AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯ ಬಂಧನ

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ದಂಪತಿಯನ್ನು ಬಿಎಸ್​ಎಫ್​ ಯೋಧರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಚಂಗ್ರಬಂಧ ವಲಸೆ ಚೆಕ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ದಂಪತಿ ನಕಲಿ ಭಾರತೀಯ ದಾಖಲೆಗಳೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯ ಬಂಧನ
ಸಿಕ್ಕಿಬಿದ್ದ ದಂಪತಿImage Credit source: India Today
ನಯನಾ ರಾಜೀವ್
|

Updated on:Aug 07, 2024 | 11:34 AM

Share

ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ಜನರ ನಿದ್ದೆಗೆಡಿಸಿವೆ. ನಕಲಿ ಗುರುತಿನ ಚೀಟಿ(ID Cards) ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯನ್ನು ಗಡಿಯಲ್ಲಿ ಬಿಎಸ್​ಎಫ್ ಯೋಧರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಚಂಗ್ರಬಂಧ ವಲಸೆ ಚೆಕ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ದಂಪತಿ ನಕಲಿ ಭಾರತೀಯ ದಾಖಲೆಗಳೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ದಂಪತಿಯನ್ನು ಇನಾಮುಲ್ ಹಕ್ ಸೊಹೈಲ್ ಮತ್ತು ಅವರ ಪತ್ನಿ ಸಂಜಿದಾ ಝಿನಾ ಇಲಾಹಿ ಎಂದು ಗುರುತಿಸಲಾಗಿದ್ದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿವೆ. ಅವರ ಜೊತೆಯಲ್ಲಿ ಅವರ ಪುಟ್ಟ ಮಗು ಕೂಡ ಇತ್ತು.

ಬಾಂಗ್ಲಾದೇಶದಿಂದ 7 ಬಾಂಗ್ಲಾದೇಶದಿಂದ 7 ದಿನಗಳ ವೈದ್ಯಕೀಯ ವೀಸಾದೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಗಡಿ ಭದ್ರತಾ ಪಡೆ (ಬಿಎಸ್ಎಫ್) ದಂಪತಿಯನ್ನು ಕಸ್ಟಡಿಗೆ ತೆಗೆದುಕೊಂಡಿತು.

ಮತ್ತಷ್ಟು ಓದಿ: ದೇಶದಲ್ಲಿ ಅಶಾಂತಿ ಸೃಷ್ಟಿಯಾದಾಗ ದೇಶ ಬಿಟ್ಟು ಪಲಾಯನ ಮಾಡಿರುವ ನಾಯಕರಲ್ಲಿ ಹಸೀನಾ ಮೊದಲಿಗರಲ್ಲ

ಬಾಂಗ್ಲಾದೇಶದ ರಂಗ್‌ಪುರ ಮೂಲದ ಸೊಹೈಲ್‌ನನ್ನು ಬಿಎಸ್‌ಎಫ್ ಅಧಿಕಾರಿಗಳು ಚಂಗ್ರಬಂಧದಲ್ಲಿ ತಪಾಸಣೆಯ ಭಾಗವಾಗಿ ಬಂಧಿಸಿದ್ದಾರೆ. ಅವರ ಸಾಮಾನುಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಬಿಎಸ್‌ಎಫ್ ಸಿಬ್ಬಂದಿ ದಂಪತಿಯ ಲಗೇಜ್‌ನಲ್ಲಿ ಅಡಗಿಸಿಟ್ಟ ಭಾರತೀಯ ದಾಖಲೆಗಳನ್ನು ಪತ್ತೆ ಮಾಡಿದರು. ಐಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈ ದಾಖಲೆಗಳ ಸತ್ಯಾಸತ್ಯತೆ ಮತ್ತು ಮೂಲವು ಪ್ರಸ್ತುತ ತನಿಖೆಯಲ್ಲಿದೆ.

ಅವರ ಬಂಧನದ ನಂತರ, ದಂಪತಿಯನ್ನು ಹೆಚ್ಚಿನ ವಿಚಾರಣೆ ಮತ್ತು ಕಾನೂನು ಕ್ರಮಕ್ಕಾಗಿ ಬಂಗಾಳ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಘಟನೆಯ ನಂತರ ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 7 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ