ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಮುಹಮ್ಮದ್ ಯೂನಸ್; ಹಿಂದೂಗಳು ಮತ್ತು ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ

|

Updated on: Aug 16, 2024 | 5:41 PM

ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಹಿಂದೂ ಸಮುದಾಯದ ಸದಸ್ಯರ ಮೇಲೆ ದಾಳಿಗಳು ವರದಿಯಾದ ನಂತರ ಯೂನಸ್ ಅವರಿಂದ ಭರವಸೆ ಬಂದಿದೆ. ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ "ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ" ಯೂನಸ್ ಅವರನ್ನು ಅಭಿನಂದಿಸಿದಾಗ ಪ್ರಧಾನಿ ಮೋದಿ ಈ ಹಿಂದೆ ಬಾಂಗ್ಲಾದೇಶದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆ ಖಾತರಿ ಪಡಿಸುವಂತೆ ಹೇಳಿದ್ದರು.

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಮುಹಮ್ಮದ್ ಯೂನಸ್; ಹಿಂದೂಗಳು ಮತ್ತು ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ
ಮುಹಮ್ಮದ್ ಯೂನಸ್ - ಮೋದಿ
Follow us on

ದೆಹಲಿ ಆಗಸ್ಟ್ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಮುಹಮ್ಮದ್ ಯೂನಸ್ (Muhammad Yunus )ಅವರು ಇಂದು (ಶುಕ್ರವಾರ) ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಶೇಖ್ ಹಸೀನಾ (Sheikh Hasina) ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ “ತಾನು ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ” ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ. ಯೂನಸ್ ಅವರು ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಭರವಸೆ ನೀಡಿದರು ಎಂದು ಹೇಳಿದ್ದಾರೆ.

ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ. ಅವರು ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಮೋದಿ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಮೋದಿ ಟ್ವೀಟ್


ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಹಿಂದೂ ಸಮುದಾಯದ ಸದಸ್ಯರ ಮೇಲೆ ದಾಳಿಗಳು ವರದಿಯಾದ ನಂತರ ಯೂನಸ್ ಅವರಿಂದ ಭರವಸೆ ಬಂದಿದೆ. ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ “ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ” ಯೂನಸ್ ಅವರನ್ನು ಅಭಿನಂದಿಸಿದಾಗ ಪ್ರಧಾನಿ ಮೋದಿ ಈ ಹಿಂದೆ ಬಾಂಗ್ಲಾದೇಶದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆ ಖಾತರಿ ಪಡಿಸುವಂತೆ ಹೇಳಿದ್ದರು.

ಬಾಂಗ್ಲಾದೇಶದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಭದ್ರತೆಯ ಬಗ್ಗೆ ಮೋದಿ ಗುರುವಾರ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಕಳವಳ ವ್ಯಕ್ತಪಡಿಸಿದರು.”ನೆರೆಯ ರಾಷ್ಟ್ರವಾಗಿ, ಬಾಂಗ್ಲಾದೇಶದಲ್ಲಿ ಏನಾಯಿತು ಎಂಬುದರ ಬಗ್ಗೆ ಕಾಳಜಿಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅಲ್ಲಿನ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Assembly Elections: ಚುನಾವಣಾ ಆಯೋಗ ಮಹಾರಾಷ್ಟ್ರ ಚುನಾವಣೆಯ ದಿನಾಂಕವನ್ನು ಏಕೆ ಘೋಷಿಸಲಿಲ್ಲ?

ಏತನ್ಮಧ್ಯೆ, ಬಾಂಗ್ಲಾದೇಶದ ವಿದೇಶಾಂಗ ಸಚಿವ ತೌಹಿದ್ ಹೊಸೈನ್ ಗುರುವಾರ ರಾಯಿಟರ್ಸ್ಗೆ ಹಸೀನಾ ವಿರುದ್ಧ ಕೊಲೆ ಆರೋಪಗಳು ಸೇರಿದಂತೆ ಪ್ರಕರಣಗಳು ಹೆಚ್ಚಾದಂತೆ ಹಸೀನಾಳನ್ನು ಹಸ್ತಾಂತರಿಸುವಂತೆ ಭಾರತವನ್ನು ಕೇಳಬೇಕೆ ಎಂದು ಮಧ್ಯಂತರ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದರು. ಗೃಹ ಮತ್ತು ಕಾನೂನು ಸಚಿವಾಲಯಗಳು ನಿರ್ಧರಿಸಿದರೆ, “ನಾವು ಆಕೆಯನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಕೇಳುತ್ತೇವೆ ಎಂದಿದ್ದಾರೆ ಹೊಸೈನ್.

“ಇದು ಭಾರತ ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ”. ಭಾರತಕ್ಕೆ ಇದು ತಿಳಿದಿದೆ ಮತ್ತು ಅವರು ಅದನ್ನು ನೋಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೊಸೈನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ