Ajit Pawar Death: ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ಸಾವು

Maharashtra Plane Crash - ಮಹಾರಾಷ್ಟ್ರ ವಿಮಾನ ಅಪಘಾತ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಅಜಿತ್​​ ಪವಾರ್​​​ ಸಾವನ್ನಪ್ಪಿದ್ದಾರೆ ಎಂದು DGCA ಹೇಳಿದೆ.

Ajit Pawar Death: ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ಸಾವು
Ajit Pawar Plane

Updated on: Jan 28, 2026 | 10:13 AM

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ರೆಸಾರ್ಟ್​ ಮೇಲೆ ಭಾರಿ ಹಿಮಪಾತ

ANI ಎಕ್ಸ್​​​ ಖಾತೆ ಪೋಸ್ಟ್​ ಇಲ್ಲಿದೆ ನೋಡಿ

ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಚುನಾವಣೆ ನಿಮಿತ್ತ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಮಾನವು ರನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 9:39 am, Wed, 28 January 26