ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಬಿ.ಡಿ.ಶೆಲ್ಕೆ ಅವರು ತಮ್ಮ ಆದೇಶದಲ್ಲಿ, ಆರೋಪಿ ಬಿಷ್ಣೋಯ್ ಪರಾರಿಯಾಗಿದ್ದಾನೆಂದು ಹೇಳಿದ್ದು, ಹೀಗಾಗಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವುದು ಅಗತ್ಯ ಎಂದು ಹೇಳಿದ್ದಾರೆ.
![ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ](https://images.tv9kannada.com/wp-content/uploads/2025/01/anmol.jpg?w=1280)
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ವಾಂಟೆಡ್ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಬಿ.ಡಿ.ಶೆಲ್ಕೆ ಅವರು ತಮ್ಮ ಆದೇಶದಲ್ಲಿ, ಆರೋಪಿ ಬಿಷ್ಣೋಯ್ ಪರಾರಿಯಾಗಿದ್ದಾನೆಂದು ಹೇಳಿದ್ದು, ಹೀಗಾಗಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವುದು ಅಗತ್ಯ ಎಂದು ಹೇಳಿದ್ದಾರೆ.
ಕೊಲೆಯಲ್ಲಿ ಭಾಗಿಯಾಗಿರುವ ಆರೋಪಿಗಳಾದ ಶುಭಂ ಲೋಂಕರ್ ಮತ್ತು ಮೊಹಮ್ಮದ್ ಯಾಸಿನ್ ಅಖ್ತರ್ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸುವಾಗ ನ್ಯಾಯಾಲಯವು ಇದೇ ಕಾರಣವನ್ನು ನೀಡಿದೆ. ಏಪ್ರಿಲ್ 2024 ರಲ್ಲಿ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಹೊರಗೆ ನಡೆದ ಶೂಟಿಂಗ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಅನ್ಮೋಲ್ ಬಿಷ್ಣೋಯ್ ಅವರನ್ನು ಯುಎಸ್‌ನಲ್ಲಿರುವ ಸಕ್ಷಮ ಪ್ರಾಧಿಕಾರಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯವು ಈಗಾಗಲೇ ವಿನಂತಿ ಮಾಡಿದೆ ಎಂದು ನ್ಯಾಯಾಧೀಶರು ಹೇಳಿದರು.
ಮತ್ತಷ್ಟು ಓದಿ: ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿಯನ್ನು ಕೊಂದಿದ್ದೇಕೆ?
ಅಕ್ಟೋಬರ್ 12 ರಂದು ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 26 ಆರೋಪಿಗಳ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅನ್ಮೋಲ್ ಬಿಷ್ಣೋಯ್, ಲೋಂಕರ್ ಮತ್ತು ಅಖ್ತರ್ ಅವರನ್ನು ಪ್ರಕರಣದಲ್ಲಿ ಬೇಕಾಗಿರುವ ಆರೋಪಿಗಳೆಂದು ಹೇಳಲಾಗಿದೆ. ಅನ್ಮೋಲ್ ಬಿಷ್ಣೋಯ್ ಅಮೆರಿಕ ಅಥವಾ ಕೆನಡಾದಲ್ಲಿ ಇರುವ ಶಂಕೆ ವ್ಯಕ್ತವಾಗಿದೆ.
ಘಟನೆ ಹಿನ್ನೆಲೆ ಅಕ್ಟೋಬರ್ 12, 2024 ರ ರಾತ್ರಿ ಮುಂಬೈನ ಬಾಂದ್ರಾ (ಪೂರ್ವ) ಪ್ರದೇಶದಲ್ಲಿ ಸಿದ್ದಿಕಿ ಅವರ ಮಗ ಮತ್ತು ಮಾಜಿ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ (66) ಅವರನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ MCOCA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಅನ್ಮೋಲ್ ಬಿಷ್ಣೋಯ್ ಹಂತಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಪಿಗಳಿಗೆ ಮುಂಗಡವಾಗಿ ಪ್ಲಾಟ್, ಕಾರು ಮತ್ತು 5 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 26 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಯಸ್ಸು 19 ರಿಂದ 43 ವರ್ಷಗಳು. ಅವರಲ್ಲಿ ಹೆಚ್ಚಿನವರು ಸುಮಾರು 20 ವರ್ಷ ವಯಸ್ಸಿನವರು ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ