AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಶೌಚಾಲಯದೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಭಾರತದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅದರಲ್ಲೂ ಚಿಕ್ಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಗಳೂ ಸಾಕಷ್ಟಿವೆ. ಈ ನಡುವೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಶೌಚಾಲಯದಲ್ಲಿ 16 ವರ್ಷದ ಬಾಲಕಿಯ ಮೇಲೆ ಎಸಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸಾರ್ವಜನಿಕ ಶೌಚಾಲಯದೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
Representative Image
ಸುಷ್ಮಾ ಚಕ್ರೆ
|

Updated on:Oct 05, 2025 | 6:34 PM

Share

ಮುಂಬೈ, ಅಕ್ಟೋಬರ್ 5: ಮಹಾರಾಷ್ಟ್ರದ (Maharashtra) ಬಾಂದ್ರಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಸಾರ್ವಜನಿಕ ಶೌಚಾಲಯದೊಳಗೆ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಅತ್ಯಾಚಾರ ಘಟನೆ ಅಕ್ಟೋಬರ್ 1ರಂದು ನಡೆದಿದೆ. ಆರೋಪಿಯನ್ನು ಅಕ್ಟೋಬರ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೋಮವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ನಿರ್ಮಲ್ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 20 ವರ್ಷದ ಯುವಕ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಎಸಗಿದ ಆರೋಪಿಯನ್ನು ವಿರೋಧ ಪಕ್ಷದ ಸದಸ್ಯನಾಗಿರುವ ಸ್ಥಳೀಯ ರಾಜಕಾರಣಿಯ ಮಗ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Sun, 5 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ