ಬಾಬಾ ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರು ಕಾದಿದ್ದ ಶೂಟರ್

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಇಡೀ ದೇಶಾದ್ಯಂತ ಸಂಚಲನ ಮೂಡಿಸಿದೆ. ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಶೂಟರ್ ಆಸ್ಪತ್ರೆ ಎದುರು ಕಾದಿದ್ದ ಎನ್ನುವ ವಿಚಾರವೂ ಬಹಿರಂಗಗೊಂಡಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್ ಸಿದ್ದಿಕಿ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಆತ ಆಸ್ಪತ್ರೆ ಹೊರಗೆ ಕಾದು ಕುಳಿತಿದ್ದ

ಬಾಬಾ ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರು ಕಾದಿದ್ದ ಶೂಟರ್
ಬಾಬಾ ಸಿದ್ದಿಕಿ
Follow us
ನಯನಾ ರಾಜೀವ್
|

Updated on: Nov 14, 2024 | 11:03 AM

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಇಡೀ ದೇಶಾದ್ಯಂತ ಸಂಚಲನ ಮೂಡಿಸಿದೆ. ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಶೂಟರ್ ಆಸ್ಪತ್ರೆ ಎದುರು ಕಾದಿದ್ದ ಎನ್ನುವ ವಿಚಾರವೂ ಬಹಿರಂಗಗೊಂಡಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್ ಸಿದ್ದಿಕಿ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಆತ ಆಸ್ಪತ್ರೆ ಹೊರಗೆ ಕಾದು ಕುಳಿತಿದ್ದ.

ಅಕ್ಟೋಬರ್ 12ರಂದು ಸಿದ್ದಿಕಿ ಅವರ ಮಗ ಜೀಶಾನ್ ಕಚೇರಿ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಎದೆಗೆ ಎರಡು ಗುಂಡುಗಳು ಹೊಕ್ಕಿದ್ದವು, ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಎನ್​ಸಿಪಿಯ ನಾಯಕನ ಮೇಲೆ ರಾತ್ರಿ 9.11ರ ಸುಮಾರಿಗೆ ಗುಂಡಿನ ದಾಳಿ ನಡೆದಿತ್ತು, ಶೂಟ್ ಮಾಡಿ ಸ್ವಲ್ಪ ಸಮಯದ ನಂತರ ಆರೋಪಿ ಶಿವಕುಮಾರ್ ಬಟ್ಟೆಯನ್ನು ಬದಲಾಯಿಸಿದ್ದ, ನಂತರ ಲೀಲಾವತಿ ಆಸ್ಪತ್ರೆಗೆ ತೆರಳಿ 30 ನಿಮಿಷಗಳ ಕಾಲ ಅಲ್ಲಿಯೇ ನಿಂತು ಸಾವನ್ನು ದೃಢಪಡಿಸಿಕೊಂಡಿದ್ದ ಎನ್ನುವ ವಿಚಾರವನ್ನು ಆತನೇ ಬಾಯ್ಬಿಟ್ಟಿದ್ದಾನೆ.

ಮತ್ತಷ್ಟು ಓದಿ: Baba Siddique Murder Case: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ, ಪ್ರಮುಖ ಆರೋಪಿಯ ಬಂಧನ

ತಮ್ಮ ಸಹಾಯಕರಾದ ಧರ್ಮರಾಜ್ ಕಶ್ಯಪ್ ಮತ್ತು ಗುರ್ಮೈಲ್ ಸಿಂಗ್ ಅವರನ್ನು ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಭೇಟಿಯಾಗಬೇಕಿತ್ತು, ಅಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರೊಬ್ಬರು ಅವರನ್ನು ವೈಷ್ಣೋ ದೇವಿಗೆ ಕರೆದೊಯ್ಯಲಿದ್ದರು. ಕಶ್ಯಪ್ ಮತ್ತು ಸಿಂಗ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದರಿಂದ ಪ್ಲ್ಯಾನ್ ವಿಫಲವಾಯಿತು.

ಉತ್ತರ ಪ್ರದೇಶದಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ಹಿಂದಿನ ಪ್ರಮುಖ ಶೂಟರ್ ಶಿವಕುಮಾರ್ ಗೌತಮ್‌ನನ್ನು ಪತ್ತೆಹಚ್ಚಲು ಮುಂಬೈ ಪೊಲೀಸರಿಗೆ ನಾಲ್ವರು ಆರೋಪಿಗಳ ಸಂಭಾಷಣೆಯು ಸಹಾಯ ಮಾಡಿತ್ತು.

ಗೌತಮ್ ಮತ್ತು ಅನುರಾಗ್ ಕಶ್ಯಪ್, ಜ್ಞಾನ್ ಪ್ರಕಾಶ್ ತ್ರಿಪಾಠಿ, ಆಕಾಶ್ ಶ್ರೀವಾಸ್ತವ ಮತ್ತು ಅಖಿಲೇಂದ್ರ ಪ್ರತಾಪ್ ಸಿಂಗ್ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಮತ್ತು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನೇಪಾಳದ ಗಡಿಯ ಸಮೀಪ ಉತ್ತರ ಪ್ರದೇಶದ ನಾನ್ಪಾರಾ ಪ್ರದೇಶದಲ್ಲಿ ಭಾನುವಾರ ಬಂಧಿಸಿದೆ.

ನೇಪಾಳ ಮಾರ್ಗದ ಮೂಲಕ ದೇಶದಿಂದ ಪಲಾಯನ ಮಾಡಲು ಶಿವಕುಮಾರ್ ಗೌತಮ್‌ಗೆ ಸಹಾಯ ಮಾಡಲು ಅವರು ಉದ್ದೇಶಿಸಿದ್ದರು ಎಂದು ಪೊಲೀಸರು ಕಂಡುಕೊಂಡರು. ಶಿವಕುಮಾರ್ ಗೌತಮ್ ನೇಪಾಳದ ಗಡಿಗೆ ಸಮೀಪವಿರುವ ದೂರದ ಹಳ್ಳಿಯಲ್ಲಿ ಪತ್ತೆಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ