಪಂಚದ ಆರೋಗ್ಯಕ್ಕಾಗಿ ಹಾರೈಕೆಗಳು. ಯೋಗವು ನಮ್ಮ ಪೂರ್ವಜರ ಜೀವನ ವಿಧಾನವಾಗಿದೆ. ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಾವು ಇಂದು ಅಂತರಾಷ್ಟ್ರೀಯ ಯೋಗ ದಿನದ ಮೊದಲು ಈ ಯೋಗಾಭ್ಯಾಸವನ್ನು ಇಟ್ಟುಕೊಂಡಿದ್ದೇವೆ” ಎಂದು ಸ್ಪೀಕರ್ ಹೇಳಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವಂತೆ ಒತ್ತಾಯಿಸಿದರು. ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುವ ಗುರಿಯನ್ನು ತಲುಪಲು ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕೆಂದು ಲೋಕಸಭೆ ಸ್ಪೀಕರ್ ಒತ್ತಾಯಿಸಿದರು. “ಯೋಗ ಎಲ್ಲರಿಗೂ ಪ್ರಯೋಜನಕಾರಿಯಾಗಿದೆ. ಅದನ್ನು ಪ್ರತಿದಿನ ಅಭ್ಯಾಸ ಮಾಡುವುದು ಮುಖ್ಯ. ಭಾರತ ಮಾತ್ರವಲ್ಲ, ಇತರ ದೇಶಗಳು ಅದರ ಮಹತ್ವವನ್ನು ಅರ್ಥಮಾಡಿಕೊಂಡಿವೆ. ಇಂದು ನಾವು ಯೋಗ ಉತ್ಸವ ಆಚರಿಸುತ್ತಿದ್ದೇವೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಹೇಳಿದರು.

ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ತಮ್ಮ ಇತ್ತೀಚಿನ ಟ್ವೀಟ್‌ಗಳಲ್ಲಿ ಪ್ರತಿಯೊಬ್ಬರನ್ನು ಆಯುಷ್ ಆಂದೋಲನದ ಭಾಗವಾಗುವಂತೆ ಕರೆ ನೀಡಿದರ. “ಆಯುಷ್‌ ಪ್ರಾಚೀನ ಕಾಲದಿಂದಲೂ ಮಾನವೀಯತೆಗೆ ಸೇವೆ ಸಲ್ಲಿಸಿವೆ” ಎಂದು ಅವರು ಹೇಳಿದ್ದಾರೆ.

“ಕೈಗೆಟುಕುವ, ಪರಿಣಾಮಕಾರಿ ಮತ್ತು ತಳಮಟ್ಟವನ್ನು ತಲುಪುವ, ಭಾರತದ ಸಾಂಪ್ರದಾಯಿಕ ಔಷಧೀಯ ವ್ಯವಸ್ಥೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಕ್ಷೇಮ ಮತ್ತು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತಿವೆ” ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಆರೋಗ್ಯ ದಿನದ ಅಂಗವಾಗಿ ತಮ್ಮ ಟ್ವೀಟ್‌ನಲ್ಲಿ ಆರೋಗ್ಯ ಕ್ಷೇತ್ರದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. “ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಭಾರತ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ. ನಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ಖಾತರಿಪಡಿಸುವತ್ತ ಗಮನಹರಿಸಲಾಗಿದೆ, ”ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಮಹತ್ವವನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಇದನ್ನು ವಿಶ್ವ ಆರೋಗ್ಯ ಸಂಸ್ಥೆಯು 1950 ರಲ್ಲಿ ಜಾರಿಗೆ ತಂದಿತು.

ಇದನ್ನೂ ಓದಿ:World Health Day 2022: ನಿಮ್ಮಿಂದಾಗಿ ನಾವೆಲ್ಲ ಸುರಕ್ಷಿತ; ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ