AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು

ತಮಿಳುನಾಡಿನ ಈರೋಡ್‌ನಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಆನೆ ಮರಿಯೊಂದು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನನ್ನು ಬಂಧಿಸಲಾಗಿದೆ. ತಮಿಳುನಾಡಿನ ಕಾಡಿನಲ್ಲಿ ಕಾಡುಹಂದಿಗಳಿಗಾಗಿ ಇಟ್ಟಿದ್ದ ದೇಶಿ ನಿರ್ಮಿತ ಬಾಂಬ್ ಅನ್ನು ಆಕಸ್ಮಿಕವಾಗಿ ಕಚ್ಚಿ ಹೆಣ್ಣು ಆನೆ ಮರಿ ಸಾವನ್ನಪ್ಪಿದೆ. ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಕಡಂಬೂರು ಅರಣ್ಯ ವ್ಯಾಪ್ತಿಯ ಪೂತಿಕಾಡು ಅರಣ್ಯ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ ಆ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿದುದರಿಂದಾಗಿ ಆನೆ ಮರಿ ಸತ್ತಿರುವುದು ಬೆಳಕಿಗೆ ಬಂದಿತ್ತು.

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು
Elephant Died In Erode
ಸುಷ್ಮಾ ಚಕ್ರೆ
|

Updated on: Jan 13, 2026 | 6:54 PM

Share

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು.

ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ ರಕ್ತಸ್ರಾವದ ಗಾಯಗಳು ಕಂಡುಬಂದಿತ್ತು. ಪಶುವೈದ್ಯರು ಶವಪರೀಕ್ಷೆ ನಡೆಸಿ ದೇಶಿ ನಿರ್ಮಿತ ಬಾಂಬ್ ಸೇವಿಸಿದ ನಂತರ ಆನೆ ಸಾವನ್ನಪ್ಪಿದೆ ಎಂದು ಘೋಷಿಸಿದ್ದಾರೆ. ಕಾಡು ಹಂದಿಗಳು ಹೊಲಗಳಿಗೆ ಪ್ರವೇಶಿಸದಂತೆ ತಡೆಯಲು ರೈತರು ಆ ಬಾಂಬ್ ಅನ್ನು ಅಲ್ಲಿಗೆ ಎಸೆದಿರಬಹುದು ಎಂದು ಅರಣ್ಯ ಅಧಿಕಾರಿಗಳು ಶಂಕಿಸಿದ್ದಾರೆ.

ಇದನ್ನೂ ಓದಿ: Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು

ಈ ಘಟನೆಯ ನಂತರ, ಅರಣ್ಯ ಪ್ರದೇಶದಲ್ಲಿ ಬಾಂಬ್ ಇಟ್ಟವರು ಯಾರು ಎಂಬುದನ್ನು ಕಂಡುಹಿಡಿಯಲು ಅರಣ್ಯ ಇಲಾಖೆ ತನಿಖೆ ಆರಂಭಿಸಿತು. ಹತ್ತಿರದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ವಿವರವಾದ ಪರಿಶೀಲನೆಯಿಂದ ಈ ಕೃತ್ಯಕ್ಕೆ ಕಾರಣ ಯಾರು ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಿದ ನಂತರ, ಆ ಪ್ರದೇಶದ ರೈತ ಕಾಳಿಮುತ್ತು (43) ಎಂಬುವವರನ್ನು ಬಂಧಿಸಲಾಗಿದೆ. ಆನೆ ಮರಿಯ ಮೃತದೇಹವನ್ನು ಅದೇ ಪ್ರದೇಶದಲ್ಲಿ ಹೂಳಲಾಗಿದೆ.

ವಿಚಾರಣೆಯ ಸಮಯದಲ್ಲಿ, ಕಾಳಿಮುತ್ತು ಮತ್ತು ಇನ್ನೊಬ್ಬ ವ್ಯಕ್ತಿ ಕಾಡುಹಂದಿಗಳನ್ನು ಬೇಟೆಯಾಡಲು ದೇಶೀಯ ಬಾಂಬ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರೊಂದಿಗೆ ಅರಣ್ಯ ಅಧಿಕಾರಿಗಳು, ಪ್ರಸ್ತುತ ಪರಾರಿಯಾಗಿರುವ ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?