ಬಾಂಗ್ಲಾದೇಶದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮಗಳಿಗೆ ಶೇಖ್ ಹಸೀನಾ ಆಹ್ವಾನ

ಜನರ ಅಗತ್ಯಗಳನ್ನು ಪೂರೈಸಲು ಭಾರತದೊಂದಿಗೆ ಕೆಲಸ ಮಾಡಲು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಬಾಂಗ್ಲಾದೇಶದ ಆರ್ಥಿಕತೆಯನ್ನು ಬಲಿಷ್ಠ ಮತ್ತು ಹೆಚ್ಚು ಸುಸ್ಥಿರವಾಗಿಸಲು ತಾನು ಬಯಸುತ್ತೇವನೆ. ಬಾಂಗ್ಲಾದೇಶವು ದೊಡ್ಡ ಬಂದರುಗಳು, ಜಲಮಾರ್ಗಗಳು, ರೈಲು ಮತ್ತು ರಸ್ತೆ ಸಂಪರ್ಕಕ್ಕಾಗಿ ಕೆಲಸ ಮಾಡುತ್ತದೆ ಎಂದು ಶೇಖ್ ಹಸೀನಾ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮಗಳಿಗೆ ಶೇಖ್ ಹಸೀನಾ ಆಹ್ವಾನ
ಶೇಖ್ ಹಸೀನಾ
Follow us
ರಶ್ಮಿ ಕಲ್ಲಕಟ್ಟ
|

Updated on: Jun 22, 2024 | 6:04 PM

ದೆಹಲಿ ಜೂನ್ 22: ಬಾಂಗ್ಲಾದೇಶದ (Bangladesh) ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ದೇಶದ ವಿಶೇಷ ಆರ್ಥಿಕ ವಲಯಗಳಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮಗಳಿಗೆ ಆಹ್ವಾನ ನೀಡಿದ್ದಾರೆ, ಇದು ದ್ವಿಪಕ್ಷೀಯ ಆರ್ಥಿಕ ಸಹಕಾರದ ದೊಡ್ಡ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ಶುಕ್ರವಾರ ಸಂಜೆ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (CII) ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಹಸೀನಾ, ಭಾರತ ಮತ್ತು ಬಾಂಗ್ಲಾದೇಶ ಎರಡೂ ವ್ಯಾಪಾರ ಮಾಡಲು ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಭಾರತದಾದ್ಯಂತ, ದೊಡ್ಡ ಮಾರುಕಟ್ಟೆ ಇರುವುದರಿಂದ ಎರಡೂ ದೇಶಗಳು ಜಂಟಿಯಾಗಿ ಕೆಲಸ ಮಾಡಬಹುದು ಮತ್ತು ನಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದು. ವ್ಯಾಪಾರ ಮಾಡಲು ಉತ್ತಮ ಅವಕಾಶವಿದೆ” ಎಂದು ಹೇಳಿದ ಹಸೀನಾ, ವ್ಯಾಪಾರ ಮಾಡುವುದು ದ್ವಿಪಕ್ಷೀಯ ಸಂಬಂಧದ ಪ್ರಮುಖ ಭಾಗವಾಗಿದೆ ಎಂದು ಒತ್ತಿ ಹೇಳಿದರು.

ಜನರ ಅಗತ್ಯಗಳನ್ನು ಪೂರೈಸಲು ಭಾರತದೊಂದಿಗೆ ಕೆಲಸ ಮಾಡಲು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಬಾಂಗ್ಲಾದೇಶದ ಆರ್ಥಿಕತೆಯನ್ನು ಬಲಿಷ್ಠ ಮತ್ತು ಹೆಚ್ಚು ಸುಸ್ಥಿರವಾಗಿಸಲು ತಾನು ಬಯಸುತ್ತೇವನೆ. ಬಾಂಗ್ಲಾದೇಶವು ದೊಡ್ಡ ಬಂದರುಗಳು, ಜಲಮಾರ್ಗಗಳು, ರೈಲು ಮತ್ತು ರಸ್ತೆ ಸಂಪರ್ಕಕ್ಕಾಗಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ಆಗ್ನೇಯ ಏಷ್ಯಾದ ಪ್ರದೇಶಗಳಿಗೆ ಬಾಂಗ್ಲಾದೇಶವು ಭಾರತದ ಭೂಸೇತುವೆಯಾಗಿದೆ ಮತ್ತು ಪೂರೈಕೆ ಸರಪಳಿಗಳು ಬದಲಾಗುತ್ತಿರುವ ಸಮಯದಲ್ಲಿ ಬಾಂಗ್ಲಾದೇಶ ಮತ್ತು ಭಾರತವು ಒಟ್ಟಿಗೆ ಮಾರುಕಟ್ಟೆಯನ್ನು ಪರಿಹರಿಸಬಹುದು. ಕೃಷಿಯಲ್ಲಿ ಉಭಯ ರಾಷ್ಟ್ರಗಳು ಖಾಸಗಿ ವಲಯಗಳ ನಡುವೆ ಜಂಟಿ ಉದ್ಯಮಗಳನ್ನು ಸ್ಥಾಪಿಸಬಹುದು ಎಂದು ಸಿಐಐ ಅಧ್ಯಕ್ಷ ಸಂಜೀವ್ ಪುರಿ ಹೇಳಿದ್ದಾರೆ.

ಸಿಐಐನ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಮಾತನಾಡಿ, ಆರ್ಥಿಕ ವ್ಯವಹಾರಗಳನ್ನು ಹೆಚ್ಚಿಸಲು ಸಿಐಐ ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶಕ್ಕೆ CEO ಗಳ ನಿಯೋಗ ಭೇಟಿ ನೀಡಲಿದೆ ಎಂದಿದ್ದಾರೆ.  ಉದ್ಯಮದ ಸಂವಾದದ ಸಮಯದಲ್ಲಿ, ಜಲವಿದ್ಯುತ್‌ಗೆ ವಿಶೇಷ ಒತ್ತು ನೀಡುವ ಮೂಲಕ ಬಾಂಗ್ಲಾದೇಶಕ್ಕೆ ಶಕ್ತಿಯ ಪೂರೈಕೆಯನ್ನು ಹೆಚ್ಚಿಸುವುದು ಮತ್ತು ಬಾಂಗ್ಲಾದೇಶಕ್ಕೆ ಹೆಚ್ಚಿನ ಶಕ್ತಿ ಪ್ರಸರಣ ಮಾರ್ಗಗಳನ್ನು ರಚಿಸುವುದು ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಇದನ್ನೂ ಓದಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಪಿಎಂ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ

ದೂರಸಂಪರ್ಕ ಪರಿಹಾರಗಳ ಮೂಲಕ ಬಾಂಗ್ಲಾದೇಶದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಬಗ್ಗೆ, ಕೃಷಿ, ವ್ಯಾಪಾರ ಮತ್ತು ಐಟಿಯಂತಹ ಸಹಯೋಗದ ಇತರ ಕ್ಷೇತ್ರಗಳ ಬಗ್ಗೆಯೂ ಚರ್ಚಿಸಲಾಯಿತು. ಉಭಯ ದೇಶಗಳ ನಡುವಿನ ಈಗಾಗಲೇ ನಿಕಟ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಹಸೀನಾ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಭಾರತದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ವಿದೇಶಿ ನಾಯಕರ ಮೊದಲ ರಾಜ್ಯ ಭೇಟಿ ಇದಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್