AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Job 2026: ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು

ಬ್ಯಾಂಕ್ ಆಫ್ ಬರೋಡಾ (BOB) 2482 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಪದವೀಧರರು, ಒಂದು ವರ್ಷ ಬ್ಯಾಂಕಿಂಗ್ ಅನುಭವ ಮತ್ತು ಸ್ಥಳೀಯ ಭಾಷಾ ಜ್ಞಾನವಿರುವ 21-30 ವರ್ಷದ ಅಭ್ಯರ್ಥಿಗಳು ಅರ್ಹರು. ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಸೆಪ್ಟೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ.

Bank Job 2026: ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು
ಬ್ಯಾಂಕ್ ಆಫ್ ಬರೋಡಾ
ಅಕ್ಷತಾ ವರ್ಕಾಡಿ
|

Updated on: Aug 22, 2026 | 2:50 PM

Share

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (BOB) ಉತ್ತಮ ಅವಕಾಶವನ್ನು ನೀಡಿದೆ. ದೇಶಾದ್ಯಂತ ಇರುವ ಬ್ಯಾಂಕ್ ಶಾಖೆಗಳಲ್ಲಿ ನಿಯಮಿತ ಆಧಾರದ ಮೇಲೆ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 2,482 ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಒಟ್ಟು ಹುದ್ದೆಗಳಲ್ಲಿ ಆಂಧ್ರಪ್ರದೇಶ ರಾಜ್ಯದಲ್ಲಿ 80 ಹುದ್ದೆಗಳು ಹಾಗೂ ತೆಲಂಗಾಣ ರಾಜ್ಯದಲ್ಲಿ 50 ಹುದ್ದೆಗಳು ಖಾಲಿ ಇವೆ. ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ವಿವರ ಪರಿಶೀಲಿಸಬಹುದು.

ಶೈಕ್ಷಣಿಕ ಅರ್ಹತೆ ಮತ್ತು ಕೆಲಸದ ಅನುಭವ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ (Graduation) ಪೂರ್ಣಗೊಳಿಸಿರಬೇಕು. ಇದರೊಂದಿಗೆ ನಿಗದಿತ ವಾಣಿಜ್ಯ ಬ್ಯಾಂಕಿನಲ್ಲಿ ಕನಿಷ್ಠ ಒಂದು ವರ್ಷದ ಹುದ್ದೆಗೆ ಸಂಬಂಧಿಸಿದ ಸೇವಾನುಭವ ಹೊಂದಿರುವುದು ಕಡ್ಡಾಯವಾಗಿದೆ.

ಸ್ಥಳೀಯ ಭಾಷಾ ಜ್ಞಾನ ಮತ್ತು ವಯೋಮಿತಿ:

ಅಭ್ಯರ್ಥಿಯು ತಾನು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳಲು ಸಮರ್ಥರಿರಬೇಕು. ಆಗಸ್ಟ್ 1, 2026 ರ ವೇಳೆಗೆ ಅಭ್ಯರ್ಥಿಗಳ ವಯಸ್ಸು 21 ರಿಂದ 30 ವರ್ಷಗಳ ನಡುವೆ ಇರಬೇಕು. ನಿಯಮಾವಳಿಗಳ ಪ್ರಕಾರ SC/ST ಗೆ 5 ವರ್ಷ, OBC ಗೆ 3 ವರ್ಷ ಮತ್ತು PwBD ಅಭ್ಯರ್ಥಿಗಳಿಗೆ ಗರಿಷ್ಠ 15 ವರ್ಷಗಳ ವಯೋಮಿತಿ ಸಡಿಲಿಕೆ ಸಿಗಲಿದೆ.

ವೇತನ ಶ್ರೇಣಿ ಮತ್ತು ಅರ್ಜಿ ಶುಲ್ಕ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಮೂಲ ವೇತನ ರೂ. 48,480 ರಿಂದ ಆರಂಭವಾಗಿ ರೂ. 85,920 ರವರೆಗೆ ಇರಲಿದೆ. ಇದರ ಜೊತೆಗೆ ಬ್ಯಾಂಕ್ ನಿಯಮಗಳ ಪ್ರಕಾರ ವಿವಿಧ ಭತ್ಯೆಗಳು ಸಿಗಲಿವೆ. ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ ರೂ. 850 ಹಾಗೂ SC, ST, PwBD, ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 175 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ವಿವಿಧ ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲು ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದಾದ ನಂತರ ಸೈಕೋಮೆಟ್ರಿಕ್ ಪರೀಕ್ಷೆ, ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ ಹಾಗೂ ಕೊನೆಯದಾಗಿ ಗುಂಪು ಚರ್ಚೆ (GD) ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಂತಿಮ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆನ್‌ಲೈನ್ ಲಿಖಿತ ಪರೀಕ್ಷಾ ವಿನ್ಯಾಸ:

ಆನ್‌ಲೈನ್ ಪರೀಕ್ಷೆಯು ಒಟ್ಟು 120 ನಿಮಿಷಗಳ ಕಾಲ ನಡೆಯಲಿದ್ದು, 120 ಬಹು ಆಯ್ಕೆ ಪ್ರಶ್ನೆಗಳಿಗೆ 120 ಅಂಕಗಳನ್ನು ನಿಗದಿಪಡಿಸಲಾಗಿದೆ. ಇಂಗ್ಲಿಷ್, ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ/ಆರ್ಥಿಕ ಜಾಗೃತಿ ಹಾಗೂ ತಾರ್ಕಿಕ ಮತ್ತು ಪರಿಮಾಣಾತ್ಮಕ ಆಪ್ಟಿಟ್ಯೂಡ್‌ ವಿಭಾಗಗಳಿಂದ ತಲಾ 30 ಪ್ರಶ್ನೆಗಳು ಬರಲಿವೆ. ಪ್ರತಿ ತಪ್ಪು ಉತ್ತರಕ್ಕೆ 0.25 ಋಣಾತ್ಮಕ (Negative) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 7ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ವೀಕ್ಷಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್