ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ; ಬಾಂಗ್ಲಾದೇಶದ ವ್ಯಕ್ತಿಯ ಬಂಧನ

|

Updated on: Dec 17, 2024 | 7:24 PM

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಬಾಂಗ್ಲಾದೇಶ ಮೂಲದ ವ್ಯಕ್ತಿಯನ್ನು ಇಂದು ದೆಹಲಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಶೇಖ್ ಅತಾಲ್ ಎಂದು ಗುರುತಿಸಲಾಗಿದೆ. ಶೇಖ್ ಅತಾಲ್ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು. ಪೊಲೀಸರು ಶಸ್ತ್ರಾಸ್ತ್ರ ಮತ್ತು ಇತರ ದೋಷಾರೋಪಣೆಯ ಸಾಕ್ಷ್ಯವನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ; ಬಾಂಗ್ಲಾದೇಶದ ವ್ಯಕ್ತಿಯ ಬಂಧನ
Yogi Adityanath (4)
Follow us on

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಕೊಲೆ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ನಂತರ, ಸೆಕ್ಟರ್ 39 ನೋಯ್ಡಾ ಪೊಲೀಸರು ಕ್ರಮ ಕೈಗೊಂಡು ಆ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ್‌ನನ್ನು ಕೊಂಲೆ ಮಾಡುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು ಕಂಡುಬಂದಿದೆ.

ಮೂಲತಃ ಬಾಂಗ್ಲಾದೇಶದವರಾದ ಶೇಖ್ ಅತಾಲ್ ಅವರನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. 40 ವರ್ಷದ ಶೇಖ್ ಅತಾಲ್ ಅವರ ಬಳಿ ಪಿಸ್ತೂಲ್, ಕಾರ್ಟ್ರಿಡ್ಜ್ಗಳು, ಆಕ್ಷೇಪಾರ್ಹ ದಾಖಲೆಗಳು ಮತ್ತು ಮೊಬೈಲ್ ಫೋನ್ ಪತ್ತೆಯಾಗಿದೆ. ಇದನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಹಾಕಲು ಬಳಸಲಾಗಿತ್ತು.

ಇದನ್ನೂ ಓದಿ: ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಭಾರಿ ಏರಿಕೆ : ಸೆಪ್ಟೆಂಬರ್’ನಲ್ಲಿ 1.88 ಮಿಲಿಯನ್ ನಷ್ಟು ಉದ್ಯೋಗ ಸೃಷ್ಟಿ

ಈ ಹಿಂದೆಯೂ ಯೋಗಿ ಆದಿತ್ಯನಾಥ್ ವಿರುದ್ಧ ಇದೇ ರೀತಿಯ ಕೊಲೆ ಬೆದರಿಕೆಗಳು ಬಂದಿದ್ದವು. ನವೆಂಬರ್‌ನಲ್ಲಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಹಾಕಿದ್ದಕ್ಕಾಗಿ 24 ವರ್ಷದ ಮಹಿಳೆಯನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇನ್ನು 10 ದಿನಗಳಲ್ಲಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿತ್ತು. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಬಂದಿತ್ತು.

ಏಪ್ರಿಲ್‌ನಲ್ಲಿ ಪ್ರಯಾಗ್​ರಾಜ್ ಜಿಲ್ಲೆಯ ಗೋಪಾಲ್ ಗಂಜ್ ಪ್ರದೇಶದ ವ್ಯಕ್ತಿಯೊಬ್ಬರು ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅವರ ಮನೆಗೆ ಬುಲ್ಡೋಜರ್ ತಂದು ನೆಲಸಮ ಮಾಡುವಂತೆ ಸವಾಲು ಹಾಕಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ