Bangladesh Crisis: ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕರ್ಫ್ಯೂ ಜಾರಿ; ಬಿಎಸ್ಎಫ್ ಹೈ ಅಲರ್ಟ್

|

Updated on: Aug 06, 2024 | 3:33 PM

ಬಾಂಗ್ಲಾದೇಶದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಸಿದರು. ಹಿರಿಯ ಸಚಿವರು ಬಾಂಗ್ಲಾದೇಶ ಬಿಕ್ಕಟ್ಟಿನ ಬಗ್ಗೆ ಮೋದಿಗೆ ವಿವರಿಸಿದರು. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾ ಮತ್ತು ಐಬಿ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Bangladesh Crisis: ಮೇಘಾಲಯದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕರ್ಫ್ಯೂ ಜಾರಿ; ಬಿಎಸ್ಎಫ್ ಹೈ ಅಲರ್ಟ್
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕರ್ಫ್ಯೂ ಜಾರಿ
Follow us on

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಇತ್ತೀಚಿನ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಮೇಘಾಲಯವು ಬಾಂಗ್ಲಾದೇಶದ ಗಡಿಯ ಬಳಿ ರಾತ್ರಿ ಕರ್ಫ್ಯೂ ವಿಧಿಸಿದೆ. ಈ ಬಗ್ಗೆ ಮೇಘಾಲಯದ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಮಾತನಾಡಿ, ನೆರೆಯ ದೇಶದಲ್ಲಿ ಅಶಾಂತಿಯ ನಡುವೆ ಬಾಂಗ್ಲಾದೇಶದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

444 ಕಿಮೀ ಗಡಿಯಲ್ಲಿ ಕರ್ಫ್ಯೂ ಮುಂದಿನ ಸೂಚನೆ ಬರುವವರೆಗೆ ಪ್ರತಿದಿನ ಸಂಜೆ 6ರಿಂದ ಬೆಳಿಗ್ಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಿಎಸ್ಎಫ್ ಅಧಿಕಾರಿಗಳು ಮತ್ತು ಮೇಘಾಲಯ ಪೊಲೀಸರೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೆ, BSF 4,096 ಕಿಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ತನ್ನ ಎಲ್ಲಾ ಘಟಕಗಳಿಗೆ ‘ಹೈ ಅಲರ್ಟ್’ ನೀಡಿದೆ.

ಇದನ್ನೂ ಓದಿ: 49 ವರ್ಷಗಳ ಹಿಂದೆಯೂ ಶೇಖ್ ಹಸೀನಾಗೆ ಆಶ್ರಯ ನೀಡಿ ಪ್ರಾಣ ಉಳಿಸಿತ್ತು ಭಾರತ; ಆಗ ನಡೆದಿದ್ದೇನು?

ಬಾಂಗ್ಲಾ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದರು. ಸೋಮವಾರದಂದು ಶೇಖ್ ಹಸೀನಾ ಅವರ 15 ವರ್ಷಗಳ ದೀರ್ಘಾವಧಿಯ ಅವಧಿಯು ಅಂತ್ಯಗೊಂಡಿದ್ದರಿಂದ ಬಾಂಗ್ಲಾದೇಶವು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದೆ. 1971ರ ಯುದ್ಧ ಪರಿಣತರ ವಂಶಸ್ಥರ ಕೋಟಾದ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆಯು ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ಭಾರೀ ಪ್ರತಿಭಟನೆ ನಡೆಸಿತು. ಕಳೆದೊಂದು ವಾರದ ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ಅವರ ರಾಜೀನಾಮೆಯ ನಂತರ, ಶೇಖ್ ಹಸೀನಾ ಭಾರತಕ್ಕೆ ಬಂದರು. ಸೋಮವಾರ ಸಂಜೆ, ಅವರ ವಿಮಾನವು ಘಜಿಯಾಬಾದ್‌ನ ವಾಯುಪಡೆಯ ಹಿಂಡನ್ ಏರ್‌ಬೇಸ್‌ನಲ್ಲಿ ಇಳಿಯಿತು. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಹಿಂಡನ್ ವಿಮಾನ ನಿಲ್ದಾಣದಲ್ಲಿ ಶೇಖ್ ಹಸೀನಾ ಅವರನ್ನು ಭೇಟಿಯಾದರು. ಈ ವೇಳೆ ಹಿರಿಯ ಸೇನಾಧಿಕಾರಿಗಳೂ ಅವರೊಂದಿಗೆ ಉಪಸ್ಥಿತರಿದ್ದರು. ಮೂಲಗಳ ಪ್ರಕಾರ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಿಂಡನ್ ಏರ್‌ಬೇಸ್‌ನ ಸುರಕ್ಷಿತ ಮನೆಗೆ ಸ್ಥಳಾಂತರಿಸಲಾಗಿದೆ. ಆಕೆಯ ಭದ್ರತೆಗಾಗಿ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ. ವರದಿಗಳ ಪ್ರಕಾರ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಆಶ್ರಯ ಕೋರಿಕೆಯನ್ನು ಇಂಗ್ಲೆಂಡ್ ಅನುಮೋದಿಸಿದ ನಂತರ ಲಂಡನ್‌ಗೆ ತೆರಳಲು ಸಿದ್ಧತೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ