ಪಂಜಾಬ್ ಗವರ್ನರ್ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

|

Updated on: Feb 03, 2024 | 6:02 PM

ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್‌ನ ಗವರ್ನರ್ ಹುದ್ದೆಗೆ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಬನ್ವಾರಿಲಾಲ್ ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.

ಪಂಜಾಬ್ ಗವರ್ನರ್ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ
ಬನ್ವಾರಿಲಾಲ್ ಪುರೋಹಿತ್
Follow us on

ಚಂಡೀಗಢ ಫೆಬ್ರುವರಿ 03: ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ಶನಿವಾರ ಪಂಜಾಬ್ ಗವರ್ನರ್ (Punjab Governor) ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳನ್ನು ಉಲ್ಲೇಖಿಸಿ ಅವರು ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ ಪುರೋಹಿತ್ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್‌ನ ಗವರ್ನರ್ ಹುದ್ದೆಗೆ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ಅದನ್ನು ಸ್ವೀಕರಿಸಿ ಎಂದು ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.

ರಾಜ್ಯಪಾಲರು ಮತ್ತು ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ನಡುವೆ ತೀವ್ರವಾದ ವಾಕ್ಸಮರ ನಂತರ ರಾಜೀನಾಮೆ ನೀಡಲಾಗಿದೆ.


ಕಳೆದ ಆಗಸ್ಟ್‌ನಲ್ಲಿ, ಪುರೋಹಿತ್ ಮುಖ್ಯಮಂತ್ರಿಗೆ ಪತ್ರವನ್ನು ಕಳುಹಿಸಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಅವರ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಬಹುದು ಎಂದು ಎಚ್ಚರಿಸಿದರು.

ಮಾನ್‌ಗೆ ನೀಡಿದ ಇತ್ತೀಚಿನ ಸಂವಹನದಲ್ಲಿ, ರಾಜ್ಯಪಾಲ ಪುರೋಹಿತ್ ಅವರು ತಮ್ಮ ಹಿಂದಿನ ಪತ್ರಗಳಿಗೆ ಅವರಿಂದ ಯಾವುದೇ ಉತ್ತರವನ್ನು ಪಡೆಯುತ್ತಿಲ್ಲ ಎಂದು ಪುನರುಚ್ಚರಿಸಿದ್ದು, “ಸಾಂವಿಧಾನಿಕ ಕಾರ್ಯವಿಧಾನದ ವೈಫಲ್ಯ” ಕುರಿತು ರಾಷ್ಟ್ರಪತಿಗಳಿಗೆ ವರದಿಯನ್ನು ಕಳುಹಿಸಬಹುದು ಎಂದು ಎಚ್ಚರಿಸಿದರು.

ಇದನ್ನೂ ಓದಿ:Keragodu flag row: ಕೆರೆಗೋಡು ಪ್ರಕರಣ, ಮನೆಗಳ ಮೇಲೆ ಹನುಮಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು

ರಾಜ್ಯಪಾಲರು ರಾಜ್ಯದ “ಶಾಂತಿ-ಪ್ರೀತಿಯ ಜನರಿಗೆ ಬೆದರಿಕೆ ಹಾಕಿದ್ದಾರೆ” ಎಂದು ಮಾನ್ ಪತ್ರಕ್ಕೆ ಉತ್ತರಿಸಿದ್ದು , ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಒತ್ತಿ ಹೇಳಿದ್ದರು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ