Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ

ದೇವಾಲಯ ಮತ್ತು ಮಸೀದಿಯನ್ನು ರೆಡ್ ಝೋನ್ ಎಂದು ಗುರುತಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆ ಏರ್ಪಡಿಸಲಾಗಿದೆ. "ಮಥುರಾದ ಪ್ರತಿ ಪ್ರವೇಶ ಸ್ಥಳಗಳಲ್ಲಿಯೂ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗಿದೆ" ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ.

Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ
ಬಾಬರಿ ಮಸೀದಿ (ಸಂಗ್ರಹ ಚಿತ್ರ)
Follow us
| Updated By: ರಶ್ಮಿ ಕಲ್ಲಕಟ್ಟ

Updated on: Dec 06, 2021 | 10:43 AM

ಮಥುರಾ: ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವದ(Babri demolition anniversary) ಹಿನ್ನೆಲೆಯಲ್ಲಿ ಉತ್ತರ ಪ್ರದೇಶ(Uttar Pradesh)ಸರ್ಕಾರ ಮಥುರಾದಲ್ಲಿ(Mathura) ಭಾರೀ ಭದ್ರತೆಯನ್ನು ನಿಯೋಜಿಸಿದೆ. ಅಖಿಲ ಭಾರತ ಹಿಂದೂ ಮಹಾ ಸಭಾವು(Akhil Bharat Hindu Mahasabha) ಶಾಹಿ ಈದ್ಗಾ ಮಸೀದಿಯೊಳಗೆ (Shahi Idgah Masjid)ಇರುವ ದೇವರ “ನಿಜವಾದ ಜನ್ಮಸ್ಥಳ” ದಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿ ಕೋರಿದ ನಂತರ ಮಥುರಾದಲ್ಲಿ ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಆಡಳಿತವು ಕತ್ರಾ ಕೇಶವ್ ದೇವ್ ದೇವಸ್ಥಾನ (Katra Keshav Dev temple)  ಮತ್ತು ಶಾಹಿ ಈದ್ಗಾ (Shahi Idgah) ವ್ಯಾಪ್ತಿ ಪ್ರದೇಶವನ್ನು ಮೂರು ವಲಯಗಳಾಗಿ ವಿಂಗಡಿಸಿದೆ. ದೇವಾಲಯ ಮತ್ತು ಮಸೀದಿಯನ್ನು ರೆಡ್ ಝೋನ್ ಎಂದು ಗುರುತಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆ ಏರ್ಪಡಿಸಲಾಗಿದೆ. “ಮಥುರಾದ ಪ್ರತಿ ಪ್ರವೇಶ ಸ್ಥಳಗಳಲ್ಲಿಯೂ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ. “ಸೆಕ್ಷನ್ 144 ಇಲ್ಲಿ ಜಾರಿಯಲ್ಲಿದೆ. ಯಾವುದೇ ಧರ್ಮ ಅಥವಾ ಸಮುದಾಯದ ಯಾವುದೇ ವ್ಯಕ್ತಿ ವದಂತಿಗಳನ್ನು ಹರಡಲು ಅಥವಾ ಧಾರ್ಮಿಕ ಭಾವೋದ್ರೇಕವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮವನ್ನು ಬಳಸಿದರೆ, ನಾವು ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಮಥುರಾ ಎಸ್​​ಪಿ ತಿಳಿಸಿದ್ದಾರೆ.

ನಗರ ಪೊಲೀಸರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮಥುರಾ ಆಡಳಿತವು ಸಿಆರ್​​ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ವಿಧಿಸಿದೆ. ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ.  ಡಿಸೆಂಬರ್ 6 ರಂದು ಮಸೀದಿಯಲ್ಲಿ ಕೃಷ್ಣನ ವಿಗ್ರಹವನ್ನು ಪ್ರತಿಷ್ಠಾಪಿಸುವುದಾಗಿ ಬಲಪಂಥೀಯ ಗುಂಪುಗಳ ಬೆದರಿಕೆಯ ವಿರುದ್ಧ ಅದರ ಸನ್ನದ್ಧತೆಯನ್ನು ಪರಿಶೀಲಿಸಲು ಮಥುರಾ ಪೊಲೀಸರು ಡಿಸೆಂಬರ್ 5 ರಂದು ಗಲಭೆ ವಿರೋಧಿ ಕವಾಯತು ನಡೆಸಿದರು.

ಏತನ್ಮಧ್ಯೆ, ಹಿಂದೂ ಮಹಾಸಭಾವು ಶ್ರೀಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಶಾಹಿ ಈದ್ಗಾಕ್ಕೆ ತನ್ನ ಉದ್ದೇಶಿತ ಮೆರವಣಿಗೆಯನ್ನು ರದ್ದುಗೊಳಿಸಿದೆ. ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ, ಉತ್ತರ ಪ್ರದೇಶ ಪೊಲೀಸರು 1992 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನಾಂಕವಾದ ಡಿಸೆಂಬರ್ 6 ರ ಮೊದಲು ಮಥುರಾದಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಿದ್ದರು.

ಏತನ್ಮಧ್ಯೆ, ವಿಶ್ವ ಹಿಂದೂ ಪರಿಷತ್ (VHP) ಡಿಸೆಂಬರ್ 6 ರಂದು ಯಾವುದೇ ಪ್ರಮುಖ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ಘೋಷಿಸಿದೆ. ವಿಹಿಂಪ ಈ ದಿನವನ್ನು ‘ಶೌರ್ಯ ದಿವಸ್’ ಎಂದು ಆಚರಿಸುತ್ತದೆ.ಡಿಸೆಂಬರ್ 6, 1992 ರಂದು ಅಯೋಧ್ಯೆಯಲ್ಲಿ ಕರಸೇವಕರು ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದರು.ಈ ಬಗ್ಗೆ ಐಎಎನ್‌ಎಸ್‌ಗೆ ಜತೆ ಮಾತನಾಡಿದ ಬಿಜೆಪಿ ನಾಯಕ ವಿನಯ್ ಕಟ್ಯಾರ್, ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಆಡಳಿತ ಮಂಡಳಿಯ ಎಚ್ಚರಿಕೆಯ ನಡುವೆಯೂ ರಾಮ್​ ಕೆ ನಾಮ್​ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್​ಯು ವಿದ್ಯಾರ್ಥಿ ಒಕ್ಕೂಟ; ತಪ್ಪೇನಿದೆ? ಸತ್ಯವನ್ನೇ ತೋರಿಸುತ್ತದೆ ಎಂದ ಅಧ್ಯಕ್ಷೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ