Azam Khan: ಯೋಗಿ ವಿರುದ್ಧ ಉದ್ರೇಕಕಾರಿ ಭಾಷಣ, ಅಜಂ ಖಾನ್​ಗೆ 3 ವರ್ಷ ಜೈಲು ಶಿಕ್ಷೆ

ಯೋಗಿ ಆದಿತ್ಯನಾಥ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ

Azam Khan: ಯೋಗಿ ವಿರುದ್ಧ ಉದ್ರೇಕಕಾರಿ ಭಾಷಣ, ಅಜಂ ಖಾನ್​ಗೆ 3 ವರ್ಷ ಜೈಲು ಶಿಕ್ಷೆ
Azam Khan, 3 Years Jail,Yogi Adityanath, Hate Speech
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 27, 2022 | 5:21 PM

ಉತ್ತರ ಪ್ರದೇಶ; ಯೋಗಿ ಆದಿತ್ಯನಾಥ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಮತ್ತು ಮಾಜಿ ಸಚಿವ ಅಜಂ ಖಾನ್ (Azam Khan) ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ರಾಂಪುರ ನ್ಯಾಯಾಲಯವು 3 ವಷಗಳ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಕಳೆದ ಮೇ ತಿಂಗಳಲ್ಲಿ ಅಜಂ ಖಾನ್ ಹೊರ ಬಂದಿದ್ದರು. ಅಂದಿನಿಂದ ಅವರು ನಿರಂತರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಪ್ರಕರಣದಲ್ಲಿ ಅಜಂ ಖಾನ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಲಾಗಿದೆ. ಮೂರು ಸೆಕ್ಷನ್‌ಗಳ ಅಡಿಯಲ್ಲಿ ಆಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ.

ಮೋದಿ ಮತ್ತು ಯೋಗಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಅಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ. ರಾಮ್‌ಪುರ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಮೋದಿ ಮತ್ತು ಯೋಗಿ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ಇತ್ತೀಚೆಗೆ ಪೂರ್ಣಗೊಂಡಿತ್ತು. ಇಂದು ರಾಂಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಇದೀಗ 3 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿದೆ.

2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಿಲ್ಲತ್ ಪ್ರದೇಶದಲ್ಲಿ ಭಾಷಣ ಮಾಡುವಾಗ ಅಜಂ ಖಾನ್ ಪ್ರಧಾನಿ ಮೋದಿ ಮತ್ತು ಯೋಗಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. ಪ್ರಚೋದನಕಾರಿ ಭಾಷಣ ಮಾಡಿದ ಅವರು, ದೇಶದ ಪರಿಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ ಎಂದು ಆರೋಪಿಸಿದ್ದರು. ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಪ್ರಚೋದನಕಾರಿ ಹೇಳಿಕೆಯನ್ನೂ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ಆಕಾಶ್ ಸಕ್ಸೇನಾ ಅವರು ಅಜಂ ಖಾನ್ ವಿರುದ್ಧ ಅಸಭ್ಯ ಹೇಳಿಕೆ ಪ್ರಕರಣದಲ್ಲಿ ಕೇಸ್ ದಾಖಲಿಸಿದ್ದರು

Published On - 4:50 pm, Thu, 27 October 22

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ