AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲೊಂದು ಬೇಬಿ ಬಜಾರ್! 8 ಲಕ್ಷಕ್ಕೆ ಗಂಡು ಮಗು, 4 ಲಕ್ಷಕ್ಕೆ ಹೆಣ್ಣು ಮಗು ಮಾರಾಟ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಆಘಾತಕಾರಿ ಶಿಶು ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ರಾಜಸ್ಥಾನದಲ್ಲಿ ಹುಟ್ಟಿದ ಮಗು ಕೆಲವೇ ದಿನಗಳಲ್ಲಿ ದೆಹಲಿಗೆ ರವಾನೆಯಾಗಿ ಅಲ್ಲಿಂದ ಹರಿಯಾಣದ ದಂಪತಿಗಳಿಗೆ ಲಕ್ಷಾಂತರ ರೂಪಾಯಿಗೆ ಮಾರಾಟವಾಗುತ್ತದೆ. ಪೋಷಕರು ಬಡತನದ ಕಾರಣಕ್ಕೆ ತಮ್ಮ ಮಕ್ಕಳನ್ನು ಹರಾಜು ಹಾಕುತ್ತಿದ್ದಾರೆ. ಕೇವಲ 4 ದಿನದ ಹಸುಗೂಸುಗಳನ್ನು ಬಡ ಪೋಷಕರಿಂದ ಖರೀದಿಸಿ, ಮಕ್ಕಳಿಲ್ಲದ ದಂಪತಿಗಳಿಗೆ ಮಾರುತ್ತಿದ್ದ ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ವ್ಯಾಪ್ತಿಯ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ.

ದೆಹಲಿಯಲ್ಲೊಂದು ಬೇಬಿ ಬಜಾರ್! 8 ಲಕ್ಷಕ್ಕೆ ಗಂಡು ಮಗು, 4 ಲಕ್ಷಕ್ಕೆ ಹೆಣ್ಣು ಮಗು ಮಾರಾಟ
Delhi Police Team With Child Trafficking AccusedImage Credit source: NDTV
ಸುಷ್ಮಾ ಚಕ್ರೆ
|

Updated on: Jun 20, 2026 | 6:08 PM

Share

ನವದೆಹಲಿ, ಜೂನ್ 20: ಹೆತ್ತ ಮಕ್ಕಳನ್ನು ಹಣಕ್ಕೆ ಬೇರೆಯವರಿಗೆ ಮಾರಾಟ ಮಾಡಲು ಯಾರಿಗಾದರೂ ಮನಸು ಬರುತ್ತದೆಯೇ? ಆದರೆ, ದುಡ್ಡಿನ ಆಸೆಗೆ ಇಂತಹ ನೀಚ ಕೃತ್ಯಕ್ಕೆ ದೆಹಲಿಯ (Delhi) ಸುತ್ತಮುತ್ತಲಿನ ಅನೇಕ ರಾಜ್ಯಗಳ ಪೋಷಕರು ಮುಂದಾಗಿದ್ದಾರೆ. ದೆಹಲಿಯಲ್ಲಿ ‘ಬೇಬಿ ಬಜಾರ್’ ಸೃಷ್ಟಿಯಾಗಿದ್ದು, ಇಲ್ಲಿ ಗಂಡು ಮಗುವಿಗೆ 8 ಲಕ್ಷ ರೂ.ವರೆಗೂ ನೀಡಿ ಖರೀದಿಸಲಾಗುತ್ತಿದೆ. ಅದರ ಅರ್ಧ ಬೆಲೆಗೆ ಹೆಣ್ಣು ಮಗುವನ್ನು ಮಾರಾಟ ಮಾಡಲಾಗುತ್ತಿದೆ.

ಪೊಲೀಸ್ ತನಿಖೆಯ ಪ್ರಕಾರ, ಈ ಕರಾಳ ದಂಧೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಬೇರೆ ಬೇರೆ ದರ ನಿಗದಿಪಡಿಸಲಾಗಿತ್ತು. ಬಡ ಪೋಷಕರಿಂದ ಸುಮಾರು 1 ಲಕ್ಷ ರೂ.ಗೆ ಹೆಣ್ಣು ಮಗುವನ್ನು ಪಡೆದು, ಮಕ್ಕಳಿಲ್ಲದ ದಂಪತಿಗಳಿಗೆ 3ರಿಂದ 4 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಸುಮಾರು 2 ಲಕ್ಷ ರೂ.ಗೆ ಗಂಡು ಮಗುವನ್ನು ಖರೀದಿಸಿ, 6ರಿಂದ 8 ಲಕ್ಷ ರೂಪಾಯಿವರೆಗಿನ ಭಾರಿ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿತ್ತು.

ದೆಹಲಿಯ ಪಹಾರ್‌ಗಂಜ್ ನಿವಾಸಿಯೊಬ್ಬರು ನೀಡಿದ ಸುಳಿವು ಈ ಯಶಸ್ವಿ ಕಾರ್ಯಾಚರಣೆಗೆ ಕಾರಣವಾಯಿತು. ಜ್ಯೋತಿ ಎಂಬ ಮಹಿಳೆ ಪ್ರತಿ ಬಾರಿ ಬೇರೆ ಬೇರೆ ಹಸುಗೂಸುಗಳೊಂದಿಗೆ ಆ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದಳು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತನಿಖೆ ನಡೆಸಿದಾಗ ಈಕೆ ಹಸುಗೂಸುಗಳ ಮಾರಾಟ ದಂಧೆಯಲ್ಲಿ ತೊಡಗಿರುವುದು ಖಚಿತವಾಯಿತು.

ಇದನ್ನೂ ಓದಿ: ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಹೀಗಾಗಿ, ಈ ದಂಧೆಯನ್ನು ಬಯಲು ಮಾಡಬೇಕೆಂದು ಪೊಲೀಸ್ ಅಧಿಕಾರಿಯೊಬ್ಬರು ತಮಗೆ ಮಗು ಬೇಕೆಂದು ನಕಲಿ ಗ್ರಾಹಕಿಯಾಗಿ ಜ್ಯೋತಿಯನ್ನು ಸಂಪರ್ಕಿಸಿದರು. 20,000 ರೂ. ಮುಂಗಡ ಹಣ ನೀಡಿ ಮಗುವನ್ನು ಪಡೆಯುವಾಗ, ಜೂನ್ 5ರಂದು ಆಕೆಯನ್ನು ಸ್ಥಳದಲ್ಲೇ ಬಂಧಿಸಲಾಯಿತು. ಆಕೆಯನ್ನು ವಿಚಾರಣೆ ನಡೆಸಿದಾಗ ಈ ಶಿಶು ಮಾರಾಟ ಜಾಲದ ಬಗ್ಗೆ ಎಲ್ಲವೂ ಬಯಲಾಯಿತು.

ಇದರ ಬೆನ್ನಲ್ಲೇ ಆಕೆಯ ಸಹಚರರಾದ ಶಾಲು, ಲಲಿತ್, ಪ್ರತಿಭಾ ಮತ್ತು ವಿಪಿನ್ ಎಂಬುವವರನ್ನು ಪೊಲೀಸರು ಬಂಧಿಸಿದರು. ಪ್ರತಿಭಾ ಮತ್ತು ವಿಪಿನ್ ಬಂಧನಕ್ಕೊಳಗಾದಾಗ ಅವರ ಬಳಿ 3 ಲಕ್ಷ ರೂಪಾಯಿ ಪತ್ತೆಯಾಯಿತು. ಸತತ ತನಿಖೆಯ ನಂತರ ಪೊಲೀಸರು ಒಂದು ತಿಂಗಳೊಳಗಿನ 5 ಹಸುಗೂಸುಗಳನ್ನು ರಕ್ಷಿಸಿದರು. ಆರೋಪಿಗಳ ವಿಚಾರಣೆಯಿಂದ ರೋಹಿಣಿಯ ಬೇಗಂಪುರದಲ್ಲಿರುವ ‘ಹೀರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ’ ಈ ದಂಧೆಯ ಪ್ರಮುಖ ಕೇಂದ್ರ ಮತ್ತು ಅದರ ಮಾಲೀಕ ಡಾ. ವಿವೇಕಿ ಇದರ ಸೂತ್ರಧಾರಿ ಎಂಬುದು ತಿಳಿದುಬಂದಿದೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ದೆಹಲಿಯ ಡಿಸಿಪಿ ರೋಹಿತ್ ರಾಜ್‌ಬೀರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, “ಖರೀದಿಸಿದ ಮಕ್ಕಳನ್ನು ದಂಪತಿಗಳಿಗೆ ತಲುಪಿಸುವವರೆಗೆ ಇದೇ ಆಸ್ಪತ್ರೆಯಲ್ಲಿ ಇಡಲಾಗುತ್ತಿತ್ತು. ಡಾ. ವಿವೇಕಿ ಮಕ್ಕಳ ನಕಲಿ ಜನನ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಸೃಷ್ಟಿಸಿ, ಮಗು ಆಸ್ಪತ್ರೆಯಲ್ಲೇ ಜನಿಸಿದೆ ಎಂದು ಬಿಂಬಿಸುತ್ತಿದ್ದರು. ಅವರೇ ಈ ದಂಧೆಗೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ

ಈ ಪ್ರಕರಣದಲ್ಲಿ ಗುಜರಾತ್‌ನ ಸಬರಕಾಂಠಾದಲ್ಲಿ ಸಬಾಭಾಯ್ ಗಮಾರ್ ಅಲಿಯಾಸ್ ಕಾಲಿಯಾ ಎಂಬಾತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈತ ರಾಜಸ್ಥಾನದ ಪಾಲಿ ಮತ್ತು ಗುಜರಾತ್‌ನ ಬಡ ಕುಟುಂಬಗಳಿಂದ ಮಕ್ಕಳನ್ನು ತಂದು ದೆಹಲಿಯ ಆಸ್ಪತ್ರೆಗೆ ತಲುಪಿಸುತ್ತಿದ್ದ. ಈ ಗ್ಯಾಂಗ್ ಕಳೆದ 1 ವರ್ಷದಲ್ಲಿ ಕನಿಷ್ಠ 30 ಮಕ್ಕಳನ್ನು ಮಾರಾಟ ಮಾಡಿದೆ. ಹರಿಯಾಣದ ಪಾಣಿಪತ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮಕ್ಕಳನ್ನು ಖರೀದಿಸಿದ್ದ ದಂಪತಿಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಕ್ಕಳನ್ನು ಮಾರಿದ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎನ್​ಡಿಟಿವಿ ವರದಿಯಲ್ಲಿ ತಿಳಿಸಿದೆ.

ಈ ಕಾರ್ಯಾಚರಣೆಯಲ್ಲಿ ರಕ್ಷಿಸಲಾದ 5 ಹಸುಗೂಸುಗಳನ್ನು ಮಕ್ಕಳ ಕಲ್ಯಾಣ ಸಮಿತಿಯ (CWC) ಪಾಲನಾ ಕೇಂದ್ರದಲ್ಲಿ ಸುರಕ್ಷಿತವಾಗಿಡಲಾಗಿದ್ದು, ಕಾನೂನುಬದ್ಧ ದತ್ತು ಪ್ರಕ್ರಿಯೆ ಅಥವಾ ಮಕ್ಕಳ ಹೋಮ್‌ಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು