ಕೊವಿಡ್​ಗೆ ಅಲೋಪತಿ ಚಿಕಿತ್ಸೆ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪ: ಬಾಬಾ ರಾಮ್​ದೇವ್ ವಿರುದ್ಧ ಎಫ್​ಐಆರ್ ದಾಖಲು

ಕೊವಿಡ್-19ರ ಚಿಕಿತ್ಸೆಗೆ ಬಳಸುವ ಔಷಧಿಗಳ ಬಗ್ಗೆ ಬಾಬಾ ರಾಮದೇವ್ ಆಧಾರರಹಿತರಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊವಿಡ್​ಗೆ ಅಲೋಪತಿ ಚಿಕಿತ್ಸೆ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪ: ಬಾಬಾ ರಾಮ್​ದೇವ್ ವಿರುದ್ಧ ಎಫ್​ಐಆರ್ ದಾಖಲು
ಯೋಗಗುರು ಬಾಬಾ ರಾಮ್​ದೇವ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 17, 2021 | 5:12 PM

ರಾಯಪುರ: ಅಲೊಪತಿ ವೈದ್ಯಕೀಯ ಪದ್ಧತಿ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಛತ್ತೀಸಗಡ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕೊವಿಡ್-19ರ ಚಿಕಿತ್ಸೆಗೆ ಬಳಸುವ ಔಷಧಿಗಳ ಬಗ್ಗೆ ಬಾಬಾ ರಾಮದೇವ್ ಆಧಾರರಹಿತರಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​ನ (Indian Medical Association – IMA) ಛತ್ತೀಸಗಡ ಘಟಕ ನೀಡಿದ ದೂರು ಆಧರಿಸಿ ರಾಮಕೃಷ್ಣ ಯಾದವ್ ಅಲಿಯಾಸ್ ಬಾಬಾ ರಾಮದೇವ್ ಅವರ ಮೇಲೆ ಬುಧವಾರ ಪ್ರಕರಣ ದಾಖಲಿಸಲಾಯಿತು ಎಂದು ರಾಯಪುರದ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಯಾದವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ರಾಮದೇವ್ ವಿರುದ್ಧ ಭಾರತೀಯ ದಂಡಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ 188 (ಸರ್ಕಾರಿ ಆದೇಶ ಉಲ್ಲಂಘನೆ), 269 (ಸಾಂಕ್ರಾಮಿಕ ರೋಗ ಹರಡುವಂಥ ನಿರ್ಲಕ್ಷ್ಯ), 504 (ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಯತ್ನ) ಮತ್ತು ಇತರ ವಿಧಿಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು. ಐಎಂಎ ಆಸ್ಪತ್ರೆ ಮಂಡಳಿಯ ಅಧ್ಯಕ್ಷ ಡಾ.ರಾಕೇಶ್​ ಗುಪ್ತ, ರಾಯಪುರ ಘಟಕದ ಅಧ್ಯಕ್ಷ ವಿಕಾಸ್ ಅಗರ್​ವಾಲ್ ಸೇರಿದಂತೆ ಇತರರು ದೂರುಪತ್ರಕ್ಕೆ ಸಹಿಹಾಕಿದ್ದಾರೆ.

ದೂರಿನ ಪ್ರಕಾರ ಕಳೆದ ಒಂದು ವರ್ಷದಿಂದ ರಾಮದೇವ್​ ಅಲೊಪತಿ ಔಷಧಿಗಳ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಾರೆ. ಭಾರತ ಸರ್ಕಾರ ಸರ್ಕಾರ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಕೊರೊನಾ ಸೋಂಕು ತಡೆಗೆ ಶ್ರಮಿಸುತ್ತಿರುವ ಇತರ ಮುಂಚೂಣಿ ಸಂಘಟನೆಗಳ ವಿರುದ್ಧ ಬಾಬಾ ರಾಮದೇವ್ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಕೊವಿಡ್-19ರ ವಿರುದ್ಧ ಸರ್ಕಾರದ ಎಲ್ಲ ಘಟಕಗಳು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಶ್ರಮಿಸುತ್ತಿರುವಾಗ ರಾಮದೇವ್​ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ ಮತ್ತು ಸರ್ಕಾರದ ಅಂಗೀಕಾರ ಸಿಕ್ಕಿರುವ ಚಿಕಿತ್ಸಾ ಪದ್ಧತಿಗಳ ಬಗ್ಗೆ ರಾಮದೇವ್​ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ದೂರು ಉಲ್ಲೇಖಿಸಿದೆ. ಅಲೋಪತಿ ಚಿಕಿತ್ಸಾ ಪದ್ಧತಿ ಕುರಿತು ಬಾಬಾ ರಾಮದೇವ್​ ನೀಡಿರುವ ಹೇಳಿಕೆಗಳು ಜನರನ್ನು ತಪ್ಪುದಾರಿಗೆ ಎಳೆಯುವಂತಿವೆ. ಮಾತ್ರವಲ್ಲದೆ ಜನರ ಜೀವವನ್ನು ಅಪಾಯಕ್ಕೀಡುಮಾಡುವಂತಿವೆ ಎಂದು ಆರೋಪಿಸಲಾಗಿದೆ.

ದೂರಿನ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿದೆವು. ಬಾಬಾ ರಾಮದೇವ್ ಅವರ ಹಲವು ಹೇಳಿಕೆಗಳು ಛತ್ತೀಸಗಡ ಸರ್ಕಾರವು ಕಳೆದ ವರ್ಷ ಮಾರ್ಚ್​ 13ರಂದು ಬಿಡುಗಡೆ ಮಾಡಿರುವ ಅಧಿಸೂಚನೆಯನ್ನು ಉಲ್ಲಂಘಿಸಿರುವುದು ತಿಳಿದುಬಂತು. ಯಾವುದೇ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮವು ಕೊವಿಡ್-19ರ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಪೂರ್ವಾನುಮತಿಯಿಲ್ಲದೆ ಯಾವುದೇ ಮಾಹಿತಿ ಬಳಸುವಂತಿಲ್ಲ ಎಂದು ಸರ್ಕಾರದ ಅಧಿಸೂಚನೆ ತಿಳಿಸುತ್ತದೆ. ಕೊವಿಡ್-19ರ ಬಗ್ಗೆ ತಪ್ಪು ಮಾಹಿತಿ ಹರಡಬಾರದು ಎನ್ನುವ ಉದ್ದೇಶದಿಂದ ಛತ್ತೀಸಗಡ ಸರ್ಕಾರ ಈ ಆದೇಶ ಹೊರಡಿಸಿತ್ತು.

(Baba Ramdev to Face Enquiry of police FIR against Ramdev for spreading fake information on allopathy)

ಇದನ್ನೂ ಓದಿ: Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

ಇದನ್ನೂ ಓದಿ: ಯೋಗ ಗುರು ಬಾಬಾ ರಾಮ್​ದೇವ್ ಹೇಳಿಕೆ ಖಂಡಿಸಿ ವೈದ್ಯರ ಪ್ರತಿಭಟನೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್