AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭವ: ಪ್ರಧಾನಿ ಮೋದಿ ಜನ್ಮದಿನವು ಆಚರಣೆಯಲ್ಲ, ಸಾರ್ವಜನಿಕ ಕಲ್ಯಾಣದ ದಿನ, ಈ ಬಾರಿ ಪ್ರಜೆಗಳಿಗೇನು ಸಿಗಲಿದೆ?

ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರ ಗಾಂಧಿ ಜಯಂತಿಯವರೆಗೆ 'ಸೇವಾ ಪಾಕ್ಷಿಕ' ಕಾರ್ಯಕ್ರಮದಡಿ ಹಲವಾರು ಆರೋಗ್ಯ ಕಾರ್ಯಕ್ರಮಗಳನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಅಭಿಯಾದನಡಿ 60 ಸಾವಿರಕ್ಕೂ ಹೆಚ್ಚು ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ.

ಆಯುಷ್ಮಾನ್ ಭವ: ಪ್ರಧಾನಿ ಮೋದಿ ಜನ್ಮದಿನವು ಆಚರಣೆಯಲ್ಲ, ಸಾರ್ವಜನಿಕ ಕಲ್ಯಾಣದ ದಿನ, ಈ ಬಾರಿ ಪ್ರಜೆಗಳಿಗೇನು ಸಿಗಲಿದೆ?
ನರೇಂದ್ರ ಮೋದಿImage Credit source: Sam Panthaky/AFP/Getty Images
Rakesh Nayak Manchi
|

Updated on:Sep 16, 2023 | 1:39 PM

Share

ಜಗ ಮೆಚ್ಚಿದ ನಾಯಕ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೆ.17 ರಂದು 73ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನವನ್ನು ಅಭಿಮಾನಿಗಳು ವಿಜ್ರಂಭನೆಯಿಂದ ಆಚರಿಸುವುದು ಒಂದಡೆಯಾದರೆ, ಸರ್ಕಾರ ಮಟ್ಟದಲ್ಲಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕ ಕಲ್ಯಾಣದ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರತಿವರ್ಷ ದೇಶವಾಸಿಗಳಿಗೆ ಏನಾದರೂ ವಿಶೇಷತೆ ಸಿಗುತ್ತದೆ. ಅದರಂತೆ ಮೋದಿ ಜನ್ಮದಿನಾಚರಣೆಯಿಂದ ಅ.2 ಗಾಂಧಿ ಜಯಂತಿವರೆಗೆ ಕೇಂದ್ರ ಸರ್ಕಾರವು ಆಯುಷ್ಮಾನ್ ಭವ ಅಭಿಯಾನವನ್ನು ಹಮ್ಮಿಕೊಂಡಿದ್ದು, 60 ಸಾವಿರಕ್ಕೂ ಹೆಚ್ಚು ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ.

ಮೋದಿ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಆಯುಷ್ಮಾನ್ ಭವ ಅಭಿಯಾನದಡಿ ಉಳಿದ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್​ಗಳನ್ನು ವಿತರಿಸಲಾಗುತ್ತಿದೆ. ಅಲ್ಲದೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಸಾಪ್ತಾಹಿಕ ಆರೋಗ್ಯ ಮೇಳಗಳನ್ನು ನಡೆಸಲಾಗುತ್ತದೆ. ಇದರ ಜೊತೆಗೆ, ವಿವಿಧ ಆರೋಗ್ಯ ರಕ್ಷಣೆ ಯೋಜನೆಗಳು ಮತ್ತು ಸೇವೆಗಳ ಬಗ್ಗೆ ಅರಿವು ಹೆಚ್ಚಿಸಲು ಗ್ರಾಮ ಅಥವಾ ವಾರ್ಡ್ ಮಟ್ಟದಲ್ಲಿ ಆಯುಷ್ಮಾನ್ ಸಭೆ ನಡೆಸಲಾಗುತ್ತದೆ.

ಆಯುಷ್ಮಾನ್ ಭವ ಅಭಿಯಾನ

  • ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಣೆ
  • ದೇಶಾದ್ಯಂತ ಆನ್‌ಲೈನ್ ಅಂಗದಾನ ಪ್ರತಿಜ್ಞೆ ನೋಂದಣಿಯನ್ನು ಪ್ರಾರಂಭ
  • ಎಲ್ಲಾ ರಕ್ತನಿಧಿಗಳಿಂದ ಕನಿಷ್ಠ ಒಂದು ರಕ್ತದಾನ ಶಿಬಿರ ಆಯೋಜನೆ
  • ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಆರೋಗ್ಯ ರಕ್ಷಣಾ ಹಂತಗಳಲ್ಲಿ ಎಲ್ಲಾ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಸ್ವಚ್ಛತೆಗೆ ಚಾಲನೆ

ಈ ಹಿಂದೆ ಅಭಿಯಾನದ ಬಗ್ಗೆ ಮಾತನಾಡಿದ್ದ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ, ಸೆ.17 ರಿಂದ ಅ.2 ರವರೆಗೆ ಆರೋಗ್ಯ ಜಾಗೃತಿಗಾಗಿ ಹಲವು ಚಟುವಟಿಕೆಗಳನ್ನು, ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತದೆ. ಆಯುಷ್ಮಾನ್ ಆಪ್ಕೆ ದ್ವಾರ 3.0 ಅಡಿ ಬರುವ ಆಯುಷ್ಮಾನ್ ಭವ ಅಭಿಯಾನವು ಬಾಕಿ ಉಳಿದಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆಯುಷ್ಕಾನ್ ಕಾರ್ಡ್ ರಚನೆ ಮತ್ತು ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನದಂದು ನಾಲ್ಕು ಪ್ರಮುಖ ಆರೋಗ್ಯ ಯೋಜನೆಗಳು ಪ್ರಾರಂಭ; ಇದರಿಂದ ನಿಮಗೇನು ಲಾಭ?

ಬಿಜೆಪಿ ಕೂಡ ರಾಷ್ಟ್ರಮಟ್ಟದಲ್ಲಿ ಮೋದಿ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ. ಬಿಜೆಪಿ ದೇಶಾದ್ಯಂತ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಜನರಿಗೆ

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sat, 16 September 23

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ