AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ಮೆಷಿನ್ ಕಾರಿಗೆ ಕಟ್ಟಿ ಎಳೆದೊಯ್ದ ಗ್ಯಾಂಗ್,ಮೂರೇ ನಿಮಿಷದಲ್ಲಿ ಹಣ ದೋಚಿದ ದುಷ್ಕರ್ಮಿಗಳು

ಒಡಿಶಾದ ಬಾಲಸೋರ್‌ನಲ್ಲಿ ಐವರು ದುಷ್ಕರ್ಮಿಗಳು ಕಾರಿಗೆ ಹಗ್ಗ ಕಟ್ಟಿ ಎಟಿಎಂ ಯಂತ್ರವನ್ನೇ ಎಳೆದೊಯ್ದು, ಮೂರೇ ನಿಮಿಷದಲ್ಲಿ ಹಣ ಕಳವು ಮಾಡಿದ್ದಾರೆ. ಈ ಸಿನಿಮೀಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ರಾತ್ರಿ ಗಸ್ತು ಹೆಚ್ಚಿಸಿ ಭದ್ರತೆ ಬಿಗಿಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಎಟಿಎಂ ಮೆಷಿನ್ ಕಾರಿಗೆ ಕಟ್ಟಿ ಎಳೆದೊಯ್ದ ಗ್ಯಾಂಗ್,ಮೂರೇ ನಿಮಿಷದಲ್ಲಿ ಹಣ ದೋಚಿದ ದುಷ್ಕರ್ಮಿಗಳು
ಎಟಿಎಂ
ನಯನಾ ರಾಜೀವ್
|

Updated on:Jul 12, 2026 | 12:26 PM

Share

ಬಾಲಸೋರ್, ಜುಲೈ 12: ಸಾಮಾನ್ಯ ದರೋಡೆಕೋರರು ಎಟಿಎಂ(ATM) ಅನ್ನು ಒಡೆದು ಹಣ ಕದಿಯುವುದು ಸಾಮಾನ್ಯ, ಆದರೆ ಈ ದುಷ್ಕರ್ಮಿಗಳ  ಗ್ಯಾಂಗ್ ನೇರವಾಗಿ ಎಟಿಎಂ ಯಂತ್ರವನ್ನೇ ಕದ್ದುಕೊಂಡು ಹೋಗಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಈಗ ಭಾರೀ ಚರ್ಚೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ 2 ಗಂಟೆ ಸಮಯ. ಜನಸಂಚಾರವಿಲ್ಲದ ಸಮಯವನ್ನು ನೋಡಿ ಐದಕ್ಕೂ ಹೆಚ್ಚು ದುಷ್ಕರ್ಮಿಗಳು ಕಪ್ಪು ಬಣ್ಣದ ಕಾರಿನಲ್ಲಿ ಎಟಿಎಂ ಕೇಂದ್ರದ ಬಳಿ ಬಂದು ನಿಂತರು.

ಬೆಳಗಿನ ಜಾವ 2.14 ಗಂಟೆ ವೇಳೆಗೆ ದುಷ್ಕರ್ಮಿಗಳು ವಾಹನದಿಂದ ಇಳಿದು, ಎಟಿಎಂ ಕಿಯೋಸ್ಕ್ ಒಳಗೆ ನುಗ್ಗಿ, ಭಾರವಾದ ಹಗ್ಗದ ಒಂದು ತುದಿಯನ್ನು ಎಟಿಎಂ ಯಂತ್ರಕ್ಕೆ ಮತ್ತು ಮತ್ತೊಂದು ತುದಿಯನ್ನು ತಮ್ಮ ಕಾರಿಗೆ ಗಟ್ಟಿಯಾಗಿ ಕಟ್ಟಿದ್ದಾರೆ. ಕಾರನ್ನು ಅತಿವೇಗವಾಗಿ ಮುಂದಕ್ಕೆ ಚಲಾಯಿಸಿದ ತಕ್ಷಣ, ಆ ಬಲಕ್ಕೆ ಎಟಿಎಂ ಯಂತ್ರ ಕಿತ್ತು ಬಂತು. ಎಟಿಎಂ ಅಳವಡಿಸಿದ್ದ ಕಿಯೋಸ್ಕ್ ಸಂಪೂರ್ಣ ಛಿದ್ರವಾಗಿತ್ತು. ಕೇವಲ ಮೂರು ನಿಮಿಷಗಳ ಅವಧಿಯಲ್ಲಿ ಈ ಕಾರ್ಯಾಚರಣೆ ಮುಗಿಸಿದ ಗ್ಯಾಂಗ್, ಕಿತ್ತುಕೊಂಡ ಯಂತ್ರವನ್ನು ತಮ್ಮ ವಾಹನಕ್ಕೆ ಹಾಕಿಕೊಂಡು ನಿರ್ಜನ ಪ್ರದೇಶಕ್ಕೆ ದೌಡಾಯಿಸಿತು. ಅಲ್ಲಿ ಯಂತ್ರವನ್ನು ಒಡೆದು ಒಳಗಿದ್ದ ನಗದನ್ನು ದೋಚಿ ಪರಾರಿಯಾಯಿತು.

ಈ ಇಡೀ ದರೋಡೆಯ ದೃಶ್ಯಗಳು ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಪ್ಪು ಬಣ್ಣದ ಥಾರ್ ಕಾರು ಎಟಿಎಂನ ಮುಂದೆ ಬಂದು ನಿಲ್ಲುವುದು, ಕಳ್ಳರು ಹಗ್ಗ ಕಟ್ಟುವುದು, ಯಂತ್ರವನ್ನು ಕಿತ್ತುಕೊಂಡು ಓಡಿಹೋಗುವುದು ಎಲ್ಲವೂ ಸಿನಿಮಾದ ಸ್ಟಂಟ್ ದೃಶ್ಯದಂತೆಯೇ ಇದೆ. ಪೊಲೀಸರು ಈ ವಿಡಿಯೋವನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವಿಡಿಯೋ

ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಕಳೆದ ಕೆಲ ತಿಂಗಳುಗಳಿಂದ ಬಾಲಸೋರ್ ಜಿಲ್ಲೆಯ ಈ ಭಾಗದಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಎಟಿಎಂ ಮೆಷಿನ್ ಅನ್ನೇ ಎಳೆದುಕೊಂಡು ಹೋಗುವಷ್ಟು ಧೈರ್ಯ ತೋರಿಸುತ್ತಿರುವ ಕಳ್ಳರ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು ಮತ್ತು ಭದ್ರತೆಯನ್ನು ಬಿಗಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ!

ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಕಾಣಿಸಿದ ಥಾರ್ ವಾಹನದ ನಂಬರ್ ಪ್ಲೇಟ್ ಮತ್ತು ದಾಳಿಕೋರರನ್ನು ಗುರುತಿಸಲು ತೀವ್ರ ಶೋಧ ನಡೆಸುತ್ತಿದ್ದಾರೆ.

Published On - 12:25 pm, Sun, 12 July 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ