ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಅಟ್ಟಹಾಸ; ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ
ಕುಲ್ಗಾಮ್ ಜಿಲ್ಲೆಯ ಅರೆಹ್ ಮೋಹನ್‌ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್‌ನಲ್ಲಿ ಬ್ಯಾಂಕ್ ಉದ್ಯೋಗಿ (ಮ್ಯಾನೇಜರ್) ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರಿಗೆ ಗುಂಡೇಟಿನಿಂದ ಗಂಭೀರ ಗಾಯಗಳಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ.
ಕುಲ್ಗಾಂ: ಕುಲ್ಗಾಂ ಜಿಲ್ಲೆಯ ಶಾಲೆಯ ಹೊರಗೆ ಮಹಿಳಾ ಶಿಕ್ಷಕಿಯೊಬ್ಬರನ್ನು ಕೊಲೆ ಮಾಡಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಶಂಕಿತ ಉಗ್ರಗಾಮಿಗಳು ರಾಜಸ್ಥಾನದ (Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿದೆ. ಕುಲ್ಗಾಮ್‌ನ ಅರೆಹ್ ಮೋಹನ್‌ಪೋರಾ ಗ್ರಾಮದಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ (ಇಡಿಬಿ) ಹನುಮಾನ್‌ಗಢದ ವಿಜಯ್ ಕುಮಾರ್ ಎಂದು ಗುರುತಿಸಲಾದ ಬ್ಯಾಂಕ್ ಮ್ಯಾನೇಜರ್ ಮೇಲೆ ಉಗ್ರರು ಗುಂಡಿನ (Terrorist Attack) ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಅರೆಹ್ ಮೋಹನ್‌ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್‌ನಲ್ಲಿ ಬ್ಯಾಂಕ್ ಉದ್ಯೋಗಿ (ಮ್ಯಾನೇಜರ್) ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರಿಗೆ ಗುಂಡೇಟಿನಿಂದ ಗಂಭೀರ ಗಾಯಗಳಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ. ಅವರು ರಾಜಸ್ಥಾನದ ಹನುಮಾನ್‌ಗಢ ನಿವಾಸಿಯಾಗಿದ್ದಾರೆ. ಆ ಪ್ರದೇಶವನ್ನು ಸುತ್ತುವರಿದಿರುವ ಪೊಲೀಸರು ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಶೋಪಿಯಾನ್ನಲ್ಲಿ ಸ್ಫೋಟ; ಮೂವರು ಯೋಧರಿಗೆ ಗಾಯ
ಕೆಲವು ದಿನಗಳ ಹಿಂದಷ್ಟೇ ವಿಜಯ್ ಕುಮಾರ್ ತಮ್ಮ ಹೊಸ ಪೋಸ್ಟಿಂಗ್‌ಗೆ ಸೇರಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಗ್ರರ ದಾಳಿಯ ನಂತರ ಜಮ್ಮು ಕಾಶ್ಮೀರದ ಪೊಲೀಸರು, ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಜಂಟಿ ತಂಡವು ದಾಳಿಗೆ ಕಾರಣವಾದ ಉಗ್ರರನ್ನು ಪತ್ತೆಹಚ್ಚಲು ಆ ಪ್ರದೇಶವನ್ನು ಸುತ್ತುವರೆದಿದೆ.
जम्मू कश्मीर के कुलगाम में कार्यरत हनुमानगढ़, राजस्थान के निवासी श्री विजय कुमार की आतंकियों द्वारा हत्या घोर निंदनीय है। मैं ईश्वर से उनकी आत्मा की शांति एवं परिवार को हिम्मत देने की प्रार्थना करता हूं।
— Ashok Gehlot (@ashokgehlot51) June 2, 2022
ಜಮ್ಮು ಕಾಶ್ಮೀರದ ಕುಲ್ಗಾಮ್‌ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ ಹನುಮಾನ್‌ಗಢ ನಿವಾಸಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆ ಅತ್ಯಂತ ಖಂಡನೀಯ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:28 pm, Thu, 2 June 22