BIG NEWS: ಬ್ರಿಟನ್ ರಾಣಿ ನಿಧನದ ಹಿನ್ನೆಲೆ, ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ

BIG NEWS: ಬ್ರಿಟನ್ ರಾಣಿ ನಿಧನದ ಹಿನ್ನೆಲೆ,  ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ
British Queen
Edited By:

Updated on: Sep 09, 2022 | 2:40 PM

ದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ.

ರಾಣಿ ಎಲಿಜಬೆತ್ ಅವರ ನಿಧನದ ಗೌರವಾರ್ಥವಾಗಿ ಸೆಪ್ಟೆಂಬರ್ 11 ರಂದು ಭಾರತದ ಎಲ್ಲ ರಾಜ್ಯಗಳಲ್ಲೂ ಈ ದಿನದಂದು ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಿಸಿದೆ. ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್‌ಡಮ್ ಆಫ್ ಗ್ರೇಟ್ ಬ್ರಿಟನ್ ಸೆಪ್ಟೆಂಬರ್ 8, 2022 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಭಾರತ ಸರ್ಕಾರ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ದಿನದಂದು ಧ್ವಜವನ್ನು ನಿಯಮಿತವಾಗಿ ಹಾರಿಸುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ದೇಶದಾದ್ಯಂತ ಅರ್ಧ ಮಾಸ್ಟ್‌ನಲ್ಲಿ ಹಾರಿಸಲಾಗುತ್ತದೆ. ಈ ದಿನದಂದು ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಚಿವಾಲಯ ತಿಳಿಸಿ.

Published On - 2:30 pm, Fri, 9 September 22