
ಮುಂಬೈ, ಅಕ್ಟೋಬರ್ 5: ಮಹಾರಾಷ್ಟ್ರದ (Maharashtra) ಬಾಂದ್ರಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಸಾರ್ವಜನಿಕ ಶೌಚಾಲಯದೊಳಗೆ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಅತ್ಯಾಚಾರ ಘಟನೆ ಅಕ್ಟೋಬರ್ 1ರಂದು ನಡೆದಿದೆ. ಆರೋಪಿಯನ್ನು ಅಕ್ಟೋಬರ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೋಮವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ನಿರ್ಮಲ್ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 20 ವರ್ಷದ ಯುವಕ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಎಸಗಿದ ಆರೋಪಿಯನ್ನು ವಿರೋಧ ಪಕ್ಷದ ಸದಸ್ಯನಾಗಿರುವ ಸ್ಥಳೀಯ ರಾಜಕಾರಣಿಯ ಮಗ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:33 pm, Sun, 5 October 25