AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಅಕ್ಷಯ್​ ಪಲ್ಲಮಜಲು​​
|

Updated on:Apr 06, 2026 | 9:33 AM

Share

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಲದ ಹೊರೆ ಹೆಚ್ಚಿಸುತ್ತಿವೆ ಎಂದು ಟೀಕಿಸಿದರು. ಕುಟುಂಬ ರಾಜಕಾರಣ, ಭ್ರಷ್ಟಾಚಾರ ಮತ್ತು ಅಹಿಂದ ಹೆಸರಿನ ದುರುಪಯೋಗದ ಬಗ್ಗೆ ಪ್ರಸ್ತಾಪಿಸಿದ ಅವರು, ಚರಂತಿಮಠ ಅವರನ್ನು ಆಯ್ಕೆ ಮಾಡುವಂತೆ ಮತದಾರರಿಗೆ ಮನವಿ ಮಾಡಿದರು.

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು. ಅಹಿಂದ ಸಮುದಾಯದ ಹೆಸರನ್ನು ಅಧಿಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಬೆಳಕಿಗೆ ಬಂದ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂದು ಹೇಳಿದರು. ವೀರಣ್ಣ ಚರಂತಿಮಠ ಅವರನ್ನು ಶಿಕ್ಷಣ ತಜ್ಞ ಎಂದು ಶ್ಲಾಘಿಸಿದ ಕುಮಾರಸ್ವಾಮಿ, ಅವರು ಈ ಭಾಗದ ಅನೇಕ ಕುಟುಂಬಗಳ ಮಕ್ಕಳಿಗೆ ವಿದ್ಯೆ ನೀಡಿ ಬದುಕಿಗೆ ದಾರಿ ತೋರಿದ್ದಾರೆ ಎಂದರು. ರಾಜ್ಯದ ಗೌರವವನ್ನು ಉಳಿಸಲು ಮತ್ತು ಉತ್ತಮ ಆಡಳಿತಕ್ಕಾಗಿ ಚರಂತಿಮಠ ಅವರನ್ನು ಆಯ್ಕೆ ಮಾಡುವಂತೆ ಬಾಗಲಕೋಟೆ ಮತದಾರರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 06, 2026 09:31 AM
Follow Us