ಉತ್ತರ ಪ್ರದೇಶ; ಯೋಗಿ ಆದಿತ್ಯನಾಥ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಮತ್ತು ಮಾಜಿ ಸಚಿವ ಅಜಂ ಖಾನ್ (Azam Khan) ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ರಾಂಪುರ ನ್ಯಾಯಾಲಯವು 3 ವಷಗಳ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಕಳೆದ ಮೇ ತಿಂಗಳಲ್ಲಿ ಅಜಂ ಖಾನ್ ಹೊರ ಬಂದಿದ್ದರು. ಅಂದಿನಿಂದ ಅವರು ನಿರಂತರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಪ್ರಕರಣದಲ್ಲಿ ಅಜಂ ಖಾನ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಲಾಗಿದೆ. ಮೂರು ಸೆಕ್ಷನ್‌ಗಳ ಅಡಿಯಲ್ಲಿ ಆಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ.
ಮೋದಿ ಮತ್ತು ಯೋಗಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಅಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ. ರಾಮ್‌ಪುರ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಮೋದಿ ಮತ್ತು ಯೋಗಿ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ಇತ್ತೀಚೆಗೆ ಪೂರ್ಣಗೊಂಡಿತ್ತು. ಇಂದು ರಾಂಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಇದೀಗ 3 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿದೆ.
Samajwadi Party leader Azam Khan & 2 other accused sentenced to 3 years in prison along with a fine of Rs 2000 in the hate speech case of 2019. pic.twitter.com/TZGRB5j6FO
— ANI (@ANI) October 27, 2022
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಿಲ್ಲತ್ ಪ್ರದೇಶದಲ್ಲಿ ಭಾಷಣ ಮಾಡುವಾಗ ಅಜಂ ಖಾನ್ ಪ್ರಧಾನಿ ಮೋದಿ ಮತ್ತು ಯೋಗಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. ಪ್ರಚೋದನಕಾರಿ ಭಾಷಣ ಮಾಡಿದ ಅವರು, ದೇಶದ ಪರಿಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ ಎಂದು ಆರೋಪಿಸಿದ್ದರು. ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಪ್ರಚೋದನಕಾರಿ ಹೇಳಿಕೆಯನ್ನೂ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ಆಕಾಶ್ ಸಕ್ಸೇನಾ ಅವರು ಅಜಂ ಖಾನ್ ವಿರುದ್ಧ ಅಸಭ್ಯ ಹೇಳಿಕೆ ಪ್ರಕರಣದಲ್ಲಿ ಕೇಸ್ ದಾಖಲಿಸಿದ್ದರು
Published On - 4:50 pm, Thu, 27 October 22