ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳ ಅನುಮಾನಾಸ್ಪದ ಸಾವು
ಬಾಂಧವಗಡ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಮುಖ್ಯಮಂತ್ರಿಗಳು ಕ್ಷೇತ್ರ ನಿರ್ದೇಶಕರನ್ನು ಅಮಾನತುಗೊಳಿಸಿದ್ದು, ಕೀಟನಾಶಕ ಬಳಕೆಯ ಅನುಮಾನವನ್ನು ತನಿಖೆ ನಡೆಸಲಾಗುತ್ತಿದೆ. ಆನೆ ದಾಳಿಯಿಂದ ಮೃತಪಟ್ಟವರ ಪರಿಹಾರವನ್ನು 8 ಲಕ್ಷದಿಂದ 25 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರವು ತನಿಖಾ ತಂಡವನ್ನು ರಚಿಸಿದೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿರುವ ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಕ್ಷೇತ್ರ ನಿರ್ದೇಶಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳೆಗಳ ಮೇಲೆ ಸಿಂಪಡಿಸಿರುವ ಕೀಟನಾಶಕಗಳ ಮೇಲೆ ಅನುಮಾನ ಮೂಡಿತ್ತು, ಆದರೆ ಪ್ರಾಥಮಿಕ ಸಂಶೋಧನೆಗಳು ಬೆಳೆಗಳಿಗೆ ಕೀಟನಾಶಕ ಬಳಕೆಗೆ ಯಾವುದೇ ಪುರಾವೆಗಳನ್ನು ತೋರಿಸಿಲ್ಲ. 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಬರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರದಂದು ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಬಳಿ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಎಕ್ಸ್‌ಗ್ರೇಷಿಯಾ ಪರಿಹಾರವನ್ನು ಹೆಚ್ಚಿಸಲಾಗಿದೆ. ಆನೆ ದಾಳಿಗೆ ಬಲಿಯಾದವರ ಪರಿಹಾರವನ್ನು 8 ಲಕ್ಷದಿಂದ 25 ಲಕ್ಷಕ್ಕೆ ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಯಾದವ್ ಹೇಳಿದ್ದಾರೆ.
ಇದಕ್ಕೂ ಮುನ್ನ, ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವ ದಿಲೀಪ್ ಅಹಿರ್ವಾರ್ ಮತ್ತು ಇಬ್ಬರು ಹಿರಿಯ ಅರಣ್ಯ ಅಧಿಕಾರಿಗಳು ಶನಿವಾರ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸಿದರು. ಸಚಿವ ಅಹಿರ್ವಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ) ಅಶೋಕ್ ಬರ್ನ್‌ವಾಲ್ ಮತ್ತು ಅರಣ್ಯ ಪಡೆ ಮುಖ್ಯಸ್ಥ (ಎಚ್‌ಒಎಫ್‌ಎಫ್) ಅಸೀಮ್ ಶ್ರೀವಾಸ್ತವ ಅವರು ಸ್ಥಳದಿಂದ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಪರಿಸರ ಸಚಿವಾಲಯವು ಇತ್ತೀಚಿನ ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಿದೆ.
ಮೈಸೂರು ಭಾಗದಲ್ಲಿ ಒಂದೇ ದಿನ ಎರಡು ಆನೆಗಳ ಸಾವು
ಒಡಿಶಾದಲ್ಲಿ 60 ಕಾಡಾನೆಗಳು ಸಾವನ್ನಪ್ಪಿವೆ 60 ಕಾಡಾನೆಗಳು ಸಾವನ್ನಪ್ಪಿರುವ ಬಗ್ಗೆ ಒಡಿಶಾ ಅರಣ್ಯ ಸಚಿವ ಗಣೇಶ್ ರಾಮ್ ಸಿಂಗ್ ಖುಂಟಿಯಾ ಕಳವಳ ವ್ಯಕ್ತಪಡಿಸಿದ್ದಾರೆ. ಆನೆಗಳ ಅಸಹಜ ಸಾವಿನ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ಈ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಆನೆಗಳನ್ನು ರಕ್ಷಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು. ಇಂತಹ ಸಂದರ್ಭದಲ್ಲಿ ಎಲ್ಲರೂ ಪ್ರಾಮಾಣಿಕರಾಗಿರಬೇಕು ಎಂದು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ