ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಶುಭಂ ಲೋಂಕರ್‌ಗೆ ಲುಕ್ ಔಟ್ ಸುತ್ತೋಲೆ

|

Updated on: Oct 17, 2024 | 1:18 PM

ಪುಣೆಯಲ್ಲಿ ಡೇರಿ ನಡೆಸುತ್ತಿರುವ ಶುಭಂ ಲೋಂಕರ್‌ಗೆ ಕ್ರಿಮಿನಲ್ ಇತಿಹಾಸವಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಪರ್ಕವಿದೆ ಎಂದು ನಂಬಲಾದ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಜೂನ್‌ನಲ್ಲಿ ಈತನನ್ನು ಪೊಲೀಸರು ವಿಚಾರಣೆ ನಡೆಸಿದ್ದರು.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಶುಭಂ ಲೋಂಕರ್‌ಗೆ ಲುಕ್ ಔಟ್ ಸುತ್ತೋಲೆ
ಮುಂಬೈ ಪೊಲೀಸ್
Follow us on

ದೆಹಲಿ ಅಕ್ಟೋಬರ್ 17: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಬಾಬಾ ಸಿದ್ದಿಕ್ ಅವರ ಹೈ ಪ್ರೊಫೈಲ್ ಕೊಲೆ ಪ್ರಕರಣದ ಆರೋಪಿ ಶುಭಂ ಲೋಂಕರ್ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ಸುತ್ತೋಲೆ (LOC) ಹೊರಡಿಸಿದ್ದಾರೆ. ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕ್ ಅವರನ್ನು ಅಕ್ಟೋಬರ್ 12 ರ ರಾತ್ರಿ ನಿರ್ಮಲ್ ನಗರ ಪ್ರದೇಶದಲ್ಲಿ ಅವರ ಪುತ್ರ, ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.ಹರ್ಯಾಣ ಮೂಲದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಸೇರಿದಂತೆ ನಾಲ್ವರನ್ನು ಅಧಿಕಾರಿಗಳು ಇಲ್ಲಿಯವರೆಗೆ ಬಂಧಿಸಿದ್ದಾರೆ, ಇಬ್ಬರೂ ಈ ಪ್ರಕರಣದಲ್ಲಿ ಶೂಟರ್ ಎಂದು ಆರೋಪಿಸಲಾಗಿದೆ.

ಬಂಧಿತರಲ್ಲಿ ಹರೀಶ್‌ಕುಮಾರ್ ಬಾಲಕ್ರಮ್ ನಿಸಾದ್ (23) ಮತ್ತು ಸಹ ಸಂಚುಕೋರ ಪ್ರವೀಣ್ ಲೋಂಕರ್ ಸೇರಿದ್ದಾರೆ, ಈತ ಶುಭಂ ಲೋಂಕರ್ ಅವರ ಸಹೋದರ.

ಪುಣೆಯಲ್ಲಿ ಡೇರಿ ನಡೆಸುತ್ತಿರುವ ಶುಭಂ ಲೋಂಕರ್‌ಗೆ ಕ್ರಿಮಿನಲ್ ಇತಿಹಾಸವಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಪರ್ಕವಿದೆ ಎಂದು ನಂಬಲಾದ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಜೂನ್‌ನಲ್ಲಿ ಈತನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವರ್ಷದ ಆರಂಭದಲ್ಲಿ, ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಶುಭಂನನ್ನು ಬಂಧಿಸಲಾಗಿದ್ದು ಅಲ್ಲಿ ಹತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಯಿತು. ಆತನ ವಿಚಾರಣೆಯಲ್ಲಿ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್‌ಗೆ ಸಂಪರ್ಕವಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಕಣ್ಗಾವಲಿನಲ್ಲಿದ್ದರೂ, ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸೆಪ್ಟೆಂಬರ್ 24 ರಿಂದ ಶುಭಂ ಪತ್ತೆಯಾಗಿಲ್ಲ. ಈತ ಮತ್ತು ಸಿದ್ದಿಕ್ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರು ಪತ್ತೆಯನ್ನು ತಪ್ಪಿಸಲು Instagram ಮತ್ತು Snapchat ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸಂವಹನ ನಡೆಸಿದ್ದಾರೆ ಎಂದು ಅಧಿಕಾರಿಗಳು ನಂಬಿದ್ದಾರೆ.

ಇನ್ನೋರ್ವ ಆರೋಪಿ ಶಿವಕುಮಾರ್ ಗೌತಮ್, ಪ್ರಮುಖ ಶೂಟರ್ ಎಂದು ಹೇಳಲಾಗಿದ್ದು, ಉತ್ತರ ಪ್ರದೇಶದ ಮದುವೆಗಳಲ್ಲಿ ನಡೆಯುವ ಸಂಭ್ರಮಾಚರಣೆಯಲ್ಲಿ ಬಂದೂಕುಗಳನ್ನು ಚಲಾಯಿಸಲು ಕಲಿತಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಗೌತಮ್ ಅವರು ಬಂದೂಕು ತಂತ್ರಗಳನ್ನು ಕರಗತ ಮಾಡಿಕೊಳ್ಳಲು ಯೂಟ್ಯೂಬ್ ವಿಡಿಯೊಗಳನ್ನು ಬಳಸಿಕೊಂಡು ಕುರ್ಲಾದ ಬಾಡಿಗೆ ಮನೆಯಲ್ಲಿ ಸಿಂಗ್ ಮತ್ತು ಕಶ್ಯಪ್ ಅವರಿಗೆ ತರಬೇತಿ ನೀಡಿದ್ದರು.

ಇದನ್ನೂ ಓದಿ: ಅಸ್ಸಾಂ ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಸುಪ್ರೀಂಕೋರ್ಟ್

ಕೊಲೆಯ ಸಂಚು ವ್ಯಾಪಕವಾದ ಯೋಜನೆಯನ್ನು ಒಳಗೊಂಡಿತ್ತು, ಆರೋಪಿಗಳು ಸೆಕೆಂಡ್ ಹ್ಯಾಂಡ್ ಮೋಟಾರ್ ಬೈಕ್‌ನಲ್ಲಿ ಸಿದ್ದಿಕ್ ಅವರ ಮನೆ ಮತ್ತು ಕಚೇರಿ ಮೇಲೆ ಕಣ್ಣಿಟ್ಟಿದ್ದರು. ಆರೋಪಿಗಳು ಸಿದ್ದಿಕ್ ಅವರ ಮನೆ ಮತ್ತು ಕಚೇರಿಗೆ ತೆರಳಲು ಬಳಸಿದ್ದ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ತಲುಪಲು ಯೋಜಿಸಿದ್ದರು. ಆದರೆ ದಾಳಿಯ ದಿನ ಇಬ್ಬರು ಆರೋಪಿಗಳು ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದರಿಂದ ಅವರು ಆಟೋ ರಿಕ್ಷಾದಲ್ಲಿ ಜೀಶನ್ ಸಿದ್ದಿಕ್ ಅವರ ಕಚೇರಿಗೆ ಪ್ರಯಾಣಿಸಲು ಆಯ್ಕೆ ಮಾಡಿಕೊಂಡರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ