ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸೋಮವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.

ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು
ಚಂದ್ರಬಾಬು ನಾಯ್ಡು
Follow us
|

Updated on:Nov 20, 2023 | 4:41 PM

ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu )ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸೋಮವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಆಂಧ್ರಪ್ರದೇಶ ಹೈಕೋರ್ಟ್​ ಈ ಹಿಂದೆ ಚಂದ್ರಬಾಬು ನಾಯ್ಡು ಅವರಿಗೆ ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಸಾಮಾನ್ಯ ಜಾಮೀನನ್ನು ಕೋರ್ಟ್​​​ ನೀಡಿದೆ. ಅಕ್ಟೋಬರ್ 31 ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನನ್ನು ನವೆಂಬರ್​​​​ 28ಕ್ಕೆ ಕೊನೆಯಾಗಿಲಿದೆ. ಇದೀಗ ಅವರಿಗೆ ಸಾಮಾನ್ಯ ಜಾಮೀನನ್ನು ಮಧ್ಯಂತರ ಜಾಮೀನಿಗೆ ನೀಡಲಾಗಿದ್ದ ಬಾಂಡ್​​​ ಮೇಲೆಯೇ ನೀಡಲಾಗಿದೆ.

ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ನಂತರ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಈ ಜಾಮೀನಿನ ಪ್ರಕಾರ ಅವರು ಯಾವುದೇ ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಆದೇಶವನ್ನು ನೀಡಲಾಗಿತ್ತು. ಆದರೆ ಇನ್ನು ಮುಂದೆ ಈ ಷರತ್ತು ಮುಂದುವರಿಯುವುದಿಲ್ಲ ಎಂದು ಹೈಕೋರ್ಟ್​​ ಹೇಳಿದೆ.

ಇದನ್ನೂ ಓದಿ: ತೆಲಂಗಾಣ ಅಸೆಂಬ್ಲಿ ಚುನಾವಣೆ: ಚಂದ್ರಬಾಬು ನಾಯ್ಡು ಹೆಸರಿನಲ್ಲಿ ನಕಲಿ ಪತ್ರ ವೈರಲ್, ಸೈಬರ್ ಕ್ರೈಂ ಪೊಲೀಸರ ಮೊರೆ ಹೋದ ಟಿಡಿಪಿ

ಈಗಾಗಲೇ ಅವರ ವೈದ್ಯಕೀಯ ವರದಿಯನ್ನು ಕೋರ್ಟ್​​ಗೆ ನೀಡಲಾಗಿದ್ದು, ಅವರ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಸಿದ್ದಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ಇದರ ಜತೆಗೆ ಹೈದರಾಬಾದ್‌ನ ಎಲ್‌ವಿ ಪ್ರಸಾದ್ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಚಂದ್ರಬಾಬು ನಾಯ್ಡು ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಚಂದ್ರಬಾಬು ನಾಯ್ಡು ಅವರು ಜೈಲು ಸೇರಲು ಅವರ ಮೇಲೆ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪವಿತ್ತು. ಇದರಿಂದ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ ಎಂದು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Mon, 20 November 23