AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

Abhinandan Varthaman ವಿಂಗ್ ಕಮಾಂಡರ್ (ಈಗ ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ
ಅಭಿನಂದನ್ ವರ್ಧಮಾನ್ ಪ್ರಶಸ್ತಿ ಸ್ವೀಕರಿಸುತ್ತಿರುವುದು
TV9 Web
| Edited By: |

Updated on:Nov 22, 2021 | 12:10 PM

Share

ದೆಹಲಿ: ಫೆಬ್ರವರಿ 27, 2019 ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಈಗ ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ (Abhinandan Varthaman) ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರು ಸೋಮವಾರ ವೀರ ಚಕ್ರ ಪ್ರಶಸ್ತಿ(Vir Chakra) ಪ್ರದಾನ ಮಾಡಿದ್ದಾರೆ. ಪುಲ್ವಾಮಾ ದಾಳಿಯ(Pulwama attack) ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನದೊಂದಿಗೆ ಯುದ್ಧದಲ್ಲಿ ತೊಡಗಿದ್ದರು. ಅವರನ್ನು ನವೆಂಬರ್ 3, 2021 ರಂದು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ನೀಡಲಾಯಿತು.  ಎಫ್ -16 ಅನ್ನು ಹೊಡೆದುರುಳಿಸಿದ ನಂತರ ವರ್ಧಮಾನ್ ಅವರ MiG-21 ಯುದ್ಧ ವಿಮಾನ ಪಾಕ್ ಭೂಪ್ರದೇಶದಲ್ಲಿ ಇಳಿದಾಗ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ತೆಗೆದುಕೊಂಡಿತು. ಈ ವಿಷಯದಲ್ಲಿ ಅಂತರರಾಷ್ಟ್ರೀಯ ಹಸ್ತಕ್ಷೇಪದ ಜೊತೆಗೆ ಭಾರತದ ಕಡೆಯಿಂದ ಹೇರಿದ ವ್ಯಾಪಕ ಒತ್ತಡದಿಂದಾಗಿ ಪಾಕಿಸ್ತಾನದ ಸೇನೆಯು ಅವರನ್ನು ಬಿಡುಗಡೆ ಮಾಡಿತು.

ಇತ್ತೀಚಿನ ದಿನಗಳಲ್ಲಿ ಐಎಎಫ್‌ನ ಅತ್ಯಂತ ಪ್ರಸಿದ್ಧ ಅಧಿಕಾರಿಗಳಲ್ಲಿ ಒಬ್ಬರಾಗಿ ಉಳಿದಿರುವ ವರ್ಧಮಾನ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಕ್ಕಾಗಿ ಸಪ್ಪರ್ ಪ್ರಕಾಶ್ ಜಾಧವ್ ಅವರಿಗೆ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ಕೀರ್ತಿ Pulwama attackಚಕ್ರ (ಮರಣೋತ್ತರ) ನೀಡಲಾಗುತ್ತದೆ.

ಐವರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕಾರ್ಯಾಚರಣೆಯಲ್ಲಿನ ಪಾತ್ರಕ್ಕಾಗಿ ಮೇಜರ್ ವಿಭೂತಿ ಶಂಕರ್ ಧೌಂಡ್ಯಾಲ್ ಅವರಿಗೆ ಶೌರ್ಯ ಚಕ್ರ (ಮರಣೋತ್ತರ) ನೀಡಲಾಗುವುದು.  ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ A++ ವರ್ಗದ ಭಯೋತ್ಪಾದಕನನ್ನು ಕೊಂದಿದ್ದಕ್ಕಾಗಿ ನೈಬ್ ಸುಬೇದಾರ್ ಸೋಂಬಿರ್ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರವನ್ನು ನೀಡಲಾಗಿದೆ.

ಇದನ್ನೂ ಓದಿ: ಬಾಲಾಕೋಟ್ ವಾಯುದಾಳಿಯ ಹೀರೊ ಅಭಿನಂದನ್​ ವರ್ಧಮಾನ್ ಇನ್ನು ಗ್ರೂಪ್​ ಕ್ಯಾಪ್ಟನ್

Published On - 12:09 pm, Mon, 22 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?