Badlapur News: ಬದ್ಲಾಪುರ ಲೈಂಗಿಕ ದೌರ್ಜನ್ಯ ಖಂಡಿಸಿ ರೈಲ್ವೇ ತಡೆ; ಪೊಲೀಸರಿಂದ ಲಾಠಿ ಪ್ರಹಾರ

ರೈಲು ಹಳಿಗಳ ಮೇಲೆ ಕುಳಿತು ರೈಲು ಸಂಚಾರಕ್ಕೆ ಅಡ್ಡಿಯೊಡ್ಡಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮಂಗಳವಾರ ಲಾಠಿ ಪ್ರಹಾರ ಮಾಡಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಮಾಡಿದಾಗ, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ಮಾಡಿದ್ದಾರೆ. ಹಳಿಯನ್ನು ತೆರವುಗೊಳಿಸಲಾಗಿದ್ದು ಕಾರ್ಯಾಚರಣೆಯನ್ನು ಪುನರಾರಂಭಿಸುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಮಿಷನರ್ ರವೀಂದ್ರ ಶಿಶ್ವೆ ಹೇಳಿದ್ದಾರೆ.

Badlapur News: ಬದ್ಲಾಪುರ ಲೈಂಗಿಕ ದೌರ್ಜನ್ಯ ಖಂಡಿಸಿ ರೈಲ್ವೇ ತಡೆ; ಪೊಲೀಸರಿಂದ ಲಾಠಿ ಪ್ರಹಾರ
ಬದ್ಲಾಪುರದಲ್ಲಿ ಲಾಠಿ ಪ್ರಹಾರ
Follow us
ರಶ್ಮಿ ಕಲ್ಲಕಟ್ಟ
| Updated By: Digi Tech Desk

Updated on:Aug 21, 2024 | 9:20 AM

ಮುಂಬೈ ಆಗಸ್ಟ್ 20: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಬದ್ಲಾಪುರ (Badlapur Case) ಶಾಲೆಯೊಂದರಲ್ಲಿ ಅಟೆಂಡರ್ ಅದೇ ಶಾಲೆಯಲ್ಲಿ ಕಲಿಯುತ್ತಿದ್ದ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದೆ. ಈ ವೇಳೆ ರೈಲು ಹಳಿಗಳ ಮೇಲೆ ಕುಳಿತು ರೈಲು ಸಂಚಾರಕ್ಕೆ ಅಡ್ಡಿಯೊಡ್ಡಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮಂಗಳವಾರ ಲಾಠಿ ಪ್ರಹಾರ (Police lathi-charge )ಮಾಡಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಮಾಡಿದಾಗ, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ಮಾಡಿದ್ದಾರೆ. ಲಾಠಿ ಚಾರ್ಜ್‌ನ ನಂತರ, 6:15 ರ ಸುಮಾರಿಗೆ ರೈಲ್ವೆ ಹಳಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10:10ಕ್ಕೆ ಪ್ರತಿಭಟನೆ ಆರಂಭಿಸಲಾಗಿತ್ತು.

ಹಳಿಯನ್ನು ತೆರವುಗೊಳಿಸಲಾಗಿದ್ದು, ವರದಿಯನ್ನು ರೈಲ್ವೆಗೆ ಕಳುಹಿಸಲಾಗುವುದು. ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಕಮಿಷನರ್ ರವೀಂದ್ರ ಶಿಶ್ವೆ ಸುದ್ದಿಗಾರರಿಗೆ ತಿಳಿಸಿದರು. ಈ ಹಿಂದೆ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿದ್ದ ಗಿರೀಶ್ ಮಹಾಜನ್ ಅವರು ಹಳಿಗಳನ್ನು ತೆರವು ಮಾಡುವಂತೆ ಮಾಡಿದ ಮನವಿಯನ್ನು ಜನರು ತಿರಸ್ಕರಿಸಿದ್ದರು.

ಏತನ್ಮಧ್ಯೆ, ಪೊಲೀಸರ ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಶಿವಸೇನಾದ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪ್ರಿಯಾಂಕಾ ಚತುರ್ವೇದಿ, ದಮನಕ್ಕೆ ಸರ್ಕಾರದಿಂದ ಆದೇಶ ಬಂದಿದೆ ಎಂದು ಆರೋಪಿಸಿದರು.

ಪ್ರಿಯಾಂಕಾ ಚತುರ್ವೇದಿ ಟ್ವೀಟ್

”ನ್ಯಾಯ ಕೇಳಿದ್ದಕ್ಕೆ ಲಾಠಿ ಚಾರ್ಜ್ ಮಾಡಲಾಗಿದೆ. ಇನ್ನು ಸಾಕಪ್ಪಾ ಸಾಕು ಎಂದು ಹೇಳಿದ್ದಕ್ಕೆ ಲಾಠಿ ಚಾರ್ಜ್ ಮಾಡಿದರು. ನಮ್ಮ ಹೆಣ್ಣು ಮಕ್ಕಳು ಸುರಕ್ಷಿತವಾಗಿರಬೇಕು ಎಂದು ಕೇಳಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ್ದಾರೆ. ನನಗೆ ಗೊತ್ತಿರುವ, ನಾನು ವಿಶ್ವಾಸ ಹೊಂದಿರುವ, ನಾನು ನಂಬಿರುವ ಪೊಲೀಸ್ ಪಡೆ ಅದು ಅಲ್ಲ. ಇದು ಸರ್ಕಾರದ ಆದೇಶದಿಂದ ಬಂದಿದ್ದು ಎಂದು ಚತುರ್ವೇದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Badlapur protests: ಶಾಲೆಯಲ್ಲಿ ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ‘ಶಕ್ತಿ ಮಸೂದೆ’ ಅಂಗೀಕಾರಕ್ಕೆ ಉದ್ಧವ್ ಆಗ್ರಹ

ಗೃಹ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಆರಂಭಿಕ ವಿಳಂಬಕ್ಕಾಗಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಆರೋಪಿಗಳನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Tue, 20 August 24