ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್​ನ ನಾಯಕ ಪನ್ನ ಶವವಾಗಿ ಪತ್ತೆಯಾಗಿದ್ದಾರೆ.ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ
ಇಶಾಕ್ ಅಲಿ

Updated on: Aug 29, 2024 | 10:17 AM

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಓಡಿ ಹೋಗಿದ್ದ ಅವಾಮಿ ಲೀಗ್​ನ ನಾಯಕ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮೇಘಾಲಯದ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅವಾಮಿ ಲೀಗ್ ನಾಯಕನ ಕೊಳೆತ ಶವ ಪತ್ತೆಯಾಗಿದೆ.

ಮೇಘಾಲಯ ಪೊಲೀಸರು ಅವಾಮಿ ಲೀಗ್ ನಾಯಕ ಇಶಾಕ್ ಅಲಿ ಖಾನ್ ಪನ್ನಾ ಅವರ ಅರೆ ಕೊಳೆತ ದೇಹವನ್ನು ಜೈನ್ತಿಯಾ ಹಿಲ್ಸ್ ಜಿಲ್ಲೆಯ ತೋಟದಿಂದ ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪನ್ನಾ ಅವರ ಪಾಸ್‌ಪೋರ್ಟ್ ಮೂಲಕ ಗುರುತಿಸಲಾಗಿದೆ ಎಂದು ಎಸ್‌ಪಿ ಗಿರಿ ಪ್ರಸಾದ್ ತಿಳಿಸಿದ್ದಾರೆ.

ಮೃತ ಅವಾಮಿ ಲೀಗ್ ನಾಯಕ ಯಾರು?
ಬಾಂಗ್ಲಾದೇಶ ಛತ್ರ ಲೀಗ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಪಿರೋಜ್‌ಪುರ ಜಿಲ್ಲೆಯ ಅವಾಮಿ ಲೀಗ್‌ನ ಪ್ರಮುಖ ಸದಸ್ಯರಾಗಿರುವ ಪನ್ನಾ ಅವರು ಆಗಸ್ಟ್ 5 ರಂದು ಶೇಖ್ ಹಸೀನಾ ಸರ್ಕಾರ ಪತನದ ನಂತರ ಪರಾರಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ

ಗಡಿ ದಾಟಲು ಪ್ರಯತ್ನಿಸುತ್ತಿರುವಾಗ ಪನ್ನಾ ಹೃದಯ ಸ್ತಂಭನಕ್ಕೆ ಒಳಗಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶೇಖ್​ ಹಸೀನಾ ಅವರ ಮಾಜಿ ಕ್ಯಾಬಿನೆಟ್ ಸಚಿವರು ಮತ್ತು ಸಹಾಯಕರ ವಿರುದ್ಧ ಇನ್ನೂ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 75 ಕ್ಕೆ ಏರಿದೆ ಎಂದು ಮಾಧ್ಯಮ ವರದಿ ಬುಧವಾರ ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:16 am, Thu, 29 August 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us