AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babasaheb Purandare: 99 ವರ್ಷದ ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ನಿಧನ

Padma Vibhushan Babasaheb Purandare: ಬಲವಂತ ಮೋರೇಶ್ವರ ಪುರಂದರೆಯಾಗಿ ಜನಿಸಿದ ಬಾಬಾಸಾಹೇಬರು ಛತ್ರಪತಿ ಶಿವಾಜಿಯ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಅವರಿಗೆ 2019ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Babasaheb Purandare: 99 ವರ್ಷದ ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ನಿಧನ
ಬಾಬಾಸಾಹೇಬ್ ಪುರಂದರೆ- ಪ್ರಧಾನಿ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 15, 2021 | 10:58 AM

Share

ಮುಂಬೈ: ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಖ್ಯಾತ ಇತಿಹಾಸಕಾರರಾಗಿದ್ದ 99 ವರ್ಷದ ಬಾಬಾಸಾಹೇಬ್ ಪುರಂದರೆ (Babasaheb Purandare) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ವಯೋಸಹಜ ಕಾಯಿಲೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿದ್ದರು. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಅವರು ಮೃತಪಟ್ಟಿದ್ದಾರೆ. ಬಾಬಾಸಾಹೇಬ್ ಪುರಂದರೆ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Maharashtra Chief Minister Uddhav Thackeray) ಘೋಷಿಸಿದ್ದಾರೆ.

ಇತಿಹಾಸಕಾರ ಬಾಬಾಸಾಹೇಬ್ ಪುರಂದರೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಪುರಂದರೆ ಅವರ ನಿಧನದ ವಿಷಯ ತಿಳಿದು ಮಾತಿಗೂ ನಿಲುಕದಷ್ಟು ನನಗೆ ನೋವಾಗಿದೆ. ಅವರ ನಿಧನದಿಂದ ಇತಿಹಾಸ ಮತ್ತು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಬಗ್ಗೆ ಮುಂದಿನ ಪೀಳಿಗೆಗೂ ತಿಳಿಸುವಂತೆ ಮಾಡಿದ ಪುರಂದರೆ ಅವರ ಕೆಲಸಕ್ಕೆ ನಾವು ಕೃತಜ್ಞರಾಗಿರಬೇಕು. ಅವರ ಇನ್ನಿತರ ಕೆಲಸಗಳು ಕೂಡ ಇತಿಹಾಸದಲ್ಲಿ ಅಜರಾಮರವಾಗಿರಲಿವೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಲವಂತ ಮೋರೇಶ್ವರ ಪುರಂದರೆಯಾಗಿ ಜನಿಸಿದ ಬಾಬಾಸಾಹೇಬರು ಛತ್ರಪತಿ ಶಿವಾಜಿಯ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಇತಿಹಾಸ ಮತ್ತು ಸಂಶೋಧನೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರಿಗೆ 2019ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ಮತ್ತು 2015ರಲ್ಲಿ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಪದ್ಮವಿಭೂಷಣ ಬಾಬಾಸಾಹೇಬ್ ಪುರಂದರೆ ಅವರು ಇಂದು ಬೆಳಗ್ಗೆ 5 ಗಂಟೆಗೆ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ನಿಧನರಾದರು. ಪುಣೆಯ ವೈಕುಂಠ ಚಿತಾಗಾರದಲ್ಲಿ ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಇತಿಹಾಸಕಾರ ಹಾಗೂ ಲೇಖಕ ಬಾಬಾಸಾಹೇಬ ಪುರಂದರೆ ಶನಿವಾರ ಬಾತ್​ರೂಂನಲ್ಲಿ ಬಿದ್ದು ಗಾಯಗೊಂಡಿದ್ದರಿಂದ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ನರೇಂದ್ರ ಮೋದಿಯವರಿಗೆ ಸೀರೆ ಉಡುಗೊರೆ ಕೊಟ್ಟ ಪದ್ಮಶ್ರೀ ಪುರಸ್ಕೃತ; ಗಿಫ್ಟ್​ ನೋಡಿ ಪ್ರಧಾನಿಗೆ ಖುಷಿಯೋ ಖುಷಿ !

ಬರಿಗಾಲಲ್ಲೇ ತೆರಳಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ; ಅಕ್ಷರ ಸಂತನ ಸರಳತೆ ಕಂಡು ರಾಷ್ಟ್ರಪತಿಗೂ ಅಚ್ಚರಿ

Published On - 10:55 am, Mon, 15 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ