Azadi Ka Amrit Mahotsav: ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ತೆಲಂಗಾಣ ಸರ್ಕಾರದಿಂದ ಭರ್ಜರಿ ತಯಾರಿ

ಕೆ.ಕೇಶವ ರಾವ್ ನೇತೃತ್ವದ ಸಮಿತಿ ಹಾಗೂ ಇತರ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು, ಆಗಸ್ಟ್ 15 ರಂದು ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ಹಾಕುವ ಮೂಲಕ ಈ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಕ್ರಮಕೈಗೊಳ್ಳುವಂತೆ ಸೂಚಿಸಿದರು.

Azadi Ka Amrit Mahotsav: ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ತೆಲಂಗಾಣ ಸರ್ಕಾರದಿಂದ ಭರ್ಜರಿ ತಯಾರಿ
KCR
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 03, 2022 | 3:16 PM

ತೆಲಂಗಾಣ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರದಂದು ಆಜಾದಿ ಕಾ ಅಮೃತ್ ಮಹೋತ್ಸವವನ್ನು ವೈಭವ ಮತ್ತು ಅದ್ಧೂರಿಯಾಗಿ ಆಚರಣೆ ಮಾಡಲು ಮತ್ತು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು, ಇದು ದೇಶಭಕ್ತಿಯ ಕಾರ್ಯಕ್ರಮ ಹಾಗಾಗಿ ಜನರು ಇದನ್ನು ಉತ್ಸಾಹದಿಂದ ಆಚರಣೆ ಮಾಡಬೇಕು ಎಂದಿದ್ದಾರೆ. ರಾಷ್ಟ್ರಧ್ವಜಗಳನ್ನು ಜನರಿಗೆ ಉಚಿತವಾಗಿ ವಿತರಿಸುವಂತೆ ಕೆಸಿಆರ್ ಸೂಚನೆ ನೀಡಿದರು . ಆಜಾದಿ ಅಮೃತ ಮಹೋತ್ಸವದ ಆಚರಣೆಯನ್ನು ರಾಜ್ಯ ಸರ್ಕಾರವು ಆಗಸ್ಟ್ 8 ರಿಂದ 22 ರವರೆಗೆ ಆಯೋಜಿಸಿದೆ.

ಕೆ.ಕೇಶವ ರಾವ್ ನೇತೃತ್ವದ ಸಮಿತಿ ಹಾಗೂ ಇತರ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು, ಆಗಸ್ಟ್ 15 ರಂದು ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ಹಾಕುವ ಮೂಲಕ ಈ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಆಗಸ್ಟ್ 9ರಿಂದ ಧ್ವಜ ವಿತರಣೆ ಆರಂಭಿಸುವಂತೆ ಸಿಎಂ ಕೆಸಿಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳು, ನೌಕರರು, ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು, ಯುವಕರು ಮತ್ತು ಇಡೀ ತೆಲಂಗಾಣ ಸಮುದಾಯವು ಸಂಭ್ರಮದಿಂದ ಆಚರಣೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

‘ಹೈದರಾಬಾದ್‌ನ ಎಚ್‌ಐಸಿಸಿಯಲ್ಲಿ ವಜ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಸ್ವಾತಂತ್ರ್ಯ ಸ್ಪೂರ್ತಿ, ದೇಶಭಕ್ತಿ ರಾಷ್ಟ್ರೀಯ ಗೀತೆಗಳು ಮತ್ತು ಸೇನೆ ಮತ್ತು ಪೊಲೀಸ್ ಬ್ಯಾಂಡ್‌ಗಳೊಂದಿಗೆ ರಾಷ್ಟ್ರೀಯ ಸೆಲ್ಯೂಟ್‌ನೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಿಎಂ ಹೇಳಿದರು. ನಂತರ ಉದ್ಘಾಟನಾ ಭಾಷಣ, ಸಭಾಪತಿಗಳ ಭಾಷಣ ಮತ್ತು ಸಿಎಂ ಕೆಸಿಆರ್ ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ವಿಶೇಷ ಭಾಷಣ ಮತ್ತು ಧನ್ಯವಾದಗಳನ್ನು ಈ ಕಾರ್ಯಕ್ರಮದಲ್ಲಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಕರ್ನಾಟಕ 75 ಲಕ್ಷ ಮನೆಗಳ ಮೇಲೆ ರಾಷ್ಟ್ರಧ್ವಜ, ಎಲ್ಲೆಡೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ: ಬಿಜೆಪಿ ಸಂಕಲ್ಪ
Image
Narendra Modi: ಬದಲಾಯ್ತು ನರೇಂದ್ರ ಮೋದಿ ಪ್ರೊಫೈಲ್ ಚಿತ್ರ; ಎದ್ದು ಕಾಣುತ್ತಿದೆ ತ್ರಿವರ್ಣ ಧ್ವಜ
Image
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸರಣಿ ಸಭೆ-ಸುದ್ದಿಗೋಷ್ಟಿ : ಏನ್ ಹೇಳಿದ್ರು ಜೋಶಿ? ಇಲ್ಲಿದೆ ಡೀಟೈಲ್ಸ್
Image
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಸಭೆಯಲ್ಲಿ ತೆಗೆದುಕೊಂಡ ಇತರ ನಿರ್ಧಾರಗಳಲ್ಲಿ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಆಸ್ಪತ್ರೆಗಳು ಮತ್ತು ಶಾಪಿಂಗ್ ಮಾಲ್‌ಗಳಂತಹ ಸಾರ್ವಜನಿಕ ಸ್ಥಳಗಳ ಅಲಂಕಾರಿಸಬೇಕು ಎಂದು ಹೇಳಿದ್ದಾರೆ. ಎಲ್ಲಾ ಸರ್ಕಾರಿ ಕಟ್ಟಡಗಳು ಮತ್ತು ಐತಿಹಾಸಿಕ ಕಟ್ಟಡಗಳು ವರ್ಣರಂಜಿತ ದೀಪಗಳಿಂದ ಬೆಳಗಲಿವೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್