Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಶವವಾಗಿ ಪತ್ತೆ

ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಮ್ ಅನಾರ್(Anwarul Azim Anar) ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸದಸ್ಯರಾದ ಅನಾರ್ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು.

ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಶವವಾಗಿ ಪತ್ತೆ
ಬಾಂಗ್ಲಾದೇಶ ಸಂಸದImage Credit source: Deccan Herald
Follow us
ನಯನಾ ರಾಜೀವ್
|

Updated on: May 22, 2024 | 2:10 PM

ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಂ ಅನಾರ್(Anwarul Azim Anar) ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸದಸ್ಯರಾದ ಅನಾರ್ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು.

ಅನಾರ್ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು, ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್​ನ ಹಿರಿಯ ಅಧಿಕಾರಿಗಳ ಪ್ರಕಾರ, ಹಸೀನಾ ಅವರ ಪಕ್ಷದಿಂದ ಮೂರು ಬಾರಿ ಸಂಸದರಾಗಿದ್ದ ಅನಾರ್ ಕೋಲ್ಕತ್ತಾಗೆ ಆಗಮಿಸಿದ ಒಂದು ದಿನದ ನಂತರ ನಾಪತ್ತೆಯಾಗಿದ್ದರು.

ವೈದ್ಯಕೀಯ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು, ನಗರದ ಬಾರಾನಗರದಲ್ಲಿರುವ ಸ್ನೇಹಿತ ಗೋಪಾಲ್​ ಬಿಸ್ವಾಸ್ ಅವರ ಮನೆಯಲ್ಲಿ ಉಳಿದುಕೊಂಡಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ಹೋಗುತ್ತಿದ್ದೇನೆಂದು ಹೊರಟವರು ಹಿಂದಿರುಗಿ ಬಂದಿರಲಿಲ್ಲ.

ಮತ್ತಷ್ಟು ಓದಿ: Sheikh Hasina: 40 ವರ್ಷದಲ್ಲಿ 19 ಬಾರಿ ಹತ್ಯಾ ಪ್ರಯತ್ನದಿಂದ ಬಚಾವಾಗಿದ್ದಾರೆ ಏಷ್ಯಾ ಖಂಡದ ಈ ಮಹಿಳಾ ಪ್ರಧಾನಿ

ಸಂಸದರು ಚಿನ್ನದ ಆಮದು ಹಾಗೂ ರಫ್ತು ವ್ಯವಹಾರವನ್ನು ಹೊಂದಿದ್ದರು, ಹತ್ಯೆಯಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್​ಗಳ ಕೈವಾಡವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ನಂತರ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಆರೋಪಿಗಳು ಎಂದು ಗುರುತಿಸಿದ್ದಾರೆ. ಅವರಲ್ಲಿ ಒಬ್ಬರನ್ನು ಬಂಧಿಸಲಾಗಿದೆ.

ಸಂಸದರ ಹತ್ಯೆಯ ನಂತರ ಅವರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದಾರೆ ಎಂಬುದನ್ನು ಗುಪ್ತಚರ ವರದಿಗಳು ದೃಢಪಡಿಸಿವೆ. 56 ವರ್ಷದ ಸಂಸದ ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದರೂ, ಅವರ ಕುಟುಂಬದವರಿಗೆ ಇವರ ಮೊಬೈಲ್​ನಿಂದ ದೆಹಲಿಗೆ ತೆರಳುತ್ತಿದ್ದೇನೆ ಎನ್ನುವ ಸಂದೇಶ ಬಂದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ