ಮಮತಾ ಬ್ಯಾನರ್ಜಿಗೆ 6 ಕ್ವಿಂಟಾಲ್ ಮಾವಿನ ಹಣ್ಣು ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)ಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)ಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು. ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ.
ಪ್ರಧಾನಿ ಮೋದಿಗೆ ಮಾವಿನ ಹಣ್ಣು ಕಳುಹಿಸಿದ್ದ ಮಮತಾ ನಂಬರ್ 1 ತಳಿಗಳಾದ ಹಿಮಸಾಗರ, ಲಕ್ಷ್ಮಣಭೋಗ್ ಮತ್ತು ಫಾಸ್ಲಿ ಸೇರಿದಂತೆ ನಾಲ್ಕು ಕಿಲೋಗ್ರಾಂಗಳಷ್ಟು ವಿವಿಧ ತಳಿಯ ಮಾವಿನ ಹಣ್ಣುಗಳನ್ನು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನಿ ನಿವಾಸಕ್ಕೆ ಕಳುಹಿಸಲಾಯಿತು. ಮಾವಿನ ಹಣ್ಣುಗಳನ್ನು ಸುಂದರವಾದ ಉಡುಗೊರೆ ಪೆಟ್ಟಿಗೆಯಲ್ಲಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಆಪ್ತ ಮೂಲಗಳು ತಿಳಿಸಿದ್ದವು.
ಮತ್ತಷ್ಟು ಓದಿ: ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಮಾಹಿತಿ ಇಲ್ಲಿವೆ
ಮೋದಿ ಅವರಿಗಷ್ಠೇ ಅಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೂಡ ಮಾವಿನ ಹಣ್ಣುನ್ನು ಕಳುಹಿಸಿ, ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದರು.
2019 ರ ದುರ್ಗಾ ಪೂಜೆಯ ಸಂದರ್ಭದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಗೆ ಕುರ್ತಾ, ಪೈಜಾಮ ಮತ್ತು ಸಿಹಿತಿಂಡಿಗಳನ್ನು ಕಳುಹಿಸಿದ್ದರು ಎಂದು ಸ್ವತಃ ಪ್ರಧಾನಿ ಮೋದಿ ಬಹಿರಂಗಪಡಿಸಿದ್ದರು. ವಿರೋಧ ಪಕ್ಷಗಳಲ್ಲಿ ನನಗೆ ಅನೇಕ ಸ್ನೇಹಿತರಿದ್ದಾರೆ ಎಂದು ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ