ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​

ಕೋಲ್ಕತ್ತಾದಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಅನ್ವರುಲ್ ಅಜೀಂ ಅನ್ವರ್ ಹತ್ಯೆಗೂ ಮುನ್ನ ಅವರು ಹನಿಟ್ರ್ಯಾಪ್​ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಕೊಲೆಗೂ ಮುನ್ನ ನಡೆದಿತ್ತು ಹನಿಟ್ರ್ಯಾಪ್​
Follow us
|

Updated on: May 24, 2024 | 1:56 PM

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್(Anwarul Azim Anar)​ ಹತ್ಯೆಗೂ ಮುನ್ನ ಅವರು ಹನಿಟ್ರ್ಯಾಪ್​ಗೆ ಒಳಗಾಗಿದ್ದರು ಎಂಬುದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಶಿಲಾಂತಿ ರೆಹಮಾನ್ ಎಂಬ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಅವರ ಗೆಳತಿ ಎಂದು ಬಾಂಗ್ಲಾದೇಶ ಪೊಲೀಸ್ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ.

ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ ಅವರು ಅವಾಮಿ ಲೀಗ್ ಸಂಸದರ ಸ್ನೇಹಿತರಾಗಿದ್ದರು. ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ಅಖ್ತರುಝಾಮಾನ್ ಅವರ ಬಾಡಿಗೆ ನಿವಾಸದಲ್ಲಿ ಸಂಸದರನ್ನು ಹತ್ಯೆ ಮಾಡಲಾಗಿದೆ. ಅನ್ವರುಲ್ ಹತ್ಯೆಯಾದಾಗ ಶಿಲಾಂತಿ ಕೋಲ್ಕತ್ತಾದಲ್ಲಿ ಇದ್ದಳು ಮತ್ತು ಮೇ 15 ರಂದು ಮುಖ್ಯ ಶಂಕಿತ ಕೊಲೆಗಾರ ಅಮಾನುಲ್ಲಾ ಅಮನ್ ಜೊತೆಗೆ ಢಾಕಾಗೆ ಮರಳಿದ್ದಾಳೆ.

ಅನ್ವರುಲ್ ನನ್ನು ಬಾಂಗ್ಲಾದೇಶದಿಂದ ಕೋಲ್ಕತ್ತಾಗೆ ಕರೆತರಲು ಶಿಲಾಂತಿಯನ್ನು ಅಖ್ತರುಜ್ಜಮಾನ್ ಹನಿ ಟ್ರ್ಯಾಪ್ ಆಗಿ ಬಳಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಪರಾಧದ ಉದ್ದೇಶವನ್ನು ಪೊಲೀಸರು ಇನ್ನೂ ಔಪಚಾರಿಕವಾಗಿ ಘೋಷಿಸದಿದ್ದರೂ, ಹಣಕಾಸಿನ ವಿಚಾರದಲ್ಲೇ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಶವವಾಗಿ ಪತ್ತೆ

ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸದಸ್ಯರಾದ ಅನಾರ್ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು.

ಅನಾರ್ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು, ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್​ನ ಹಿರಿಯ ಅಧಿಕಾರಿಗಳ ಪ್ರಕಾರ, ಹಸೀನಾ ಅವರ ಪಕ್ಷದಿಂದ ಮೂರು ಬಾರಿ ಸಂಸದರಾಗಿದ್ದ ಅನಾರ್ ಕೋಲ್ಕತ್ತಾಗೆ ಆಗಮಿಸಿದ ಒಂದು ದಿನದ ನಂತರ ನಾಪತ್ತೆಯಾಗಿದ್ದರು.

ವೈದ್ಯಕೀಯ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು, ನಗರದ ಬಾರಾನಗರದಲ್ಲಿರುವ ಸ್ನೇಹಿತ ಗೋಪಾಲ್​ ಬಿಸ್ವಾಸ್ ಅವರ ಮನೆಯಲ್ಲಿ ಉಳಿದುಕೊಂಡಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ಹೋಗುತ್ತಿದ್ದೇನೆಂದು ಹೊರಟವರು ಹಿಂದಿರುಗಿ ಬಂದಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್