Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ ಬಂಧನ

ಹೈದರಾಬಾದ್‌ನಲ್ಲಿ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್​​ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್​​ ಮಾಡುವ ಬಗ್ಗೆ ತಿಳಿಸಿರುವ ಬಗ್ಗೆ ಹಿಂದು ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದೆ.

Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ  ಬಂಧನ
ಬಜರಂಗದಳದ ಕಾರ್ಯಕರ್ತರ ಬಂಧನ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 03, 2023 | 2:25 PM

ಹೈದರಾಬಾದ್: ಹೈದರಾಬಾದ್‌ನಲ್ಲಿ (Hyderabad) ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಜರಂಗದಳ(Bajrang Dal) ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ನೆನ್ನೆ (ಮೇ 2) ಕಾಂಗ್ರೆಸ್​​ ತನ್ನ ಪ್ರಣಾಳಿಕೆಯನ್ನು ಬಿಡಗಡೆ ಮಾಡಿದೆ, ಈ ಪ್ರಣಾಳಿಕೆಯಲ್ಲಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ದ್ವೇಷ ಮಾಡುವ ಸಂಘಟನೆಗಳನ್ನು ಬ್ಯಾನ್​​ ಮಾಡಲಾಗುವುದು ಎಂದು ಹೇಳಿದೆ. ಈ ಕಾರಣಕ್ಕೆ ಹೈದರಾಬಾದ್‌ನ ಕಾಂಗ್ರೆಸ್ ಕಚೇರಿ ಎದುರು ಬಜರಂಗದಳದ ಕಾರ್ಯಕರ್ತರು ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವಿಡಿಯೋದಲ್ಲಿ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಘೋಷಣೆಯನ್ನು ಕೂಗಿದ್ದಾರೆ. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಇದರಲ್ಲಿ ಬಜರಂಗದಳ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬ್ಯಾನ್​​ ಮಾಡಲಾಗುವುದು ಮತ್ತು ಇಂತಹ ಕೃತ್ಯಗಳಲ್ಲಿ ಭಾಗಿಯಾದ ವ್ಯಕ್ತಿಗಳನ್ನು, ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ:ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ

ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ. ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ. ಬಜರಂಗದಳ, ಪಿಎಫ್ಐ ಮತ್ತು ಇತರ ವ್ಯಕ್ತಿಗಳು ಮತ್ತು ಸಂಘಟನೆಗಳು ಕಾನೂನಿನ ವಿರುದ್ಧ ಹೋಗುತ್ತಿದೆ. ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತರ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಅಂತಹ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನಿನ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್​​ ಪ್ರಣಾಳಿಕೆಯ ಕುರಿತು ಪ್ರಧಾನಿ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್​​ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಇಂದು ಮಂಗಳೂರಿನ ರ್ಯಾಲಿಯಲ್ಲಿ ಮಾತನಾಡಿ ಮೊದಲು ಕಾಂಗ್ರೆಸ್ ಪಕ್ಷವು ಭಗವಾನ್ ರಾಮನಿಗೆ ಬೀಗ ಹಾಕಿತು ಮತ್ತು ಈಗ ಅವರು “ಜೈ ಬಜರಂಗ ಬಲಿ” ಎಂದು ಕೂಗುವವರಿಗೆ ಬೀಗ ಹಾಕಲು ಶಪಥ ಮಾಡುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‌ಗೆ ರಾಮನ ಸಮಸ್ಯೆ ಇತ್ತು, ಈಗ ‘ಜೈ ಬಜರಂಗ ಬಲಿ’ ಎಂದು ಹೇಳುವವರಿಗೆ ತೊಂದರೆಯಾಗಿರುವುದು ದೇಶದ ದೌರ್ಭಾಗ್ಯ ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Wed, 3 May 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ