ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ದೇಶದಲ್ಲಿ ಇತ್ತೀಚೆಗೆ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಟು ಅಯೋಧ್ಯೆ ಮಧ್ಯೆ ಸಂಚರಿಸುವ ಆಕಾಶ್​ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
Follow us
ಗಂಗಾಧರ​ ಬ. ಸಾಬೋಜಿ
|

Updated on:Oct 27, 2024 | 6:31 PM

ಅಯೋಧ್ಯೆ, ಅಕ್ಟೋಬರ್​ 27: ಬೆಂಗಳೂರು ಟು ಅಯೋಧ್ಯೆ (Bangaluru-Ayodhya Flight) ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ; ಏರ್ ಇಂಡಿಯಾ, ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್​ಗೆ ಆತಂಕ

ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದಿದ್ದಾರೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ. ಬುಧವಾರ ಕೂಡ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 27 October 24

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ