Jyotiraditya Scindia: ಸೌಹಾರ್ದ ಕ್ರೀಡಾಕೂಟದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

|

Updated on: Feb 16, 2023 | 11:59 AM

ಮಧ್ಯಪ್ರದೇಶದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಲು ಹೋಗಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಎಡವಟ್ಟು ಮಾಡಿಕೊಂಡಿದ್ದಾರೆ.

Jyotiraditya Scindia: ಸೌಹಾರ್ದ ಕ್ರೀಡಾಕೂಟದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
Follow us on

ಮಧ್ಯಪ್ರದೇಶದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಲು ಹೋಗಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಎಡವಟ್ಟು ಮಾಡಿಕೊಂಡಿದ್ದಾರೆ. ಸಿಂಧಿಯಾ ಹೊಡೆದ ಬಾಲ್ ತಮ್ಮದೇ ಪಕ್ಷದ ಕಾರ್ಯಕರ್ತನ ತಲೆಗೆ ಬಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬುಧವಾರ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕ್ರಿಕೆಟ್ ಆಡುವ ಅವಕಾಶ ಪಡೆದರು, ಅವರು ಬ್ಯಾಟಿಂಗ್​ನ್ನು ಕೂಡ ಆನಂದಿಸಿದರು. ಆದರೆ ಅಷ್ಟರಲ್ಲಿ ಅಪಘಾತ ಸಂಭವಿಸಿದೆ. ಇದರಿಂದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರದೇಶದ ರೇವಾ ಜಿಲ್ಲೆಗೆ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ನೂತನವಾಗಿ ನಿರ್ಮಿಸಿರುವ ಕ್ರೀಡಾಂಗಣದ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ ಜ್ಯೋತಿರಾದಿತ್ಯ ಸಿಂಧಿಯಾ ಬ್ಯಾಟಿಂಗ್ ವೇಳೆ ಹೊಡೆದ ಹೊಡೆತಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಬಲವಾಗಿ ತಾಗಿ ರಕ್ತಸ್ರಾವ ಉಂಟಾಯಿತು.

ಮತ್ತಷ್ಟು ಓದಿ: Viral Video: ಪ್ರಯಾಣಿಕರಿಂದ ದೂರು ಹಿನ್ನೆಲೆ; ದೆಹಲಿ ವಿಮಾನ ನಿಲ್ದಾಣಕ್ಕೆ ದಿಢೀರನೆ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಬ್ಯಾಟಿಂಗ್ ಮಾಡುವಾಗ ಸಚಿವರು ಹೊಡೆದ ಬಾಲ್ ಅನ್ನು ಕಾರ್ಯಕರ್ತ ವಿಕಾಸ್ ಮಿಶ್ರಾ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಕೈತಪ್ಪಿದ ಚೆಂಡು ಕಾರ್ಯಕರ್ತನ ಹಣೆಗೆ ಬಿದ್ದು ಪೆಟ್ಟಾಯಿತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನ ತಕ್ಷಣವೇ ಕರೆದೊಯ್ಯಲಾಯಿತು. ವೈದ್ಯರು ಹಣೆಗೆ ಹೊಲಿಗೆ ಹಾಕಿದ ನಂತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ. ವಿಕಾಸ್ ಗಾಯಗೊಂಡ ತಕ್ಷಣ ಆಟ ನಿಲ್ಲಿಸಿ ಅವರನ್ನ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ