PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಗೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ

ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ ದೆಹಲಿಗೆ ಆಗಮಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

PM Modi Oath Taking Ceremony: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಗೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಶೇಖಾ ಹಸೀನಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 08, 2024 | 1:03 PM

ದೆಹಲಿ, ಜೂ.8: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಸಂಜೆ 6 ಗಂಟೆಗೆ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದೇಶ ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶ ಪ್ರಧಾನಿ ಸೇರಿದಂತೆ ಅನೇಕರಿಗೆ ಪ್ರಮಾಣ ವಚನದ ಆಹ್ವಾನ ಹೋಗಿದೆ. ಇದೀಗ ಬಾಂಗ್ಲಾದೇಶ ಪ್ರಧಾನಿ ಶೇಖಾ ಹಸೀನಾ ಅವರು ದೆಹಲಿ ಬಂದಿದ್ದಾರೆ ಎಂದು ಹೇಳಲಾಗಿದೆ. ಭಾರತದ ನೆರೆಯ ರಾಷ್ಟ್ರ ಬಾಂಗ್ಲಾ, ಅನೇಕ ವಿಚಾರಗಳಿಗೆ ಭಾರತ ಜತೆಗೆ ರಾಜತಾಂತ್ರಿಕ ಉತ್ತಮ ಸಂಬಂಧವನ್ನು ಇಟ್ಟುಕೊಂಡಿದೆ.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿಂದೆ ಚೀನಾದ ಮಾತು ಕೇಳಿ ಭಾರತದ ಜತೆಗೆ ಸಂಬಂಧವನ್ನು ಮುರಿದುಕೊಂಡಿತ್ತು. ಇದರಿಂದ ಹೇಳಿಕೊಳ್ಳಲಾಗಷ್ಟು ನಷ್ಟವನ್ನು ಮಾಲ್ಡೀವ್ಸ್ ಅನುಭವಿಸಿತ್ತು. ಇದೀಗ ಇದನ್ನು ಸರಿಪಡಿಸಿಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ. ಈ ಸಮಾರಂಭ ಮುನ್ನಡಿಯನ್ನು ಹಾಕಲಿದೆ ಎಂದು ಹೇಳಲಾಗಿದೆ. ಮಾಲ್ಡೀವ್ಸ್ ಅಧ್ಯಕ್ಷ ಆದ ನಂತರ ಮೊಹಮ್ಮದ್ ಮುಯಿಝು ಭಾರತದ ಮೊದಲು ಭೇಟಿಯಾಗಿದೆ.

ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಅವರೇ ಖಚಿತಪಡಿಸಿದ್ದಾರೆ. ದಹಲ್ ಮತ್ತು ರನಿಲ್ ವಿಕ್ರಮಸಿಂಘೆ ಜೂನ್ 9 ರಂದು ದೆಹಲಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್, ಮೆಟ್ರೋ ರೈಲು ಸಿಬ್ಬಂದಿಗೆ ವಿಶೇಷ ಆಹ್ವಾನ

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಈಗಾಗಲೇ ಭಾರತಕ್ಕೆ ಬಂದಿದ್ದು, ಜೂನ್​​ 10ರವರೆಗೆ ಭಾರತದಲ್ಲಿ ಇರಲಿದ್ದಾರೆ. ನಂತರ ಬಾಂಗ್ಲಾಕ್ಕೆ ಹೋಗಲಿದ್ದಾರೆ. ಇನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವ ಪ್ರಧಾನಿಗಳೊಂದಿಗೆ ಆ ದೇಶದ ವಿದೇಶಾಂಗ ಸಚಿವರು ಕೂಡ ಬರಲಿದ್ದಾರೆ. ಈ ಸಮಯದಲ್ಲಿ ರಾಜತಾಂತ್ರಿಕ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:02 pm, Sat, 8 June 24

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು