Babar Murder Case: ಖುಷಿನಗರದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮುಸ್ಲಿಂ ವ್ಯಕ್ತಿಯ ಹತ್ಯೆ; 4 ಆರೋಪಿಗಳ ಬಂಧನ

ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಆಚರಿಸಿದ್ದಕ್ಕಾಗಿ ಮತ್ತು ಬಿಜೆಪಿ ಗೆಲುವಿನ ನಂತರ ಸಿಹಿ ಹಂಚಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಾಬರ್ ಅಲಿ ಅಕ್ಕಪಕ್ಕದ ಮುಸ್ಲಿಮರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ ಅವರನ್ನು ಕೊಲೆ ಮಾಡಲಾಗಿತ್ತು.

Babar Murder Case: ಖುಷಿನಗರದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮುಸ್ಲಿಂ ವ್ಯಕ್ತಿಯ ಹತ್ಯೆ; 4 ಆರೋಪಿಗಳ ಬಂಧನ
ಬಾಬರ್ ಮೃತದೇಹವನ್ನು ಹೊತ್ತು ಸಾಗಿದ ಯುವಕರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 29, 2022 | 6:43 PM

ಲಕ್ನೋ: ಉತ್ತರ ಪ್ರದೇಶದಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿಯ ಚುನಾವಣಾ ಗೆಲುವನ್ನು ಆಚರಿಸಿದ್ದಕ್ಕಾಗಿ ಮುಸ್ಲಿಂ ಯುವಕನನ್ನು ಹತ್ಯೆಗೈದ ಖುಷಿನಗರ ಕೊಲೆ ಪ್ರಕರಣ ಸಾಕಷ್ಟು ಚರ್ಚೆಗೊಳಗಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಅಜೀಮುಲ್ಲಾ ಮತ್ತು ಸಲ್ಮಾನನ್ನು ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ತಾಹಿದ್ ಮತ್ತು ಆರಿಫ್ ಎಂಬ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಬರ್ ಅಲಿ ಎಂಬ 28 ವರ್ಷದ ವ್ಯಕ್ತಿಯನ್ನು ಮಾರ್ಚ್ 20ರಂದು ಅವರ ನೆರೆಹೊರೆಯವರು ಕೊಲೆ ಮಾಡಿದ್ದರು. ಇತ್ತೀಚೆಗೆ ಮುಕ್ತಾಯಗೊಂಡ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಗೆಲುವನ್ನು ಆಚರಿಸಿದ್ದಕ್ಕಾಗಿ ಮತ್ತು ಬಿಜೆಪಿ ಗೆಲುವಿನ ನಂತರ ಸಿಹಿ ಹಂಚಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಾಬರ್ ಅಲಿ ಅಕ್ಕಪಕ್ಕದ ಮುಸ್ಲಿಮರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು ಯೋಗಿ ಆದಿತ್ಯನಾಥ್ ಸರ್ಕಾರ ತ್ವರಿತ ಕ್ರಮಕ್ಕೆ ಆದೇಶಿಸಿತ್ತು.

ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಕ್ಕೆ ಹಾಗೂ ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ವಿಜಯೋತ್ಸವ ಆಚರಿಸಿದ್ದಕ್ಕಾಗಿ ಉತ್ತರ ಪ್ರದೇಶದ ಖುಷಿನಗರದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದರು. ಮಾರ್ಚ್ 20ರಂದು ಕಥರ್‌ಗರ್ಹಿಯಲ್ಲಿ ಬಾಬರ್ ಅಲಿಯನ್ನು ಥಳಿಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರು. ಭಾನುವಾರ ಅವರ ಮೃತದೇಹವನ್ನು ಅವರ ಗ್ರಾಮಕ್ಕೆ ಕೊಂಡೊಯ್ಯಿದಾಗ, ಅವರ ಕುಟುಂಬದವರು ಆತನ ಅಂತ್ಯಕ್ರಿಯೆಯನ್ನು ಮಾಡಲು ನಿರಾಕರಿಸಿದ್ದರು. ಆತನನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದರು.

ಬಾಬರ್‌ನ ಕುಟುಂಬದ ಪ್ರಕಾರ, ಬಾಬರ್ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರಣ ಅವರ ನೆರೆಹೊರೆಯವರು ಅಸಮಾಧಾನಗೊಂಡಿದ್ದರು. ಮಾರ್ಚ್ 10ರಂದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಇದರಿಂದ ಬಾಬರ್ ತನ್ನ ಊರಿನ ಸುತ್ತಮುತ್ತ ಸಿಹಿ ಹಂಚಿದ್ದರು ಎಂದು ಅವರ ಕುಟುಂಬ ಮಾಹಿತಿ ನೀಡಿದೆ. ಬಿಜೆಪಿಯನ್ನು ಬೆಂಬಲಿಸದಿರುವ ಬಗ್ಗೆ ಅವರ ನೆರೆಹೊರೆಯವರು ಆತನಿಗೆ ಪದೇಪದೆ ಎಚ್ಚರಿಕೆ ನೀಡಿದ್ದರು ಎಂದು ಕುಟುಂಬ ಹೇಳಿಕೊಂಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ಸಂಭ್ರಮ ಆಚರಿಸಿದ ಮುಸ್ಲಿಂ ಯುವಕನ ಹತ್ಯೆ; ತನಿಖೆಗೆ ಸಿಎಂ ಯೋಗಿ ಆದೇಶ

ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಎಂಬ ಸಂದೇಶ ಹರಡಿದ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್​ಡಿ ಕುಮಾರಸ್ವಾಮಿ ಆಗ್ರಹ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ