AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗಳ ಕೆಲಸದ ವೇಳೆ ಕಡಿತ: ಕೋವಿಡ್-19ರ ಪರಿಣಾಮ ತಗ್ಗಿಸಲು ಹಲವು ಕ್ರಮಗಳ ಶಿಫಾರಸು

ಬಿಹಾರದಲ್ಲಿ ಗರ್ಭಿಣಿಯರು ಮತ್ತು ಕೋವಿಡ್-19ರ ಆತಂಕ ಎದುರಿಸುತ್ತಿರುವವರಿಗೆ ಈಗಾಗಲೇ ವರ್ಕ್​ ಫ್ರಂ ಹೋಂ ಅವಕಾಶ ನೀಡಲಾಗಿದೆ. ಅಲ್ಲಿ ಕೆಲಸದ ಅವಧಿಯನ್ನೂ 10ರಿಂದ 2 ಗಂಟೆಗೆ ಸೀಮಿತಗೊಳಿಸಲಾಗಿದೆ.

ಬ್ಯಾಂಕ್​ಗಳ ಕೆಲಸದ ವೇಳೆ ಕಡಿತ: ಕೋವಿಡ್-19ರ ಪರಿಣಾಮ ತಗ್ಗಿಸಲು ಹಲವು ಕ್ರಮಗಳ ಶಿಫಾರಸು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 22, 2021 | 10:27 PM

Share

ಮುಂಬೈ: ಭಾರತದಲ್ಲಿ ಕೋವಿಡ್-19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಅಖಿಲ ಭಾರತ ಬ್ಯಾಂಕ್​​ಗಳ ಒಕ್ಕೂಟ (Indian Banks Association – IBA) ಬ್ಯಾಂಕ್​ಗಳಿಗೆ ಕೆಲಸದ ಅವಧಿಯನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಕ್ಕೆ ಸೀಮಿತಗೊಳಿಸಲು ಸಲಹೆ ನೀಡಿದೆ.

ಕೊರೊನಾ ವೈರಸ್​ನ ಹಲವು ರೂಪಾಂತರಗಳು ವೇಗವಾಗಿ ಹರಡುತ್ತಿವೆ. ನಾವು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿದ್ದೇವೆ. ಹಲವು ರಾಜ್ಯಗಳಲ್ಲಿ ಪ್ರತಿದಿನ ಗರಿಷ್ಠ ಪ್ರಮಾಣದ ಸೋಂಕು ವರದಿಯಾಗುತ್ತಿದೆ. ಆರ್ಥಿಕ ಚಟುವಟಿಕೆಗಳ ಬಗ್ಗೆಯೂ ನಮಗೆ ಕಾಳಜಿಯಿದೆ ಎಂದು ಐಬಿಎ ವಿವಿಧ ರಾಜ್ಯಗಳ ರಾಜ್ಯಮಟ್ಟದ ಬ್ಯಾಂಕಿಂಗ್ ಸಮಿತಿ (State Level Banking Committee – SLBC) ಪ್ರತಿನಿಧಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದೆ.

ಕಳೆದ ವರ್ಷ ರೂಪಿಸಿರುವ ಕೋವಿಡ್​ಗೆ ಸಂಬಂಧಿಸಿದ ಕಾರ್ಯನಿರ್ವಹಣಾ ನಿಯಮಗಳ ಜೊತೆಗೆ ತೆಗೆದುಕೊಳ್ಳಬೇಕಾದ ಇತರ ಕ್ರಮಗಳ ಕುರಿತು ಚರ್ಚಿಸಲು ಐಬಿಎ ಏಪ್ರಿಲ್ 21ರಂದು ವಿಶೇಷ ಕಾರ್ಯಕಾರಿ ಸಭೆಯನ್ನು ಕರೆದಿತ್ತು. ಕೆಲ ಹೆಚ್ಚುವರಿ ಕ್ರಮಗಳನ್ನು ಶಿಫಾರಸು ಮಾಡಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಇಡೀ ದೇಶದಲ್ಲಿ ಒಮ್ಮೆಲೆ ಲಾಕ್​ಡೌನ್ ಘೋಷಣೆಯಾಗಿಲ್ಲ. ಬದಲಿಗೆ ಪ್ರತಿ ರಾಜ್ಯವೂ ಕೊವಿಡ್-19 ಸೋಂಕಿನ ಸರಪಳಿ ತುಂಡರಿಸಲು ಸ್ಥಳೀಯವಾಗಿ ಕ್ರಮಗಳನ್ನು ಘೋಷಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ, ಒಂದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬ್ಯಾಂಕ್​ಗಳು ವಿವಿಧ ರೀತಿಯ ಶಿಷ್ಟಾಚಾರಗಳನ್ನು ಪಾಲಿಸಬೇಕಾಗಬಹುದು ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಯಿತು.

ಬ್ಯಾಂಕ್​ಗಳು ಇನ್ನು ಮುಂದೆಯೂ ಶಾಸನಬದ್ಧ ಸೇವೆಗಳಾದ ನಗದು ಸ್ವೀಕಾರ (ಡೆಪಾಸಿಟ್), ನಗದು ನೀಡಿಕೆ (ಕ್ಯಾಶ್ ವಿತ್​ಡ್ರಾವಲ್ಸ್​), ಪಾವತಿ (ರೆಮಿಟೆನ್ಸ್) ಮತ್ತು ಸರ್ಕಾರಿ ವ್ಯವಹಾರಗಳ ಸೇವೆಗಳನ್ನು ನೀಡಲಿವೆ. ರಾಜ್ಯಮಟ್ಟದ ಬ್ಯಾಂಕಿಂಗ್ ಸಮಿತಿಗಳು ಆಯಾ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿ ಹೆಚ್ಚುವರಿ ಸೇವೆಗಳ ಬಗ್ಗೆ ನಿರ್ಧರಿಸಬೇಕು. ಬ್ಯಾಂಕ್​ಗಳಿಗೆ ಉದ್ಯೋಗಿಗಳನ್ನು ರೊಟೇಶನ್​ ಪದ್ಧತಿ ಮೇಲೆ ಕೆಲಸಕ್ಕೆ ಕರೆಯಬಹುದು. ಸಾಧ್ಯವಿರುವೆಡೆ ಮನೆಯಿಂದಲೇ ಕೆಲಸಕ್ಕೆ (ವರ್ಕ್​ ಫ್ರಂ ಹೋಂ) ಅವಕಾಶ ಮಾಡಿಕೊಡಬೇಕು. ಬ್ಯಾಂಕ್​ ಶಾಖೆಗಳಲ್ಲಿ ಅರ್ಧದಷ್ಟು ಜನರಿಗೆ ವರ್ಕ್​ ಫ್ರಂ ಹೋಂ ವ್ಯವಸ್ಥೆಯಡಿ ಅವಕಾಶ ನೀಡಬೇಕು ಎಂದು ಸಭೆಯು ಶಿಫಾರಸು ಮಾಡಿದೆ.

ಕೆಲ ರಾಜ್ಯಗಳಲ್ಲಿ ಈಗಾಗಲೇ ಬ್ಯಾಂಕ್ ಸೇವೆಗಳ ಅವಧಿಯನ್ನು ಕಡಿತಗೊಳಿಸಲಾಗಿದೆ. ಬಿಹಾರದಲ್ಲಿ ಗರ್ಭಿಣಿಯರು ಮತ್ತು ಕೋವಿಡ್-19ರ ಆತಂಕ ಎದುರಿಸುತ್ತಿರುವವರಿಗೆ ಈಗಾಗಲೇ ವರ್ಕ್​ ಫ್ರಂ ಹೋಂ ಅವಕಾಶ ನೀಡಲಾಗಿದೆ. ಅಲ್ಲಿ ಕೆಲಸದ ಅವಧಿಯನ್ನೂ 10ರಿಂದ 2 ಗಂಟೆಗೆ ಸೀಮಿತಗೊಳಿಸಲಾಗಿದೆ.

ಕೆನರಾ ಬ್ಯಾಂಕ್ ಕೆಲಸದ ಅವಧಿ ಕಡಿತ ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನ ಸೇವಾ ಸಮಯ ಕಡಿತಗೊಳಿಸಲಾಗಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಇಂದಿನಿಂದ ಮೇ 31ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಕೆನರಾ ಬ್ಯಾಂಕ್‌ನಲ್ಲಿ ಶೇ.50ರಷ್ಟು ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಬೇಕೆಂದು ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಕೊರೊನಾ 2ನೆ ಅಲೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ಕೆಲವು ಕ್ರಮಗಳನ್ನು ಕೈಗೊಂಡಿದೆ. ಕೆನರಾ ಬ್ಯಾಂಕ್‌ನ ಸೇವಾ ಸಮಯ ಕಡಿತಗೊಳಿಸಲಾಗಿದೆ. ಹಾಗೂ ಕೇವಲ ಶೇ.50ರಷ್ಟು ಸಿಬ್ಬಂದಿ ಮಾತ್ರ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕೆಲವು ಬ್ಯಾಂಕ್ ನೌಕರರಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಲಾಗಿದೆ. ಪ್ರತಿ ಸಿಬ್ಬಂದಿ ಕೊರಾನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸೂಚನೆ ನೀಡಿದೆ.

(Banks advised to curb working hours as COVID-19 2nd wave spreads fast)

ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ‌ ಮಿಸ್ ಮಾಡದೇ ಓದಿ

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು