
ದೆಹಲಿ, ಜೂ.8: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಸಂಜೆ 6 ಗಂಟೆಗೆ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದೇಶ ನಾಯಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶ ಪ್ರಧಾನಿ ಸೇರಿದಂತೆ ಅನೇಕರಿಗೆ ಪ್ರಮಾಣ ವಚನದ ಆಹ್ವಾನ ಹೋಗಿದೆ. ಇದೀಗ ಬಾಂಗ್ಲಾದೇಶ ಪ್ರಧಾನಿ ಶೇಖಾ ಹಸೀನಾ ಅವರು ದೆಹಲಿ ಬಂದಿದ್ದಾರೆ ಎಂದು ಹೇಳಲಾಗಿದೆ. ಭಾರತದ ನೆರೆಯ ರಾಷ್ಟ್ರ ಬಾಂಗ್ಲಾ, ಅನೇಕ ವಿಚಾರಗಳಿಗೆ ಭಾರತ ಜತೆಗೆ ರಾಜತಾಂತ್ರಿಕ ಉತ್ತಮ ಸಂಬಂಧವನ್ನು ಇಟ್ಟುಕೊಂಡಿದೆ.
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿಂದೆ ಚೀನಾದ ಮಾತು ಕೇಳಿ ಭಾರತದ ಜತೆಗೆ ಸಂಬಂಧವನ್ನು ಮುರಿದುಕೊಂಡಿತ್ತು. ಇದರಿಂದ ಹೇಳಿಕೊಳ್ಳಲಾಗಷ್ಟು ನಷ್ಟವನ್ನು ಮಾಲ್ಡೀವ್ಸ್ ಅನುಭವಿಸಿತ್ತು. ಇದೀಗ ಇದನ್ನು ಸರಿಪಡಿಸಿಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ. ಈ ಸಮಾರಂಭ ಮುನ್ನಡಿಯನ್ನು ಹಾಕಲಿದೆ ಎಂದು ಹೇಳಲಾಗಿದೆ. ಮಾಲ್ಡೀವ್ಸ್ ಅಧ್ಯಕ್ಷ ಆದ ನಂತರ ಮೊಹಮ್ಮದ್ ಮುಯಿಝು ಭಾರತದ ಮೊದಲು ಭೇಟಿಯಾಗಿದೆ.
ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಅವರೇ ಖಚಿತಪಡಿಸಿದ್ದಾರೆ. ದಹಲ್ ಮತ್ತು ರನಿಲ್ ವಿಕ್ರಮಸಿಂಘೆ ಜೂನ್ 9 ರಂದು ದೆಹಲಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್, ಮೆಟ್ರೋ ರೈಲು ಸಿಬ್ಬಂದಿಗೆ ವಿಶೇಷ ಆಹ್ವಾನ
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಈಗಾಗಲೇ ಭಾರತಕ್ಕೆ ಬಂದಿದ್ದು, ಜೂನ್ 10ರವರೆಗೆ ಭಾರತದಲ್ಲಿ ಇರಲಿದ್ದಾರೆ. ನಂತರ ಬಾಂಗ್ಲಾಕ್ಕೆ ಹೋಗಲಿದ್ದಾರೆ. ಇನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವ ಪ್ರಧಾನಿಗಳೊಂದಿಗೆ ಆ ದೇಶದ ವಿದೇಶಾಂಗ ಸಚಿವರು ಕೂಡ ಬರಲಿದ್ದಾರೆ. ಈ ಸಮಯದಲ್ಲಿ ರಾಜತಾಂತ್ರಿಕ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:02 pm, Sat, 8 June 24