AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಬ್ಯಾಡ್ಮಿಂಟನ್​ ಸ್ಟಾರ್​: ರಾಜಕೀಯಕ್ಕೆ ಬರುವ ಸುಳಿವು ಕೊಟ್ರಾ ಸೈನಾ ನೆಹವಾಲ್​?

ಪ್ರಧಾನಿ ನರೇಂದ್ರ ಮೋದಿ ರಾಜಕೀವಾಗಿ ನನ್ನ ನೆಚ್ಚಿನ ನಾಯಕ ಎಂದಿರುವ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್​, ರಾಜಕೀಯವಾಗಿ ಆಸಕ್ತಿ ಬಂದರೆ ಮುಂದೆ ನೋಡೋಣ ಎಂದು ಉಡುಪಿಯಲ್ಲಿ ಹೇಳಿದ್ದಾರೆ. ಈ ಮೂಲಕ ಪಾಲಿಟಿಕ್ಸ್​ ಗೆ ಬರುವ ಸುಳಿವನ್ನ ಏನಾದರೂ ಅವರು ಕೊಟ್ಟಿದ್ದಾರಾ ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ.

ಉಡುಪಿಯಲ್ಲಿ ಬ್ಯಾಡ್ಮಿಂಟನ್​ ಸ್ಟಾರ್​: ರಾಜಕೀಯಕ್ಕೆ ಬರುವ ಸುಳಿವು ಕೊಟ್ರಾ ಸೈನಾ ನೆಹವಾಲ್​?
Saina Nehawal
ಪ್ರಜ್ವಲ್ ಅಮೀನ್​, ಉಡುಪಿ
| Updated By: ಪ್ರಸನ್ನ ಹೆಗಡೆ|

Updated on:Oct 14, 2025 | 5:06 PM

Share

ಉಡುಪಿ, ಅಕ್ಟೋಬರ್​ 14: ರಾಜಕೀಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ನನ್ನ ನೆಚ್ಚಿನ ಮುಖಂಡ. ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಯಾವತ್ತಾದರೂ ರಾಜಕೀಯದ ಬಗ್ಗೆ ಆಸಕ್ತಿ ಬಂದರೆ ನೋಡೋಣ ಎಂದು ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್​ (Saina Nehwal) ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನನಗೆ ನರೇಂದ್ರ ಮೋದಿಯವರ ಚಿಂತನೆ ತುಂಬಾ ಇಷ್ಟ.ಕೆಲವೊಮ್ಮೆ ಅವರ ಕಾರ್ಯಕ್ರಮಗಳಿಗೆ ತೆರಳಿ ನಾನು ಬೆಂಬಲಿಸುತ್ತೇನೆ. ರಾಜಕೀಯ ತುಂಬಾ ಸುಲಭ ಎಂದು ಭಾವಿಸುತ್ತಾರೆ. ಆದರೆ ಅದು ನಾವು ಊಹಿಸಿದಷ್ಟು ಸುಲಭವಿಲ್ಲ ಎಂದು ಸೈನಾ ಹೇಳಿದ್ದಾರೆ.

ಬ್ಯಾಡ್ಮಿಂಟನ್ ಆಟಕ್ಕಾಗಿ ನಾನು ತುಂಬಾ ತ್ಯಾಗ ಮಾಡಬೇಕಾಯಿತು. ಕಳೆದ 25 ವರ್ಷಗಳಿಂದ ಮನೆ , ಸ್ನೇಹಿತರು, ಫುಡ್ ಎಲ್ಲವನ್ನು ಬಿಟ್ಟು ಕ್ರೀಡಾ ಕ್ಷೇತ್ರದಲ್ಲಿದ್ದೇನೆ. ತುಂಬಾ ಒತ್ತಡದ ಜೀವನ ನಡೆಸಿದ್ದೇನೆ. ನಾನೀಗ ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ತೊರೆದಿದ್ದು, ದೈಹಿಕ ಕ್ಷಮತೆಯ ಕಾರಣಕ್ಕೆ ಇದು ಅನಿವಾರ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ ದೇಹ ಸ್ಪಂದಿಸುವುದಿಲ್ಲ. ಆಟಗಾರ್ತಿಯ ಮನಸ್ಥಿತಿಯಿಂದ ನಾನು ಹೊರ ಬರಬೇಕಿದ್ದು, ಈಗಷ್ಟೇ ನಾನು ಸಕ್ರಿಯ ಚಟುವಟಿಕೆಯಿಂದ ಹೊರ ಬಂದವಳು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ: ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡು

ಕೋಚಿಂಗ್ ನೀಡುವ ವಿಚಾರವಾಗಿಯೂ ಪ್ರತಿಕ್ರಿಯಿಸಿರುವ ಅವರು, ಆ ಬಗ್ಗೆ ನನಗೆ ಆಸಕ್ತಿ ಇಲ್ಲ. ಹೈದರಾಬಾದ್​ ನಲ್ಲಿ ಬ್ಯಾಡ್ಮಿಂಟನ್ ತರಬೇತಿ ನೀಡುವ ಅತ್ಯುತ್ತಮ ಅಕಾಡೆಮಿ ಇದೆ. ಕೋಚಿಂಗ್ ತುಂಬಾ ಡಿಫಿಕಲ್ಟ್. ಆಡುವುದಕ್ಕಿಂತಲೂ ಕೋಚಿಂಗ್​ ಗೆ ಹೆಚ್ಚಿನ ಪರಿಶ್ರಮ ಹಾಕಬೇಕಾಗುತ್ತದೆ. ಹತ್ತು ಹದಿನೈದು ಗಂಟೆ ನಿಂತುಕೊಂಡು ಬೊಬ್ಬೆ ಹೊಡೆಯುತ್ತ ತರಬೇತಿ ನೀಡುವುದು ಸುಲಭವಲ್ಲ. ಹೀಗಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದೇನೆ. ಬ್ಯಾಡ್ಮಿಂಟನ್ ಮಾತ್ರವಲ್ಲದೆ ಎಲ್ಲ ಬಗೆಯ ಕ್ರೀಡೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣ ಬಿಟ್ಟು ಮಕ್ಕಳು ಮೈದಾನದತ್ತ ಬರಬೇಕು. ಹಾಗಾಗಿ ಅವರನ್ನು ಮೋಟಿವೇಟ್ ಮಾಡುವುದರಲ್ಲಿ ನನಗೆ ಸಂತೋಷವಿದೆ ಎಂದು ಸೈನಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:43 pm, Tue, 14 October 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?