AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ-ಯೋಗಿ ವಿರುದ್ಧ ದ್ವೇಷ ಭಾಷಣ: ಶಾಸಕ ಸ್ಥಾನ ಕಳೆದುಕೊಂಡ ಅಜಂ ಖಾನ್‌

ಮೋದಿ ಹಾಗೂ ಯೋಗಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಅಜಂ ಖಾನ್‌ ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ.

ಮೋದಿ-ಯೋಗಿ ವಿರುದ್ಧ ದ್ವೇಷ ಭಾಷಣ: ಶಾಸಕ ಸ್ಥಾನ ಕಳೆದುಕೊಂಡ ಅಜಂ ಖಾನ್‌
Azam Khan, 3 Years Jail,Yogi Adityanath, Hate Speech
TV9 Web
| Edited By: |

Updated on:Oct 28, 2022 | 9:12 PM

Share

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಜಂ ಖಾನ್ ದೋಷಿ ಎಂದು ಕೋರ್ಟ್ ಆದೇಶಿಸಿ ಮೂರು ವರ್ಷ ಜೈಲು ಶಿಕ್ಷೆ ನೀಡಿತ್ತು. ಇದಾದ ಬೆನ್ನಲ್ಲೇ ಇದೀಗ ಅಜಂ ಖಾನ್ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

2013ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕ್ರಿಮಿನಲ್ ಮೊಕದ್ದಮೆಯಲ್ಲಿ ಎಂಎಲ್ಎ, ಎಂಎಲ್ಸಿ ಅಥವಾ ಎಂಪಿ ತಪ್ಪಿತಸ್ಥರಾಗಿದ್ದರೆ ಮತ್ತು ಕನಿಷ್ಠ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಧಾನಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದೆ. ಈ ತೀರ್ಪಿನಂತೆ ಅಜಂ ಖಾನ್‌ ಈಗ ತಪ್ಪಿತಸ್ಥರಾಗಿರುವ ಕಾರಣ ರಾಂಪುರ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ದ್ವೇಷ ಭಾಷಣ ಪ್ರಕರಣ; ಎಸ್​ಪಿ ನಾಯಕ ಅಜಂ ಖಾನ್ ದೋಷಿ ಎಂದು ಘೋಷಣೆ

ಘಟನೆ ಹಿನ್ನೆಲೆ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಪ್ರಧಾನಿ ಮೋದಿ ಹಾಗೂ ಯೋಗಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದೇ ಭಾಷಣದಲ್ಲಿ ಅಜಂ ಖಾನ್ ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿ ನೀತಿಸಂಹಿತೆ ಉಲ್ಲಂಘಿಸಿದ್ದರು. ಈ ಕುರಿತು ರಾಂಪುರದ ಮಿಲಕ್ ಕೋಟ್ವಾಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು 153a, 505-1 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರಾಂಪುರ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು.

ಅಜಂ ಖಾನ್ 2019 ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಜಯಿಸಿದ್ದರು. ಆದರೆ ಮಾರ್ಚ್ 2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಅವರು ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ರೆ, ಇದೀಗ ಆ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

Published On - 9:04 pm, Fri, 28 October 22

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ