BVR Subrahmanyam: ನೀತಿ ಆಯೋಗದ ಸಿಇಒ ಆಗಿ ಬಿವಿಆರ್ ಸುಬ್ರಹ್ಮಣ್ಯಂ ನೇಮಕ

|

Updated on: Feb 20, 2023 | 9:04 PM

Niti Aayog CEO ಸಚಿವ ಸಂಪುಟದ ನೇಮಕಾತಿ ಸಮಿತಿಯು ಸುಬ್ರಹ್ಮಣ್ಯಂ ನೇಮಕವನ್ನು ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

BVR Subrahmanyam: ನೀತಿ ಆಯೋಗದ ಸಿಇಒ ಆಗಿ ಬಿವಿಆರ್ ಸುಬ್ರಹ್ಮಣ್ಯಂ ನೇಮಕ
ಬಿವಿಆರ್ ಸುಬ್ರಹ್ಮಣ್ಯಂ
Follow us on

ಮಾಜಿ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ (B V R Subrahmanyam) ಅವರನ್ನು ನೀತಿ ಆಯೋಗದ(Niti Aayog) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೋಮವಾರ ನೇಮಕ ಮಾಡಲಾಗಿದೆ. ಪರಮೇಶ್ವರನ್ ಅಯ್ಯರ್ ಇದ್ದ ಸ್ಥಾನಕ್ಕೆ ಸುಬ್ರಮಣ್ಯಂ ಬಂದಿದ್ದಾರೆ. ಅಯ್ಯರ್​​ ಅವರನ್ನು ವಿಶ್ವಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಸಚಿವ ಸಂಪುಟದ ನೇಮಕಾತಿ ಸಮಿತಿಯು ಸುಬ್ರಹ್ಮಣ್ಯಂ ನೇಮಕವನ್ನು ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ನೀತಿ ಆಯೋಗದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಯ್ಯರ್ ಅವರನ್ನು ಮೂರು ವರ್ಷಗಳ ಅವಧಿಗೆ ಅಮೆರಿಕದ ವಾಷಿಂಗ್ಟನ್ ಡಿಸಿಯ ವಿಶ್ವಬ್ಯಾಂಕ್ ಪ್ರಧಾನ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.1988ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು ಅವರ ಕೇಡರ್ ರಾಜ್ಯ ಹರಿಯಾಣಕ್ಕೆ ವಾಪಸು ಕಳುಹಿಸಲಾಗಿದೆ ಎಂದು ಅಯ್ಯರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಸೇಡಿನ ರಾಜಕಾರಣ ಮಾಡುತ್ತಿಲ್ಲ: ಛತ್ತೀಸ್‌ಗಢ ಇಡಿ ದಾಳಿ ಕುರಿತು ನಿರ್ಮಲಾ ಸೀತಾರಾಮನ್

ಬಿವಿಆರ್ ಸುಬ್ರಹ್ಮಣ್ಯಂ ಅವರ ಕಿರು ಪರಿಚಯ

ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಸುಬ್ರಹ್ಮಣ್ಯಂ ಅವರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ನಿರ್ಧಾರದ ಮೊದಲು ಲೂಪ್‌ನಲ್ಲಿ ಇರಿಸಲಾದ ಕೆಲವೇ ಅಧಿಕಾರಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢ ಕೇಡರ್‌ನ 1987-ಬ್ಯಾಚ್‌ನ ಐಎಎಸ್ ಅಧಿಕಾರಿ ಸುಬ್ರಹ್ಮಣ್ಯಂ ಅವರು ಆಂತರಿಕ ಭದ್ರತೆಯಲ್ಲಿ ಪರಿಣತರಾಗಿದ್ದಾರೆ. ರಾಜ್ಯದಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ಮುರಿದುಬಿದ್ದ ನಂತರ ಜೂನ್ 2018 ರಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆಯನ್ನು ಹೇರಿದ ನಂತರ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ನಿಯೋಜಿಸುವ ಮೊದಲು ಅವರು ಛತ್ತೀಸ್‌ಗಢದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಆಗಿದ್ದರು.

56 ವರ್ಷ ವಯಸ್ಸಿನ ಅಧಿಕಾರಿ 2004 ರಿಂದ 2008 ರವರೆಗೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡಿದ ನಂತರ, ಅವರು ಮತ್ತೆ 2012 ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ ಸೇರಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರ ವಹಿಸುವ ಮುನ್ನ ಅವರು ನರೇಂದ್ರ ಮೋದಿ ಪಿಎಂಒದಲ್ಲಿ ಕಾರ್ಯ ನಿರ್ವಹಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Mon, 20 February 23