AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ಉತ್ತರಾಖಂಡದಲ್ಲಿ 13 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಐಟಿಬಿಪಿ ಪಡೆ

ಉತ್ತರಾಖಂಡದಲ್ಲಿ 13,000 ಅಡಿ ಎತ್ತರದಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ನಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

Azadi Ka Amrit Mahotsav: ಉತ್ತರಾಖಂಡದಲ್ಲಿ 13 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಐಟಿಬಿಪಿ ಪಡೆ
ITBP
TV9 Web
| Edited By: |

Updated on:Aug 08, 2022 | 9:54 AM

Share

ಭಾರತೀಯ ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಉತ್ತರಾಖಂಡದಲ್ಲಿ 13,000 ಅಡಿ ಎತ್ತರದಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ನಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರವು ರಾಷ್ಟ್ರದ ಗಡಿ ಗಸ್ತು ಏಜೆನ್ಸಿಯ ಜಾಗರೂಕತೆ ಮತ್ತು ಕಣ್ಗಾವಲು ಸಾಮರ್ಥ್ಯಗಳನ್ನು ವಿವರಿಸುತ್ತದೆ.

ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಬಗ್ಗೆ ಮತ್ತು ರಾಷ್ಟ್ರದಲ್ಲಿ ಒಗ್ಗಟಿನಲ್ಲಿರುವ ವಿಚಾರಗಳನ್ನು ತಿಳಿಸಿದ್ದಾರೆ.   ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹುರುಪಿನಿಂದ ಆಚರಿಸಲು ಸೈನಿಕರು ಗುರುತಿಸಿದ ಹರ್ ಘರ್ ತಿರಂಗ ಅಭಿಯಾನದ ಸುಂದರ ಕ್ಷಣಗಳು ಇದು.

ಐಟಿಬಿಪಿ ಪಡೆಗಳು ಲಡಾಖ್‌ನಲ್ಲಿ 12,000 ಅಡಿ ಎತ್ತರದಲ್ಲಿ ಭಾರತದ ಧ್ವಜವನ್ನು ಹಾರಿಸಿಲಾಗಿತ್ತು. ಪಡೆಗಳು ಭಾರತದ ಎಲ್ಲಾ ನಾಗರಿಕರಿಗೆ ಈ ಸಂದೇಶವನ್ನು ರವಾನಿಸಿತ್ತು. ಹರ್ ಘರ್ ತಿರಂಗ ಅಭಿಯಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು. ಎಲ್ಲಾ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹರಿಸುವಂತೆ ಸರ್ಕಾರ ಹೇಳಿದೆ. ಸಿಕ್ಕಿಂ, ಉತ್ತರಾಖಂಡ, ಅಸ್ಸಾಂ, ಬಿಹಾರ ಮತ್ತು ಇತರ ರಾಜ್ಯಗಳ ಭಾಗಗಳಲ್ಲಿ ಸ್ಥಳೀಯರ ಸಹಯೋಗದೊಂದಿಗೆ ಪಡೆಗಳಿಂದ ಹಲವಾರು ಜಾಗೃತಿ ಅಭಿಯಾನಗಳು ಮತ್ತು ತ್ರಿವರ್ಣ ವಿತರಣಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Himveers of ITBP Academy, Mussoori ಥಟ್ಯೂಡ್ ಪದವಿ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ರ್ಯಾಲಿ ಮತ್ತು ಪ್ಲಾಂಟೇಶನ್ ಡ್ರೈವ್ ಅನ್ನು ಸಹ ನಡೆಸಲಾಯಿತು ಎಂದು ಆಗಸ್ಟ್ 6 ರಂದು ಪಡೆಗಳು ಟ್ವೀಟ್ ಮಾಡಿತ್ತು. ಆಗಸ್ಟ್ 4 ರಂದು, ಐಟಿಬಿಪಿಯು ಫ್ಲಾಗ್ ಫೌಂಡೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಸಹಯೋಗದೊಂದಿಗೆ ಮಸ್ಸೌರಿಯ ಐಟಿಬಿಪಿ ಅಕಾಡೆಮಿಯ ನಾಗ್ ಮಂದಿರದ ಬಳಿ 72 ಅಡಿ ಎತ್ತರದ ರಾಷ್ಟ್ರೀಯ ಧ್ವಜವನ್ನು ಹಾರಿಸಿಲಾಗಿತ್ತು. ಐಟಿಬಿಪಿ ಮತ್ತು ಎಫ್‌ಎಫ್‌ಐ ಮೂಲಕ ಸ್ವಾತಂತ್ರ್ಯ ಹೋರಾಟದ ಹುತಾತ್ಮರಿಗೆ ಧ್ವಜವನ್ನು ಅರ್ಪಿಸಲಾಯಿತು.

ಅಭಿಯಾನವನ್ನು ಸುಗಮಗೊಳಿಸಲು, ಸರ್ಕಾರವು ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಜನರಲ್ಲಿ ಧ್ವಜ ಜಾಗೃತಿ ಮತ್ತು ಒಗ್ಗೂಟಿನ ಮಂತ್ರವನ್ನು ಈ ಮೂಲಕ ತಿಳಿಸಿತ್ತು. ಧ್ವಜವನ್ನು ತಯಾರಿಸಲು ಬಳಸಬೇಕಾದ ವಸ್ತುಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ತಿರಂಗದ ಗಾತ್ರವನ್ನು ಎಷ್ಟಿರಬೇಕು ಎಂಬುದನ್ನು ಕೂಡ ತಿಳಿಸಿದೆ.

ಪಿಟಿಐ ವರದಿಯ ಪ್ರಕಾರ, ಆಗಸ್ಟ್ 13 ಮತ್ತು 15 ರ ನಡುವೆ ಮೂರು ದಿನಗಳ ಕಾಲ 20 ಕೋಟಿಗೂ ಹೆಚ್ಚು ರಾಷ್ಟ್ರಧ್ವಜಗಳನ್ನು ಮನೆಗಳ ಮೇಲೆ ಹಾರಿಸಲಾಗುವುದು ಎಂದು ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಆಗಸ್ಟ್ 13 ಮತ್ತು 15 ರ ನಡುವೆ ಮೂರು ದಿನಗಳ ಕಾಲ 20 ಕೋಟಿಗೂ ಹೆಚ್ಚು ರಾಷ್ಟ್ರಧ್ವಜಗಳನ್ನು ಮನೆಗಳ ಮೇಲೆ ಹಾರಿಸಲಾಗುವುದು ಎಂದು ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ.

Published On - 9:54 am, Mon, 8 August 22

Follow Us
TV9 Web
TV9 Web

TV9 Kannada

Read More
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು